More

    ‘ಅಂತೂ ನನ್ನ ಮಗಳಿಗೆ ನ್ಯಾಯ ಸಿಕ್ಕಿತು, ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಹೆಚ್ಚಿತು’; ಸಮಾಧಾನ ವ್ಯಕ್ತಪಡಿಸಿದ ನಿರ್ಭಯಾ ತಾಯಿ ಆಶಾದೇವಿ

    ನವದೆಹಲಿ: 2012ರ ಡಿಸೆಂಬರ್​ನಲ್ಲಿ ನಡೆದಿದ್ದ ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದ ಅಂತಿಮ ತೀರ್ಪು ಬರೋಬ್ಬರಿ ಏಳು ವರ್ಷಗಳ ಬಳಿಕ ಹೊರಬಿದ್ದಿದೆ.  ಜ.22ರಂದು ಎಲ್ಲ ಅಪರಾಧಿಗಳನ್ನೂ ಗಲ್ಲಿಗೇರಿಸುವಂತೆ ದೆಹಲಿ ಪಟಿಯಾಲಾ ನ್ಯಾಯಾಲಯ ಡೆತ್​ವಾರೆಂಟ್​ ಜಾರಿ ಮಾಡಿದೆ.

    ಈ ತೀರ್ಪು ಹೊರಬೀಳುತ್ತಲೇ ನಿರ್ಭಯಾ ತಾಯಿ ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ. ಅಂತೂ ನನ್ನ ಮಗಳಿಗೆ ನ್ಯಾಯ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

    ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆಯನ್ನು ಅಂತಿಮಗೊಳಿಸುವ ಮೂಲಕ ಮಹಿಳೆಯರ ಸುರಕ್ಷತೆಗೆ ಮಹತ್ವ ನೀಡಲಾಗಿದೆ. ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಹೆಚ್ಚಾಯಿತು. ನಮ್ಮ ಹೋರಾಟ ಮುಕ್ತಾಯವಾಯಿತು ಎಂದು ನಿರ್ಭಯಾ ತಾಯಿ ಆಶಾದೇವಿ ಹೇಳಿದ್ದಾರೆ.

    ಇಂದು ಪಟಿಯಾಲಾ ನ್ಯಾಯಾಲಯದ ತೀರ್ಪು ಹೊರಬೀಳುತ್ತಿದ್ದಂತೆ ನಾವು ಸುಪ್ರೀಂಕೋರ್ಟ್​ಗೆ ಕ್ಯುರೇಟಿವ್ ಅರ್ಜಿ ಸಲ್ಲಿಸುತ್ತೇವೆ ಎಂದು ಅಪರಾಧಿಗಳ ಪರ ವಕೀಲ ಎ.ಪಿ.ಸಿಂಗ್​ ಹೇಳಿದ್ದಾರೆ.

    ಆದರೆ ಏನೇ ಕಾನೂನು ಪ್ರಕಾರ ಯಾವುದೇ ಪ್ರಕ್ರಿಯೆ ನಡೆಸಲೂ ಅಪರಾಧಿಗಳಿಗೆ ಇರುವುದು ಇನ್ನು 14 ದಿನಗಳು ಮಾತ್ರ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts