18.5 C
Bangalore
Monday, December 16, 2019

ನಿವೃತ್ತಿ ಅಂಚಿನ ಶಿಕ್ಷಕರಿಗೆ ವಿನಾಯಿತಿ ನೀಡಿ

Latest News

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಕಾಲೇಜ್ ಆವರಣದಲ್ಲಿ ಮದ್ಯದ ಸದ್ದು

ಮೊಳಕಾಲ್ಮೂರು: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿನ ಆವರಣ ಭದ್ರತೆ ಕೊರತೆಯ ಕಾರಣಕ್ಕೆ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ. ಈಚೆಗೆ ಕೆಲ ಕಿಡಿಗೇಡಿಗಳು ಕಾಲೇಜಿನ ಆವರಣದಲ್ಲಿರುವ...

ಕೊಳ್ಳೇಗಾಲ: ನಿವೃತ್ತಿ ಅಂಚಿನಲ್ಲಿರುವ ಶಿಕ್ಷಕರ ವರ್ಗಾವಣೆಗೆ ಸರ್ಕಾರ ವಿನಾಯಿತಿ ನೀಡಬೇಕು ಎಂದು ಶಾಸಕ ಆರ್.ನರೇಂದ್ರ ಆಗ್ರಹಿಸಿದರು.

ಪಟ್ಟಣದ ನ್ಯಾಷನಲ್ ಶಾಲಾ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಕ್ಕಳಿಗೆ ಶುಭಕೋರಿ ಮಾತನಾಡಿದರು.

ಕೆಲ ಶಿಕ್ಷಕರು ನಿವೃತ್ತಿ ಹೊಂದಲು 6 ತಿಂಗಳು ಬಾಕಿ ಇರುವುದನ್ನು ಅರಿಯದೆ ರಾಜ್ಯ ಸರ್ಕಾರ ದೂರದ ಊರುಗಳಿಗೆ ವರ್ಗಾವಣೆ ಮಾಡಿರುವುದು ಸರಿಯಲ್ಲ. ಅದನ್ನು ಮಾರ್ಪಾಡು ಮಾಡಬೇಕು. ಈ ಬಗ್ಗೆ ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಅವರಲ್ಲಿ ಮನವಿ ಮಾಡಿದ್ದೇನೆ. ಇದಕ್ಕೆ ಅವರು, 55 ವರ್ಷ ಪ್ರಾಯ ಮೀರಿದವರನ್ನು ವರ್ಗಾವಣೆ ಮಾಡುವುದಿಲ್ಲ. ವರ್ಗಾವಣೆಯಾಗಿರುವ ಶಿಕ್ಷಕರನ್ನು ವಾಪಸ್ ಅವರಿದ್ದ ಸ್ಥಳಕ್ಕೆ ಕಳುಹಿಸುತ್ತೇನೆ ಎಂದು ವಾಗ್ದಾನ ನೀಡಿದ್ದಾರೆಂದು ಹೇಳಿದರು.

ಬೇಡಿಕೆ ಮುಂದಿಟ್ಟ ಶಾಸಕ: ಸಮಾರಂಭದಲ್ಲಿ ಪಾಲ್ಗೊಂಡಿದ್ದ ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಅವರಿಗೆ ಶಾಸಕ ಎನ್.ಮಹೇಶ್, ತಮ್ಮ ಕ್ಷೇತ್ರ ವ್ಯಾಪ್ತಿಯ ಕೆಲವೆಡೆ ಹೊಸದಾಗಿ ಶಾಲೆ ಮತ್ತು ಕಾಲೇಜುಗಳನ್ನು ಆರಂಭಿಸುವ ಕುರಿತು ಲಿಖಿತ ಬೇಡಿಕೆ ಪತ್ರ ಮುಂದಿಟ್ಟರು.

