ನವದೆಹಲಿ: ರಾಷ್ಟ್ರವ್ಯಾಪಿ ತೀವ್ರ ಗದ್ದಲ ಎಬ್ಬಸಿರುವ ಕಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ರಾಝೀನಾಮೆಗೆ ಹೆಚ್ಚಿನ ಆಗ್ರಹ ಕೇಳಿ ಬರುತ್ತಿದ್ದು, ಅತ್ಯಾಚಾರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹ ಕೇಳಿ ಬರುತ್ತಿದೆ. ಈ ಸಂಬಂಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಠಿಣ ಕಾನೂನು ಜಾರಿಗೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಸಂಬಂಧ ಉತ್ತರಿಸಿರುವ ಕೇಂದ್ರ ಸರ್ಕಾರ ಮಮತಾ ಬ್ಯಾನರ್ಜಿಗೆ ತಿರುಗೇಟು ನೀಡಿದೆ.
ಮಮತ ಬ್ಯಾನರ್ಜಿ ಪತ್ರಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ, ಅತ್ಯಾಚಾರ ಪ್ರಕರಣಗಳನ್ನು ಮತ್ತು ಲೈಂಗಿಕತೆಯಿಂದ ಮಕ್ಕಳ ರಕ್ಷಣೆಗೆ ಮೀಸಲಾಗಿರುವ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯಗಳ (ಎಫ್‌ಟಿಎಸ್‌ಸಿ) ಸ್ಥಾಪನೆ ಮತ್ತು ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಕರೆ ನೀಡಿದ್ದಾರೆ. ರಾಜ್ಯದಲ್ಲಿ ಅಪರಾಧಗಳ (ಪೋಕ್ಸೊ) ಕಾಯ್ದೆಯನ್ನು ಮತ್ತಷ್ಟು ಬಲಗೊಳಿಸಿ.
ಇದನ್ನೂ ಓದಿ: ಜೆಡಿಎಸ್ ಕಾರ್ಯಾಧ್ಯಕ್ಷೆ ಎಂದು ಹೇಳಿ 8 ಮದುವೆಯಾಗಿ 38 ಕೋಟಿ ರೂ. ವಂಚನೆ! ಇದು ಖತರ್ನಾಕ್ ಲೇಡಿಯ ಕರಾಳ ಮುಖ
ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಸೇರಿದಂತೆ ಕೇಂದ್ರ ಶಾಸನವು ಅಪರಾಧದ ತೀವ್ರತೆಗೆ ಅನುಗುಣವಾಗಿ ಅತ್ಯಾಚಾರಕ್ಕೆ ಜೀವಾವಧಿ ಶಿಕ್ಷೆ ಅಥವಾ ಮರಣ ಸೇರಿದಂತೆ ಕಠಿಣ ಶಿಕ್ಷೆಗಳನ್ನು ಈಗಾಗಲೇ ಜಾರಿಯಲ್ಲಿವೆ. ಎಫ್‌ಐಆರ್ ದಾಖಲಿಸಿದ ಎರಡು ತಿಂಗಳೊಳಗೆ ವಿಧಿವಿಜ್ಞಾನ ಪರೀಕ್ಷೆಗಳು ಸೇರಿದಂತೆ ತನಿಖೆಗಳನ್ನು ಪೂರ್ಣಗೊಳಿಸಬೇಕು ಮತ್ತು ಚಾರ್ಜ್‌ಶೀಟ್ ಸಲ್ಲಿಸಿದ ಎರಡು ತಿಂಗಳೊಳಗೆ ವಿಚಾರಣೆ ನಡೆಸಬೇಕು.
ಸಂತ್ರಸ್ತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮತ್ತು ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ಬಲಪಡಿಸಲು ಈ ಕೇಂದ್ರ ಕಾನೂನುಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕೆಂದು ನಾನು ಪಶ್ಚಿಮ ಬಂಗಾಳ ಸರ್ಕಾರವನ್ನು ವಿನಂತಿಸಿಕೊಳ್ಳುತ್ತೇನೆ ಎಂದು ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಮಮತಾ ಬ್ಯಾನರ್ಜಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.