

ಶಿರ್ವ: ವಿದ್ಯಾರ್ಥಿಗಳು ಪಾಠದ ಜೊತೆಗೆ ಇತರ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳುವುದು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ. ಯಕ್ಷಗಾನ ತರಬೇತಿಯಿಂದ ದೈಹಿಕವಾಗಿ ಮತ್ತು ವಾನಸಿಕವಾಗಿ ವಿಕಸನ ಹೊಂದಲು ಸಾಧ್ಯವಾಗುತ್ತದೆ ಎಂದು ವಿದ್ಯಾವರ್ಧಕ ಸಂದ ಆಡಳಿತಾಧಿಕಾರಿ ಪ್ರೊ.ವೈ.ಭಾಸ್ಕರ ಶೆಟ್ಟಿ ಹೇಳಿದರು.
ಎಂಎಸ್ಆರ್ಎಸ್ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ಉಡುಪಿ ಯಕ್ಷಗಾನ ಕಲಾರಂಗ ಮತ್ತು ಯಕ್ಷ ಶಿಕ್ಷಣ ಟ್ರಸ್ಟ್ ಸಹಕಾರದೊಂದಿಗೆ ಶಿರ್ವದ ಹಿಂದು ಪ್ರೌಢಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯಕ್ಷಗಾನ ತರಬೇತಿ ಟಕದ 2025-26ನೇ ಸಾಲಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯಕ್ಷ ಶಿಕ್ಷಣ ಟ್ರಸ್ಟ್ನ ಉಪಾಧ್ಯಕ್ಷ ವಿ.ಜಿ.ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ವಾತನಾಡಿ ಟ್ರಸ್ಟಿನ ವತಿಯಿಂದ ನೀಡುತ್ತಿರುವ ಯಕ್ಷಗಾನ ತರಬೇತಿ ಮತ್ತು ವಿದ್ಯಾರ್ಥಿಗಳಿಗೆ ಒದಗಿಸುತ್ತಿರುವ ಸೌಲಭ್ಯಗಳ ಬಗ್ಗೆ ತಿಳಿಸಿದರು.
ಎಂ.ಎಸ್.ಆರ್.ಎಸ್ ಕಾಲೇಜಿನ ಪ್ರಾಂಶುಪಾಲ ಡಾ.ಮಿಥುನ್ ಚಕ್ರವರ್ತಿ, ಹಿಂದು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಂದರ ಮೇರಾ, ಪ್ರೌಢಶಾಲಾ ನಿವೃತ್ತ ಮುಖ್ಯ ಶಿಕ್ಷಕಿ ಶಕಿಲಾ, ಯಕ್ಷಗಾನ ತರಬೇತುದಾರ ಸತೀಶ್ ಆಚಾರ್ಯ ಮತ್ತು ಹಿಂದೂ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ದೇವೇಂದ್ರ ಹೆಗ್ಡೆ, ಪ್ರಮುಖರಾದ ಶಶಿಧರ ಭಟ್, ರಾಮ ಹೊಳ್ಳ, ಗಣೇಶ್ ಆಚಾರ್ಯ ಉಪಸ್ಥಿತರಿದ್ದರು.
ಪ್ರೌಢಶಾಲಾ ಮುಖ್ಯ ಶಿಕ್ಷಕಿ ವಸಂತಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸುರೇಂದ್ರನಾಥ ಶೆಟ್ಟಿ ವಂದಿಸಿದರು. ಶಾಲಾ ಶಿಕ್ಷಕ ಹಾಗೂ ಯಕ್ಷಗಾನ ತರಬೇತಿ ಮೇಲ್ವಿಚಾರಕ ಕೇಶವ ಸಂಟಿಸಿದರು. ಶಿಕ್ಷಕಿ ಸುಪ್ರೀತಾ ಶೆಟ್ಟಿ ನಿರೂಪಿಸಿದರು.