ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

shibira
ನೇತ್ರಾ ತಪಾಸಣೆ ಉಚಿತ ನೇತ್ರ ತಪಾಸಣೆ , ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ಕಾರ್ಯಕ್ರಮ ಕೋಟ ಸಿಎ ಬ್ಯಾಂಕ್ ಅಧ್ಯಕ್ಷ ಕೃಷ್ಣ ಕಾಂಚನ್ ಉದ್ಘಾಟಿಸಿದರು.
Published on

ಕೋಟ: ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಪ್ರಸಾದ್ ನೇತ್ರಾಲಯ, ಕೋಟ ಸಿಎ ಬ್ಯಾಂಕ್ ಕೋಟ, ಇನ್ನರ್ ವೀಲ್ ಕೋಟ ಸಾಲಿಗ್ರಾಮ ಮತ್ತು ಸಮುದಾಯ ಆರೋಗ್ಯ ಕೇಂದ್ರ ಕೋಟ ಆಶ್ರಯದಲ್ಲಿ ಭಾನುವಾರ ಕೋಟದ ಸಿಎ ಬ್ಯಾಂಕ್ ಸಭಾಂಗಣದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಿತು.

ಕೋಟ ಸಿಎ ಬ್ಯಾಂಕ್ ಅಧ್ಯಕ್ಷ ಕೃಷ್ಣ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಸಹಾಯಕ ಗವರ್ನರ್ ಮಮತಾ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ತಿಮ್ಮ ಪೂಜಾರಿ, ಕಾರ್ಯದರ್ಶಿ ಚಂದ್ರ ಪೂಜಾರಿ, ಸಿಎ ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ, ಇನ್ನರ್ ವೀಲ್ ಅಧ್ಯಕ್ಷೆ ಪುಷ್ಪಲತಾ, ಕಾರ್ಯದರ್ಶಿ ಪೂಜಾ, ಕೋಟ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಾಧವ ಪೈ, ಡಾ.ವಿಷ್ಣು ಉಪಸ್ಥಿತರಿದ್ದರು. 146 ಜನ ಶಿಬಿರದ ಪ್ರಯೋಜನ ಪಡದುಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net