More

    ನರೇಗಾ ಕೂಲಿ ಕಾರ್ವಿುಕರಿಗೆ ಕೆಲಸದಲ್ಲಿ ವಿನಾಯಿತಿ

    ರಟ್ಟಿಹಳ್ಳಿ: ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದರಿಂದ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವ ಕೂಲಿ ಕಾರ್ವಿುಕರಿಗೆ ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಎಚ್. ತಿಳಿಸಿದರು.

    ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಸಿಗೆ ಅವಧಿಯಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತಾಪಮಾನ ತೀವ್ರವಾಗಿರುತ್ತದೆ.

    ಹೀಗಾಗಿ ಕಲಬುರ್ಗಿ ಮತ್ತು ಬೆಳಗಾವಿ ವಿಭಾಗದ ಜಿಲ್ಲೆಗಳಲ್ಲಿ 2022-23ನೇ ಸಾಲಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವ ಕೂಲಿಕಾರರಿಗೆ ನಿಗದಿತ ಕೂಲಿ ಪಡೆಯಲು ನಿರ್ದಿಷ್ಟ ಪಡಿಸಲಾದ ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ನೀಡಲಾಗಿದೆ.

    ಸದ್ಯ ಬಿಸಿಲಿನ ತಾಪಮಾನವು ಹೆಚ್ಚಾಗುತ್ತಿರುವುದರಿಂದ ಕೂಲಿಕಾರರ ಆರೋಗ್ಯ ದೃಷ್ಟಿಯನ್ನು ಪರಿಗಣಿಸಿ 2022-23ನೇ ಸಾಲಿಗೆ ಈ ಯೋಜನೆಯಡಿ ಕೆಲಸ ನಿರ್ವಹಿಸುವ ಹಾವೇರಿ ಜಿಲ್ಲೆ ಹಾಗೂ ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲೂಕಿನಲ್ಲಿ ಕೂಲಿ ಕೆಲಸಗಾರರಿಗೆ ಅನ್ವಯಿಸಲಾಗುತ್ತಿದೆ.

    ಏಪ್ರಿಲ್, ಮೇ ತಿಂಗಳು ಶೇ. 30ರಷ್ಟು, ಜೂನ್ ತಿಂಗಳು ಶೇ. 20ರಷ್ಟು ನಿಗದಿತ ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ನೀಡಲಾಗಿದೆ. ಇದು ಹಿರಿಯ ನಾಗರಿಕರಿಗೆ, ಅಂಗವಿಕಲರು, ಗರ್ಭಿಣಿಯರು ಮತ್ತು ಬಾಣಂತಿಯರು ಈಗಾಗಲೇ ಕೆಲಸದ ಪ್ರಮಾಣದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಲಾಗಿದೆ.

    ಈ ಹೆಚ್ಚುವರಿ ರಿಯಾಯಿತಿ ಇವರಿಗೆ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.

    ಕೂಲಿ ಕಾರ್ವಿುಕರಿಗೆ ಆದ್ಯತೆ

    ಕಾಮಗಾರಿ ಸ್ಥಳದಲ್ಲಿ ಕೂಲಿಕಾರರಿಗೆ ಕಡ್ಡಾಯವಾಗಿ ನೆರಳು, ಶುದ್ಧ ಕುಡಿಯುವ ನೀರು, ಪ್ರಥಮ ಚಿಕಿತ್ಸೆ ಪೆಟ್ಟಿಗೆ ಇತ್ಯಾದಿ ಮೂಲ ಸೌಕರ್ಯಗಳನ್ನು ಕಡ್ಡಾಯವಾಗಿ ಒದಗಿಸಲು ತಾ.ಪಂ. ವತಿಯಿಂದ ಕ್ರಮವಹಿಸಲಾಗುತ್ತಿದೆ ಎಂದು ತಾಪಂ ಕಾನಿ ಅಧಿಕಾರಿ ಶಶಿಧರ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts