ವ್ಯಾಯಾಮದಿಂದ ಆರೋಗ್ಯವರ್ಧನೆ

hebri
Published on

ಹೆಬ್ರಿ: ಕ್ರೀಡೆಯಿಂದ ವ್ಯಕ್ತಿ ಕ್ರಿಯಾಶೀಲನಾಗುತ್ತಾನೆ. ದೈಹಿಕ ಚಟುವಟಿಕೆ, ವ್ಯಾಯಾಮ ಆರೋಗ್ಯವರ್ಧನೆಗೆ ಉತ್ತಮ ವೆಚ್ಚರಹಿತ ಮಾರ್ಗ. ಜೀವನದ ಅನೇಕ ಪಾಠಗಳನ್ನು ವಿದ್ಯಾರ್ಥಿಗಳಿಗೆ ಕ್ರೀಡೆ ಕಲಿಸುತ್ತದೆ ಎಂದು ಪೂರ್ಣಪ್ರಜ್ಞ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಸುಕುಮಾರ್ ಹೇಳಿದರು.

ಸರ್ಕಾರಿ ಪ್ರಥಮದರ್ಜೆ ಕಾಲೇಜು ಹೆಬ್ರಿ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು. ಪ್ರಾಂಶುಪಾಲ ಡಾ.ವಿದ್ಯಾಧರ ಹೆಗ್ಡೆ ಎಸ್. ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಪ್ರವೀಣ್ ಕುಮಾರ್ ಎಸ್., ದೈಹಿಕ ಶಿಕ್ಷಣ ನಿರ್ದೇಶಕರಾದ ವೀರಾಂಜಿನಿ ಪಿ., ಕ್ರೀಡಾ ಕಾರ್ಯದರ್ಶಿಗಳಾದ ಪ್ರತೀಕ್, ರಕ್ಷಿತಾ ಉಪಸ್ಥಿತರಿದ್ದರು. ಕ್ರೀಡಾ ಸಮಿತಿ ಸಂಚಾಲಕ ಬಾಲರಾಜ್ ಡಿ.ಬಿ. ಸ್ವಾಗತಿಸಿದರು. ಆಂತರಿಕ ಗುಣಮಟ್ಟ ಕೋಶದ ಸಂಚಾಲಕ ಡಾ.ಗಣೇಶ್ ಎಸ್. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net