ನೇತ್ರ ತಪಾಸಣೆ, ಪೊರೆ ಶಸ್ತ್ರಚಿಕಿತ್ಸೆ ಉಚಿತ ಶಿಬಿರ

blank

ಕೋಟ: ಕೋಟ ಸಾಲಿಗ್ರಾಮ ರೋಟರಿ ಕ್ಲಬ್, ರೋಟರ‌್ಯಾಕ್ಟ್ ಕ್ಲಬ್, ರೋಟರಿ ಸಮುದಾಯದಳ ಮೂಡುಗಿಳಿಯಾರು, ವಾಗ್ದಾನ್ ಒಪ್ಟಿಕಲ್ ಸಾಲಿಗ್ರಾಮ, ಆರ್ಟ್ಸ್ ಆಫ್ ಲಿವಿಂಗ್ ಸಾಲಿಗ್ರಾಮ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೋಟ, ನೇತ್ರಜ್ಯೋತಿ ಚಾರಿಟೆಬಲ್ ಟ್ರಸ್ಟ್ ಉಡುಪಿ ಮತ್ತು ಪ್ರಸಾದ್ ನೇತ್ರಾಲಯ ಸಹಯೋಗದಲ್ಲಿ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರಚಿಕಿತ್ಸೆ ಶಿಬಿರ ಇತ್ತೀಚೆಗೆ ಮೂಡುಗಿಳಿಯಾರು ಶಾಲೆಯಲ್ಲಿ ಜರುಗಿತು.

ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ತಿಮ್ಮ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕೋಟ ಸಿಎ ಬ್ಯಾಂಕ್ ಅಧ್ಯಕ್ಷ ಡಾ.ಕೃಷ್ಣ ಕಾಂಚನ್ ಉದ್ಘಾಟಿಸಿದರು. ಕೃಷಿಯಲ್ಲಿ ಸಾಧನೆಗೈದ ನರಸಿಂಹ ಶೆಟ್ಟಿ ತಂಬಳದಿಮನೆ ಮತ್ತು ಶೀನ ಪೂಜಾರಿ ಗೊಳಿಜೆಡ್ಡು ಗಿಳಿಯಾರು ಅವರನ್ನು ಸನ್ಮಾನಿಸಲಾಯಿತು.

ಪ್ರಸಾದ್ ನೇತ್ರಾಲಯ ಉಡುಪಿ ವೈದ್ಯರಾದ ಡಾ.ಶೀತಲ, ಮೂಡುಗಿಳಿಯಾರು ರೋಟರಿ ಸಮುದಾಯದಳ ಅಧ್ಯಕ್ಷ ಗೋಪಾಲ್, ಕೋಟ ಗ್ರಾಪಂ ಅಧ್ಯಕ್ಷೆ ಜ್ಯೋತಿ ಬಿ.ಶೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕ ಸುರೇಂದ್ರ ಶೆಟ್ಟಿ, ಆರ್ಟ್ ಆಫ್ ಲಿವಿಂಗ್‌ನ ಗುರು ದಿನೇಶ್ ತೆಕ್ಕಟ್ಟೆ, ಸದಸ್ಯ ಆನಂದ್ ಕುಂದರ್ ಉಪಸ್ಥಿತರಿದ್ದರು. ರೋಟರಿ ಸದಸ್ಯೆ ಲಲಿತಾ ಸ್ವಾಗತಿಸಿದರು. ರೊಟರ‌್ಯಾಕ್ಟ್ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ದೇವೇಂದ್ರ ಶ್ರೀಯನ್ ಕಾರ್ಯಕ್ರಮ ನಿರೂಪಿಸಿದರು.

ಅಂಬಲಪಾಡಿ ಜಂಕ್ಷನ್ ಅಂಡರ್​ಪಾಸ್​ ಅವೈಜ್ಞಾನಿಕ…

ಅಂಗನವಾಡಿ ನಿವೃತ್ತ ನೌಕರರ ಗ್ರಾಚ್ಯುವಿಟಿ ಹಣ ಬಿಡುಗಡೆಗೆ ಆಗ್ರಹ

 

Share This Article

ಸಂಬಳ ಸಾಲ್ತಿಲ್ಲ! ಸಾಲ ತೀರಿಸಲು ಚಿನ್ನದ ಸಾಲ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳನ್ನು ಮಾತ್ರ ಮಾಡಬೇಡಿ | Gold Loan

Gold Loan: ಸಂಸ್ಥೆ ಕೊಡುತ್ತಿರುವ ಸಂಬಳ ನಮಗೆ ಮಾತ್ರವಲ್ಲ, ನಮ್ಮ ಸಾಲ ತೀರಿಸಲು ಸಹ ಸಾಲುತ್ತಿಲ್ಲ…

ಭಾರತದಲ್ಲಿ ಅನಾರೋಗ್ಯಕರ ಆಹಾರ ಸೇವನೆಯೇ ಹೆಚ್ಚು: ಶೇ. 56 ರೋಗಗಳಿಗೆ ಕೆಟ್ಟ ಆಹಾರ ಪದ್ಧತಿ ಕಾರಣವೆಂದ ಏಮ್ಸ್! Indians Food

Indians Food : ಭಾರತದಲ್ಲಿ ಬೊಜ್ಜು ಅಥವಾ ಸ್ಥೂಲಕಾಯತೆ ಇಂದು ಸಾಮಾನ್ಯ ಹಾಗೂ ಸಂಕೀರ್ಣ ಕಾಯಿಲೆಗಳಲ್ಲಿ…

ನೀವು ಚಿಕನ್ ಅಥವಾ ಮಟನ್​ ಲಿವರ್​ ತಿಂತಿರಾ? ಹಾಗಾದ್ರೆ ಎಚ್ಚರ! ಈ ವಿಚಾರ ನಿಮಗೆ ಗೊತ್ತಿರಲೇಬೇಕು… Liver

Liver : ಮಾಂಸಾಹಾರ ಬಹುತೇಕರ ಪ್ರಿಯವಾದ ಆಹಾರ. ಬೇರೆ ಯಾವುದನ್ನು ಬೇಕಾದರೂ ಬಿಡುತ್ತೇನೆ ಆದರೆ, ಒಂದು…