ಪಾರಂಪಳ್ಳಿಯಲ್ಲಿ ನೇತ್ರ ತಪಾಸಣೆ ಶಿಬಿರ

camp-1
ಸಾಲಿಗ್ರಾಮದ ಪಾರಂಪಳ್ಳಿ ವಿಷ್ಣುಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ನಡೆಯಿತು.
Published on

ಕೋಟ: ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರ, ಶಿರೂರು ಮುದ್ದುಮನೆ ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ, ಸಾಲಿಗ್ರಾಮ ರೋಟರಿ ಕ್ಲಬ್ ಕೋಟ ಸಹಯೋಗದೊಂದಿಗೆ ಸಾಲಿಗ್ರಾಮದ ಪಾರಂಪಳ್ಳಿ ವಿಷ್ಣುಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ಸಾರ್ವಜನಿಕರಿಗೆ ನೇತ್ರ ಉಚಿತ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಮಂಗಳವಾರ ಜರುಗಿತು.

ರೋಟರಿ ಕ್ಲಬ್ ಅಧ್ಯಕ್ಷ ತಿಮ್ಮ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಸಾಲಿಗ್ರಾಮ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ರಾಘವೇಂದ್ರ ರಾವ್ ಕಣ್ಣಿನಪೊರೆಯ ತೊಂದರೆ ಬಗ್ಗೆ ಮಾಹಿತಿ ನೀಡಿದರು. ಮುದ್ದು ಮನೆ ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ ಆಡಳಿತ ಅಧಿಕಾರಿ ಶಂಕರ ಶೆಟ್ಟಿ ಅವರು ತಮ್ಮ ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ನೇತ್ರ ತಜ್ಞ ಡಾ.ಮನೋಜ್ ಭಟ್ ನೇತ್ರ ತಪಾಸಣೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net