

ವಿಜಯವಾಣಿ ಸುದ್ದಿಜಾಲ ಕುಂದಾಪುರ
ಕಟ್‌ಬೇಲ್ತೂರು ಜನ ಸೇವಾ ಫೌಂಡೇಶನ್ ಮತ್ತು ಕೋಟೇಶ್ವರದ ಜೋಗಿ ಸಮಾಜ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ವಿವಿಧ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನೇತ್ರ ಉಚಿತ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರ ಕಟ್‌ಬೇಲ್ತೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆಯಿತು.
ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಶಿಬಿರ ಉದ್ಘಾಟಿಸಿದರು. ಜೋಗಿ ಸಮಾಜ ಸಂಘದ ಅಧ್ಯಕ್ಷ ಶೇಖರ ಬಳೆಗಾರ , ಪ್ರಮುಖರಾದ ಸೀತಾರಾಮ ಶೆಟ್ಟಿ, ಯು.ಶಂಕರ ಶೆಟ್ಟಿ, ಡಾ.ಎಸ್.ಜಿ. ಪ್ರಸನ್ನ ಐತಾಳ್, ಸತೀಶ ಪೂಜಾರಿ, ಮಂಜುನಾಥ ಪೂಜಾರಿ, ಹರಿಣಾಕ್ಷಿ, ಆಶಾ ಕಾರ್ಯಕರ್ತೆಯರು, ವೈದ್ಯರು, ಜನ ಸೇವಾ ಫೌಂಡೇಶನ್ ಸದಸ್ಯರು ಉಪಸ್ಥಿತರಿದ್ದರು.
ಸುಬ್ರಹ್ಮಣ್ಯ ಆಚಾರ್ಯ ಸ್ವಾಗತಿಸಿದರು. ರಾಘವೇಂದ್ರ ಜೋಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗುರುರಾಜ ಆಚಾರ್ಯ ವಂದಿಸಿದರು. ಸಂದೀಪ್ ಮೊಗವೀರ ಕಾರ್ಯಕ್ರಮ ನಿರೂಪಿಸಿದರು. 122 ಮಂದಿಗೆ ಆರೋಗ್ಯ ಮತ್ತು 118 ಫಲಾನುಭವಿಗಳಿಗೆ ನೇತ್ರ ತಪಾಸಣೆ ಮಾಡಲಾಯಿತು.
ದೃಷ್ಟಿ ಪ್ರದಾನ ಯೋಜನೆ, ಅಂಧತ್ವ ನಿವಾರಣಾ ವಿಭಾಗ ಉಡುಪಿ ಜಿಲ್ಲೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ, ಕಟ್‌ಬೇಲ್ತೂರು ಗ್ರಾಮ ಪಂಚಾಯಿತಿ, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಕುಂದಾಪುರ ರೂರಲ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ವತ್ರೆ ಮತ್ತು ಅಮೃತೇಶ್ವರಿ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.