ತಲೆಬುರುಡೆ ಪ್ರಕರಣದ ತನಿಖೆ ಕೇರಕ್ಕೆ ವಿಸ್ತರಣೆ

Published on

ಮಂಗಳೂರು: ಧರ್ಮಸ್ಥಳ ಗ್ರಾಮದ ತಲೆಬುರುಡೆ ಪ್ರಕರಣದದ ತನಿಖೆ ಕೇರಳಕ್ಕೂ ವಿಸ್ತರಿಸಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಪಾವಿತ್ರೃತೆಗೆ ಧಕ್ಕೆ, ಅವಹೇಳನ ಮಾಡಿದ್ದ ಕೇರಳದ ಯುಟ್ಯೂಬರ್ ಮನಾಫ್‌ಗೆ ತನಿಖೆ ಹಾಜರಾಗುವಂತೆ ಎಸ್.ಐ.ಟಿ ನೋಟೀಸ್ ನೀಡಿದೆ.

ಕೇರಳದ ಯುಟ್ಯೂಬರ್ ಮುನಾಫ್ ಎಸ್.ಐ.ಟಿ ತಂಡ ರಚನೆಯಾಗುವ ಮೊದಲು ಧರ್ಮಸ್ಥಳಕ್ಕೆ ಆಗಮಿಸಿ ಇಲ್ಲಿನ ಹಲವು ವೀಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ್ದ. ಬಹುತೇಕ ಕಪೋಲಕಲ್ಪಿತ ಸುದ್ದಿಯಾಗಿ ಬಿತ್ತರಿಸಿದ್ದು ಮಾತ್ರವಲ್ಲದೆ ಹಲವರ ತೇಜೋವಧೆ ಮಾಡಿರುವ ವಿಡಿಯೋ ಜಾಲತಾಣಗಳಲ್ಲಿ ಪ್ರಸಾರ ಮಾಡಿದ್ದ. ಆತ ತನ್ನ ಯುಟ್ಯೂಬ್‌ನಲ್ಲಿ ಅರಣ್ಯದಲ್ಲಿ ಬುರುಡೆ ತೆಗೆಯುವ ವಿಡಿಯೋವನ್ನು ಪ್ರಸಾರ ಮಾಡಿದ್ದ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಆತನಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ.

*ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿಗೆ

ಬುರುಡೆ ಪ್ರಕರಣದ ತನಿಖೆಯ ಮಹತ್ತರ ಹಂತಕ್ಕೆ ತಲುಪಿದ್ದು, ಸೆ.5 ರಂದು ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿಗೆ ಆಗಮಿಸಿದ್ದಾರೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಯಲ್ಲಿ ನಡೆಸುತ್ತಿರುವ ತನಿಖೆಯ ಭಾಗವಾಗಿ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಆಗಮಿಸಿದ್ದಂತೆ ಯೂಟ್ಯೂಬರ್ ಅಭಿಷೇಕ್, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ ಮೂವರ ಪ್ರತ್ಯೇಕ ಪ್ರತ್ಯೇಕವಾಗೊಇ ವಿಚಾರಣೆ ಆರಂಭಿಸಿದ್ದಾರೆ. ಈ ವೇಳೆ ಹಲವು ಮಹತ್ತರ ಮಾಹಿತಿ ಎಸ್‌ಐಟಿಗೆ ಲಭ್ಯವಾಗಿದೆ.

-----------

ಬುರುಡೆ ತಂದು ಕೊಟ್ಟಿದ್ದು ಗಿರೀಶ್ ಮಟ್ಟಣ್ಣವರ್

ಧರ್ಮಸ್ಥಳ ಗ್ರಾಮದ ತಲೆಬುರುಡೆ ಪ್ರಕರಣದ ಸ್ಫೋಟಕ ಮಾಹಿತಿ ಶುಕ್ರವಾರ ಎಸ್.ಐ.ಟಿ ಅಧಿಕಾರಿಗಳಿಗೆ ಲಭ್ಯವಾಗಿದೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಯಲ್ಲಿ ನಡೆಸುತ್ತಿರುವ ತನಿಖೆ ವೇಳೆ ಬುರುಡೆಗೆ ಸಂಬಂಧಿಸಿದ ಜಯಂತ್.ಟಿ ಸ್ಫೋಟಕ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾನೆ ಎನ್ನಲಾಗಿದೆ. ಬುರುಡೆಯನ್ನು ಜಯಂತ್.ಟಿಗೆ ತಂದು ಕೊಟ್ಟಿದ್ದು ಗಿರೀಶ್ ಮಟ್ಟಣ್ಣವರ್ ಎಂದು ತನಿಖೆ ವೇಳೆ ಬಾಯಿಬಿಟ್ಟಿದ್ದಾನೆ. ಸಧ್ಯಕ್ಕೆ ವಿಚಾರಣೆ ಎದುರಿಸುತ್ತಿರುವ ಯೂಟ್ಯೂಬರ್ ಅಭಿಷೇಕ್, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ ಪ್ರತ್ಯೇಕವಾಗಿ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು, ಮೂವರನ್ನು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸೆ.4 ರಂದು ಹಾಜರುಪಡಿಸಿ ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net