ಫೆ.16ಕ್ಕೆ ಎಲೆಕ್ಟ್ರಿಕ್ ವಾಹನಗಳ ಪ್ರದರ್ಶನ, ಶ್ರೀತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್ ಸಾಲಮೇಳ

electric
Published on

ಬೆಂಗಳೂರು: ಮಾಲಿನ್ಯವನ್ನು ಗಣನೀಯವಾಗಿ ಕಡಿಮೆ ಮಾಡುವ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಪ್ರದರ್ಶನ ಮತ್ತು ಬೃಹತ್ ಸಾಲಮೇಳವನ್ನು ಶ್ರೀತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್ ಭಾನುವಾರ (ಫೆ.16) ಆಯೋಜಿಸಿದೆ.

ಸ್ವಉದ್ಯೋಗ ಮಾಡಲಿಚ್ಛಿಸುವವರಿಗೆ ಸದುಪಯೋಗವಾಗಬೇಕೆಂಬ ಕಾರಣಕ್ಕೆ ಈ ವಿದ್ಯುತ್ ಚಾಲಿತ ವಾಹನಗಳ ಪ್ರದರ್ಶನ ಏರ್ಪಡಿಸಲಾಗಿದ್ದು, ಈ ಮುಖೇನ ಆಸಕ್ತರಿಗೆ ಸಾಲ ಸೌಲಭ್ಯ ನೀಡಲು ಬ್ಯಾಂಕ್ ಮುಂದಾಗಿದೆ.

ಮೇಳದಲ್ಲಿ ಎಲ್ಲಾ ರೀತಿಯ ಎಲೆಕ್ಟ್ರಿಕ್ ವಾಹನಗಳಾದ ದ್ವಿಚಕ್ರವಾಹನ, ಆಟೋ, ಗೂಡ್ಸ್ ವಾಹನ, ನಾಲ್ಕು ಚಕ್ರದ ವಾಹನಗಳಿಗೆ ಆಕರ್ಷಕ ಬಡ್ಡಿ ದರಗಳಲ್ಲಿ ಸಾಲ ಸೌಲಭ್ಯ ಒದಗಿಸಲಾಗುವುದು.

ವಿದ್ಯಾಪೀಠ ಸರ್ಕಲ್ ಸಮೀಪದ ಬಿ.ಬಿ.ಎಂ.ಪಿ, ಆಟದ ಮೈದಾನದಲ್ಲಿ ಹಮ್ಮಿಕೊಂಡಿರುವ ಮೇಳವನ್ನು ಅಂದು ಬೆಳಗ್ಗೆ 9 ಗಂಟೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದು, ಮುಖ್ಯಅತಿಥಿಗಳಾಗಿ ಕರ್ನಾಟಕ ರಾಜ್ಯ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಸಂಸದ ತೇಜಸ್ವಿ ಸೂರ್ಯ, ವಿಜಯವಾಣಿ ಸಂಪಾದಕ ಚನ್ನೇಗೌಡ ಶಾಸಕ ರವಿಸುಬ್ರಮಣ್ಯಮತ್ತಿತರರು ಭಾಗವಹಿಸಲಿದ್ದಾರೆ.

ಬೆಂಗಳೂರು ದಕ್ಷಿಣ ವಿಭಾಗದ ಎಲ್ಲಾ ಸಹಕಾರ ಬ್ಯಾಂಕುಗಳ ಮತ್ತು ಕ್ರೆಡಿಟ್ ಸಹಕಾರ ಸೊಸೈಟಿಗಳ ನಿರ್ದೇಶಕ ಮಂಡಳಿಯವರು ಮೇಳದಲ್ಲಿ ಉಪಸ್ಥಿತರಿರುತ್ತಾರೆ. ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಬ್ಯಾಂಕಿನ ಶಾಖೆಗಳನ್ನು ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net