More

    ಬಿಆರ್‌ಎಸ್ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ!

    ನವದೆಹಲಿ: ಮದ್ಯನೀತಿ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಮೇ 14ರವರೆಗೆ ವಿಸ್ತರಿಸಲಾಗಿದೆ.

    ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಎನ್​ಕೌಂಟರ್: ಇಬ್ಬರು ಉಗ್ರಗಾಮಿಗಳ ಹತ್ಯೆ

    ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕೆ. ಕವಿತಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಮತ್ತು ಸಾಕ್ಷ್ಯವನ್ನು ಹಾಳು ಮಾಡಲು ಪ್ರಯತ್ನಿಸಬಹುದು ಎನ್ನುವ ಕಾರಣಕ್ಕೆ ಅವರಿಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್​ ನಿರಾಕರಿಸಿದೆ.

    ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನಲೆಯಲ್ಲಿ ಕೆ.ಕವಿತಾ ಅವರನ್ನು ಮಂಗಳವಾರ ಕೋರ್ಟ್​ ಎದುರು ಹಾಜರುಪಡಿಸಲಾಯಿತು. ಸಿಬಿಐ, , ಜಾರಿ ನಿರ್ದೇಶನಾಲಯವು ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ನ್ಯಾಯಾಂಗ ಬಂಧನ ಅವಧಿಯನ್ನು ಆದೇಶ ಹೊರಡಿಸಿದರು.
    ವಿಚಾರಣೆ ವೇಳೆ ಇಡಿ ತನಿಖೆಯ ಪ್ರಮುಖದ ಹಂತದಲ್ಲಿದೆ ಒಂದು ವಾರದ ಒಳಗಾಗಿ ಕವಿತಾ ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಬಹುದು ಎಂದು ತಿಳಿಸಿತು.

    ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮಾರ್ಚ್ 15 ರಂದು ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ (46) ಅವರನ್ನು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಿಂದ ಬಂಧಿಸಲಾಗಿತ್ತು.

    ಪ್ರಜ್ವಲ್‌ ರೇವಣ್ಣ ಬಗ್ಗೆ ಸಹನೆ ತೋರಬೇಕಾಗಿಲ್ಲ: ಕಾಂಗ್ರೆಸ್‌ನ ನಡೆಯನ್ನು ಪ್ರಶ್ನಿಸಿದ ಪ್ರಧಾನಿ ಮೋದಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts