More

    ದುಬಾರಿ ತೆರಿಗೆ ರದ್ದುಗೊಳಿಸಿ

    ಬೆಳಗಾವಿ: ಸರ್ಕಾರ ಮ್ಯಾಕ್ಸಿಕ್ಯಾಬ್‌ಗಳಿಗೆ ವಿಧಿಸಿರುವ ದುಬಾರಿ ತೆರಿಗೆ ರದ್ದು ಮಾಡುವಂತೆ ಒತ್ತಾಯಿಸಿ ಉತ್ತರ ಕರ್ನಾಟಕ ಮ್ಯಾಕ್ಸಿಕ್ಯಾಬ್ ಮಾಲೀಕರ ಒಕ್ಕೂಟದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟಿಸಿದರು. ಬಳಿಕ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

    ಹಲವು ದಶಕಗಳಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮ್ಯಾಕ್ಸಿಕ್ಯಾಬ್ ನಡೆಸುತ್ತ ಜೀವನ ನಡೆಸುತ್ತಿದ್ದೇವೆ. ಕರ್ನಾಟಕ ಮೋಟಾರು ವಾಹನ ನಿಯಮ 1989ರ 151 (2)ರಿಂದ ವಿನಾಯತಿ ಪಡೆದು 12+1 ಸಾಮರ್ಥ್ಯವುಳ್ಳ ಮ್ಯಾಕ್ಸಿಕ್ಯಾಬ್‌ಗಳನ್ನು ನೋಂದಣಿ ಮಾಡಿಕೊಂಡು ಪರವಾನಗಿ ಪಡೆದುಕೊಂಡಿದ್ದೇವೆ. ಇದೇ ಉದ್ಯೋಗ ನಂಬಿಕೊಂಡು 18 ಸಾವಿರ ಕುಟುಂಬಗಳು ಜೀವನ ಸಾಗಿಸುತ್ತಿವೆ. ಆದರೆ, ಸರ್ಕಾರ ಮ್ಯಾಕ್ಸಿಕ್ಯಾಬ್‌ಗಳಿಗೆ ದುಬಾರಿ ತೆರಿಗೆ ವಿಧಿಸಿದೆ. ಕರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಮಾಲೀಕರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜತೆಗೆ 6 ತಿಂಗಳಿಂದ ಮ್ಯಾಕ್ಸಿಕ್ಯಾಬ್ ಆರಂಭಿಸಲು ಅನುಮತಿ ನೀಡಿಲ್ಲ. ಈ ಕುರಿತು ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿಕೊಳ್ಳಲಾಗಿದೆ. ಆದರೆ, ಇದುವರೆಗೂ ಸೂಕ್ತ ಕ್ರಮಕ್ಕೆ ಮುಂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ದುಬಾರಿ ತೆರಿಗೆ ರದ್ದುಪಡಿಸಬೇಕು. 6 ತಿಂಗಳ ವಾಹನಗಳ ವಿಮೆ ಮೊತ್ತವನ್ನು ಸರ್ಕಾರ ಭರಿಸಬೇಕು. ಈ ಅವಧಿಯ ವಾಹನಗಳ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಬೇಕು. ಈ ಬೇಡಿಕೆಗಳನ್ನು ಅ. 1ರ ಒಳಗೆ ಈಡೇರಿಸದ್ದಿದರೆ ಡಿಸಿ ಕಚೇರಿ ಬಳಿ ಆಯಾ ಜಿಲ್ಲೆಗಳಮ್ಯಾಕ್ಸಿಕ್ಯಾಬ್ ಮಾಲೀಕರು ವಾಹನ ನಿಲುಗಡೆ ಮಾಡಿ ಪ್ರತಿಭಟಿಸುತ್ತೇವೆ ಎಂದು ಎಚ್ಚರಿಸಿದರು. ಒಕ್ಕೂಟದ ಅಧ್ಯಕ್ಷ ಸಿ.ಎಸ್.ರಾಚಣ್ಣವರ, ಎಚ್.ಎಂ. ತೋಪಿನಕಟ್ಟಿ, ಪ್ರವೀಣ ಫಡಕೆ, ರಿಯಾಜಾ ಅಹ್ಮದ್ ಹಿರೇಕುಡಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts