ಶಿಗ್ಗಾಂವಿ (ಗ್ರಾ): ಶಿಗ್ಗಾಂವಿ ಮಾಜಿ ಶಾಸಕ ಸೈಯದ್ ಅಜೀಮಪೀರ್ ಖಾದ್ರಿ ಅವರನ್ನು ಕಾಂಗ್ರೆಸ್‌ನಿಂದ ಉಚ್ಚಾಟಿಸಿದ್ದ ಆದೇಶ ಹಿಂಪಡೆಯಲಾಗಿದೆ. ಈ ಕುರಿತು ಶಿಸ್ತು ಸಮಿತಿ ಅಧ್ಯಕ್ಷ ಕೆ. ರೆಹಮಾನಖಾನ್ ಅವರು ಹಾವೇರಿ ಜಿಲ್ಲಾ ಅಧ್ಯಕ್ಷ ಎಂ.ಎಂ. ಹಿರೇಮಠ ಅವರಿಗೆ ಆದೇಶದ ಪ್ರತಿ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ವಿಧಾನಸಭೆ ಚುನಾವಣೆಯಲ್ಲಿ ಶಿಗ್ಗಾಂವಿ-ಸವಣೂರು ಕ್ಷೇತ್ರಕ್ಕೆ ಯಾಸೀರಖಾನ್ ಪಠಾಣ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಾಂಗ್ರೆಸ್ ಕಣಕ್ಕೆ ಇಳಿಸಿತ್ತು. ಆಗ ಮಾಜಿ ಶಾಸಕ ಸೈಯದ್ ಅಜೀಮಪೀರ್ ಖಾದ್ರಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ, ಖಾದ್ರಿ ಅವರನ್ನು ಮೇ 12ರಂದು ಶಿಸ್ತು ಸಮಿತಿ ಅಧ್ಯಕ್ಷ ಕೆ. ರೆಹಮಾನ್ ಖಾನ್ ಆರು ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟನೆ ಮಾಡಿ, ಆದೇಶ ಹೊರಡಿಸಿದ್ದರು.
ಜು. 4ರಂದು ನಡೆದಿದ್ದ ಶಿಸ್ತು ಸಮಿತಿ ಸಭೆಯಲ್ಲಿ ನಿರ್ಣಯದಂತೆ ಮಾಜಿ ಶಾಸಕ ಸೈಯದ್ ಅಜೀಮಪೀರ್ ಖಾದ್ರಿ ಉಚ್ಚಾಟನೆ ಆದೇಶ ಹಿಂಪಡೆದು ಶಿಸ್ತು ಸಮಿತಿ ಅಧ್ಯಕ್ಷ ಕೆ. ರೆಹಮಾನ್‌ಖಾನ್ ಆದೇಶ ಹೊರಡಿಸಿದ್ದಾರೆ.