ಇಂಟರ್​ಸಿಟಿ ರೈಲಿನಲ್ಲಿ ಸ್ಫೋಟ: 11 ಜನರಿಗೆ ಗಾಯ

ಗುವಾಹತಿ: ಅಸ್ಸಾಂನ ಉದಲಗುರಿ ಜಿಲ್ಲೆಯಲ್ಲಿ ಕಾಮಕ್ಯ-ದೇಕರ್​ಗಾವ್​ ಇಂಟರ್​ಸಿಟಿ ಎಕ್ಸ್​ಪ್ರೆಸ್​ನಲ್ಲಿ ಸ್ಫೋಟ ಸಂಭವಿಸಿದ್ದು, ಅವಘಡದಲ್ಲಿ 11 ಜನರು ಗಾಯಗೊಂಡಿದ್ದಾರೆ.

ಶನಿವಾರ ಸಂಜೆ 6.45ರ ಸುಮಾರಿಗೆ ಚಲಿಸುತ್ತಿದ್ದ ರೈಲಿನ ಬೋಗಿಯೊಂದರಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟ ಸಂಭವಿಸಿದ ಸ್ಥಳದ ರಾಜಧಾನಿ ಗುವಾಹತಿಯಿಂದ ಸುಮಾರು 95 ಕಿ.ಮೀ. ದೂರದಲ್ಲಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಟ್ರತ್ರೆಗೆ ದಾಖಲಿಸಲಾಗಿದೆ. ಓರ್ವ ಪ್ರಯಾಣಿಕನಿಗೆ ಗಂಭೀರವಾದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಮತ್ತು ಸ್ಥಳೀಯ ಪೊಲೀಸರು ತೆರಳಿದ್ದು, ಸ್ಫೋಟ ಹೇಗೆ ಸಂಭವಿಸಿದೆ ಎಂದು ತನಿಖೆ ನಡೆಸುತ್ತಿದ್ದಾರೆ. ಬಾಂಬ್​ ಸ್ಫೋಟ ಅಥವಾ ಶಾರ್ಟ್​ ಸರ್ಕ್ಯೂಟ್​ನಿಂದ ಸ್ಫೋಟ ಸಂಭವಿಸಿದೆಯೇ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ವಾಯುವ್ಯ ರೈಲ್ವೆಯ ಪಿಆರ್​ಒ ನ್ರಿಪಿನ್​ ಭಟ್ಟಾಚಾರ್ಯ ತಿಳಿಸಿದ್ದಾರೆ. (ಏಜೆನ್ಸೀಸ್​)