ಕಲ್ಲು ಕ್ವಾರಿಯಲ್ಲಿ ಭೀಕರ ಸ್ಫೋಟ; ಹಲವರು ಮೃತಪಟ್ಟಿರುವ ಶಂಕೆ

ಚೆನ್ನೈ: ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಅನೇಕ ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ಕರಿಯಾಪಟ್ಟಿ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಕ್ವಾರಿ ಕೆಲಸಕ್ಕಾಗಿ ಸ್ಫೋಟಕಗಳನ್ನು ಒಂದು ಕೊಠಡಿಯಲ್ಲಿ ಶೇಖರಿಸಲಾಗಿತ್ತು. ಶೇಖರಣಾ ಕೊಠಡಿಯಲ್ಲಿ ಸ್ಫೋಟಕಗಳಿದ್ದು ಅಲ್ಲೇ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಸ್ತುತ ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಅವಶೇಷಗಳನ್ನು ಎಚ್ಚರಿಕೆಯಿಂದ ತೆರವುಗೊಳಿಸಲಾಗುತ್ತಿದೆ. ಓವರ್​ಲೋಡ್​ ಟ್ರಕ್​ ಹಾಗೂ … Continue reading ಕಲ್ಲು ಕ್ವಾರಿಯಲ್ಲಿ ಭೀಕರ ಸ್ಫೋಟ; ಹಲವರು ಮೃತಪಟ್ಟಿರುವ ಶಂಕೆ