ಪಟ್ಟಣದ ಎಂಜಿಎಸ್‌ವಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕಟ್ಟಡಕ್ಕೆ ಮೂಲ ಸೌಕರ್ಯ ಕಲ್ಪಿಸಲು 2 ಕೋಟಿ ರೂ. ಅನುದಾನ ನೀಡಬೇಕು. ಮುಡಿಗುಂಡದ ಆದರ್ಶ ವಿದ್ಯಾಲಯಕ್ಕೆ ಕಾಂಪೌಂಡ್ ನಿರ್ಮಿಸಿ. ಬಿಇಒ ಕಚೇರಿಗೆ ಹೊಸ ಕಟ್ಟಡ, ಟಗರಪುರ ಗ್ರಾಮದಲ್ಲಿ ಹೊಸದಾಗಿ ಪ್ರೌಢಶಾಲೆ ತೆರೆಯುವುದು ಹಾಗೂ ಮುಳ್ಳೂರು, ಕೆಸ್ತೂರು, ಹೊಂಗನೂರು ಗ್ರಾಮಗಳಲ್ಲಿ ಪದವಿ ಪೂರ್ವ ಕಾಲೇಜು ತೆರೆಯುವಂತೆ ಮನವಿ ಮಾಡಿದರು.

ಬಿಇಒಗೆ ತಿರುಗೇಟು: ಪ್ರತಿಭಾ ಕಾರಂಜಿ ಸಮಾರಂಭದಲ್ಲಿ ಪಾಲ್ಗೊಂಡಿದ್ದವರನ್ನು ಬಿಇಒ ಚಂದ್ರಪಾಟೀಲ್ ಸ್ವಾಗತಿಸುವ ವೇಳೆ ನಮ್ಮವರೇ ಆದ ಶಾಸಕ ಎನ್.ಮಹೇಶ್ ಅವರು ಕಳೆದ ವರ್ಷ ಶಿಕ್ಷಣ ಸಚಿವರಾಗಿದ್ದಾಗ ಪ್ರತಿಭಾ ಕಾರಂಜಿ ಉದ್ಘಾಟಿಸಿದ್ದರು. ಇದೀಗ ಹೊಸ ಸಚಿವರಾದ ಸುರೇಶ್‌ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದ್ದು ಸಂತಸ ತಂದಿದೆ ಎಂದರು.

ಇದನ್ನು ಸೂಕ್ಷ್ಮವಾಗಿ ಗಮಿಸಿದ ಶಿಕ್ಷಣ ಸಚಿವ, ತಾವು ಭಾಷಣ ಮಾಡುವಾಗ ಬಿಇಒ ಮಾತಿಗೆ ಅಸಮಾಧಾನದ ತಿರುಗೇಟು ನೀಡಿದರು. ಎನ್.ಮಹೇಶ್ ಅವರಂತೆ ನಾನು ನಿಮ್ಮವರೇ ಆದ ಸಚಿವ ಯಾವಾಗ ಆಗುತ್ತೇನೆ ಹೇಳಿ ಎಂದು ನಯವಾಗಿಯೇ ಪ್ರಶ್ನಿಸಿದರು.

ಇದು ಸಮಾರಂಭದ ನಂತರವೂ ಚರ್ಚೆಗೆ ಗ್ರಾಸವಾಯಿತು. ಹಿಂದೆಲ್ಲ ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಶಾಸಕ ಎನ್.ಮಹೇಶ್ ಅವರನ್ನು ಮಹೇಶಣ್ಣ ಅವರೇ ಎಂದು ಸಂಭೋಧಿಸಿ, ಶಾಸಕ ಆರ್.ನರೇಂದ್ರ ಅವರಿಂದ ಛೀಮಾರಿಗೊಳಗಾದ ಬಿಇಒ ಮತ್ತೆ ನಮ್ಮವರೇ ಆದ ಎಂಬ ಪದ ಬಳಸಿ ಪೇಚಿಗೆ ಸಿಲುಕಿದರು.
ಜಿಪಂ ಅಧ್ಯಕ್ಷೆ ಶಿವಮ್ಮ ಕೃಷ್ಣ, ಸದಸ್ಯೆ ಇರ್ಷಾದ್‌ಭಾನು, ತಾಪಂ ಅಧ್ಯಕ್ಷ ರಾಜೇಂದ್ರ, ಕೃಷ್ಣಪ್ಪ, ಪ್ರಭಾರ ಡಿಡಿಪಿಐ ಪಿ.ಮಂಜುನಾಥ್, ಬಿಆರ್‌ಸಿ ಮಂಜುಳಾ, ಡಿವೈಎಸ್ಪಿ ಎನ್.ನವೀನ್‌ಕುಮಾರ್ ಮತ್ತಿತರರು ಹಾಜರಿದ್ದರು.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...