ವಿಜೃಂಬಣೆಯ ಶ್ರೀ ದುರ್ಗಾಂಬ ದೇವಿ ರಥೋತ್ಸವ

blank

ಕಡೂರು: ತಾಲೂಕಿನ ಇತಿಹಾಸ ಪ್ರಸಿದ್ಧ ಅಧಿದೇವತೆ ಅಂತರಘಟ್ಟೆಯ ಶ್ರೀ ದುರ್ಗಾಂಬ ದೇವಿಯ ಬ್ರಹ್ಮರಥೋತ್ಸವ ಸಹಸ್ರರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಕಳೆದ ಒಂದು ವಾರದಿಂದ ಜಾತ್ರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದ್ದವು. ಶುಕ್ರವಾರ ರಾತ್ರಿ ಉತ್ಸವ ಮೂರ್ತಿಯನ್ನು ಸಾಂಪ್ರದಾಯಿಕವಾಗಿ ಮುತ್ತಿನೋತ್ಸವದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಶನಿವಾರ ಬೆಳಗ್ಗೆ ದೇವಾಲಯದಲ್ಲಿ ದೇವಿಯ ಮೂಲವಿಗ್ರಹಕ್ಕೆ ಸಂಕಲ್ಪ ಸೇವೆಗಳ ಅಭಿಷೇಕ ಪೂಜಾ ಕಾರ್ಯಕ್ರಮಗಳು ಜರುಗಿದವು. ದೇಗುಲದ ಪ್ರಾಂಗಣದಲ್ಲಿ ರಥ ಎಳೆಯುವ ಮುನ್ನ ದೇವಿಯ ಉತ್ಸವ ನಡೆಸಿದರು.
ಈ ಬಾರಿ ವಿಶೇಷವಾಗಿ ವೀಣೆಯ ಆಕೃತಿಯ ಹೂವಿನ ಅಲಂಕಾರದೊಂದಿಗೆ ರಥಗೋಪುರವನ್ನು ನಿರ್ಮಾಣ ಮಾಡಲಾಗಿತ್ತು. ದೇವಿಯ ಉತ್ಸವ ಮೂರ್ತಿಯನ್ನು ಅಲಂಕೃತಗೊಂಡ ರಥದಲ್ಲಿ ಪ್ರತಿಷ್ಟಾಪಿಸಲಾಯಿತು. ಬೆಳಗ್ಗೆ 7ಗಂಟೆಗೆ ನಡೆದ ಬಲಿಪ್ರಧಾನ ಪೂಜೆ ನೆರವೇರಿಸಿ ನಂತರ ಸಹಸ್ರರಾರು ಭಕ್ತರು ದೇವಿಯ ರಥವನ್ನು ಹರ್ಷದ್ಗೋರದೊಂದಿಗೆ ಎಳೆದು ಸಂಭ್ರಮಿಸಿದರು. ದೇವಿಯ ಉತ್ಸವ ಮೂರ್ತಿಯನ್ನು ರಥದಿಂದ ತೆರವುಗೊಳಿಸುವ ಮುನ್ನ ಬೃಹತ್ ಬಾಳೆಹಣ್ಣಿನ ರಾಶಿ ಪೂಜೆಯೊಂದಿಗೆ ರಥೋತ್ಸವ ಸಂಪನಗೊಂಡಿತ್ತು.
ಕಡೂರು ಮತ್ತು ತರೀಕೆರೆ ಶಾಸಕ ಕೆ.ಎಸ್.ಆನಂದ್, ಜಿ.ಎಚ್.ಶ್ರೀನಿವಾಸ್, ತರೀಕೆರೆ ಉಪವಿಭಾಗಾಧಿಕಾರಿ ಕಾಂತರಾಜ್ ರಥದ ಬಳಿ ವಿಶೇಷ ಪೂಜೆ ಸಲ್ಲಿಸಿದರು. ಕಡೂರು ಪ್ರಭಾರ ತಹಸೀಲ್ದಾರ್ ಎನ್.ಆರ್. ಮಂಜುನಾಥಸ್ವಾಮಿ, ಅಂತರಘಟ್ಟೆ ಗ್ರಾಪಂ ಅಧ್ಯಕ್ಷ ಕರಿಯಪ್ಪ, ಕೆಡಿಪಿ ಸದಸ್ಯ ಗುಮ್ಮನಹಳ್ಳಿ ಅಶೋಕ್, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಆಸಂದಿ ಕಲ್ಲೇಶ್, ಕಂಸಾಗರ ಸೋಮಶೇಖರ್, ಅರೇಹಳ್ಳಿ ಶಿವು ಸೇರಿದಂತೆ ಕಂದಾಯ ವಿಭಾಗದ ಅಧಿಕಾರಿಗಳು ಗ್ರಾಪಂ ಆಡಳಿತ ಮಂಡಳಿ ಸದಸ್ಯರು ಸಿಬ್ಬಂದಿ ವರ್ಗದವರು ಪೂಜಾ ಮಹೋತ್ಸವದಲ್ಲಿ ಭಾಗಿಯಾಗಿದ್ದರು.

Share This Article

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…