More

    ಕಾರ್ಖಾನೆಯಲ್ಲಿ ಭೀಕರ ಸ್ಫೋಟ, 13 ಕಾರ್ಮಿಕರ ಸಾವು: ರಾಷ್ಟ್ರಪತಿ, ಪ್ರಧಾನಿಯಿಂದ ಸಂತಾಪ

    ಲಖನೌ: ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 13 ಕಾರ್ಮಿಕರು ಬಲಿಯಾಗಿದ್ದು, 30 ಮಂದಿ ಗಾಯಗೊಂಡಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ಭೀಕರ ದೃಶ್ಯವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.

    ಉತ್ತರ ಪ್ರದೇಶದ ಹಪುರ್​​ ಜಿಲ್ಲೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಯುಪಿಎಸ್​ಐಡಿಸಿ ಕಾರ್ಖಾನೆಯಲ್ಲಿ ಶನಿವಾರ ಸಂಜೆ ಈ ದುರಂತ ಸಂಭವಿಸಿದೆ.ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಮೇಲ್ಛಾವಣಿ ಛಿದ್ರ ಛಿದ್ರವಾಗಿದ್ದು, ಜನರು 13 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಘಟನೆಯಲ್ಲಿ ಮೃತಪಟ್ಟವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್​, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೊಗಿ ಆದಿತ್ಯನಾಥ್​​ ಸಂತಾಪ ಸೂಚಿಸಿದ್ದಾರೆ.

    ಎಲೆಕ್ಟ್ರಾನಿಕ್​ ಉತ್ಪನ್ನಗಳನ್ನು ತಯಾರಿಸಲು ಕಾರ್ಖಾನೆ ಪರವಾನಗಿ ಪಡೆದಿತ್ತು, ಆದರೆ ಇದರಲ್ಲಿ ಪಟಾಕಿ ತಯಾರಿಸಲಾಗುತ್ತಿತ್ತು, ಇದರಿಂದ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

    ಸದ್ಯ ಮಾಲೀಕ ನಾಪತ್ತೆಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗಿದೆ. ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಹೇಳಿದ್ದಾರೆ. (ಏಜೆನ್ಸೀಸ್​)

    ಸಿಬಿಐ ದಾಖಲಾತಿಯಲ್ಲಿ ಸತ್ತ ಮಹಿಳೆ, ನ್ಯಾಯಾಲಯದ ಮುಂದೆ ಹಾಜರು! ಗಾಬರಿಯಾದ್ರು ಅಧಿಕಾರಿಗಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts