

Explosion: ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಪಶಮೈಲಾರಂ ಕೈಗಾರಿಕಾ ಎಸ್ಟೇಟ್ನಲ್ಲಿರುವ ಔಷಧೀಯ ಕೈಗಾರಿಕಾ ಘಟಕದಲ್ಲಿ ಸೋಮವಾರ ಸಂಭವಿಸಿದ ದೊಡ್ಡ ಸ್ಫೋಟದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದು, 10 ಮಂದಿ ಸ್ಥಿತಿ ಗಂಭೀರವಾಗಿದೆ ಮತ್ತು ಇತರ 34 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ಮೈಕ್ರೋಕ್ರಿಸ್ಟಲಿನ್ ಸೆಲ್ಯುಲೋಸ್ (MCC) ಮತ್ತು ಇತರ ಫಾರ್ಮಾ ಎಕ್ಸಿಪೈಂಟ್ಗಳು, ಆಹಾರ ಪದಾರ್ಥಗಳು ಮತ್ತು ಸೌಂದರ್ಯವರ್ಧಕ ಉತ್ಪನ್ನಗಳ ಪ್ರಮುಖ ತಯಾರಕರಾದ ಸಿಗಾಚಿ ಇಂಡಸ್ಟ್ರೀಸ್ ಲಿಮಿಟೆಡ್ನ'' ಉತ್ಪಾದನಾ ಘಟಕದಲ್ಲಿ ಈ ಘಟನೆ ನಡೆದಿದೆ.
ಆರೋಗ್ಯ ಸಚಿವ ಮಾತನಾಡಿ, ರಕ್ಷಣಾ ತಂಡಗಳು 10 ಶವಗಳನ್ನು ಹೊರತೆಗೆದಿವೆ ಮತ್ತು ಇತರ ಇಬ್ಬರು ಕಾರ್ಮಿಕರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪತಂಚೇರು, ಇಸ್ನಾಪುರ ಮತ್ತು ಚಂದನಗರದ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಇನ್ನೂ 34 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರಲ್ಲಿ ಕನಿಷ್ಠ 10 ಜನರ ಸ್ಥಿತಿ ಗಂಭೀರವಾಗಿದೆ. ಇನ್ನು "ಘಟನೆಯ ಸಮಯದಲ್ಲಿ ಒಟ್ಟು 90 ಉದ್ಯೋಗಿಗಳು ಕರ್ತವ್ಯದಲ್ಲಿದ್ದರು ಎಂದು ವರದಿಯಾಗಿದೆ" ಎಂದು ಅವರು ಹೇಳಿದರು.(ಏಜೆನ್ಸೀಸ್)