ಅಪಘಾತಕ್ಕೆ ದೃಷ್ಟಿದೋಷವೂ ಕಾರಣ: ಒಸಿಐ ಸಿಇಒ ಲಕ್ಷ್ಮೀ ಶಿಂಧೆ ಹೇಳಿಕೆ

Eye Checkup Camp Mandya

ಮಂಡ್ಯ: ರಸ್ತೆಯಲ್ಲಿ ಸಂಭವಿಸುವ ಅಪಘಾತಕ್ಕೆ ದೃಷ್ಟಿದೋಷವೂ ಕಾರಣ ಎಂದು ಆಪ್ಟೋಮೆಟ್ರಿ ಕಾನ್ಫೆಡರೇಷನ್ ಆಫ್ ಇಂಡಿಯಾ(ಒಸಿಐ) ಸಿಇಒ ಲಕ್ಷ್ಮೀ ಶಿಂಧೆ ಹೇಳಿದರು.
ನಗರದ ಷುಗರ್‌ಟೌನ್‌ನಲ್ಲಿ ಆಪ್ಟೋಮೆಟ್ರಿ ಕಾನ್ಫೆಡರೇಷನ್ ಆಫ್ ಇಂಡಿಯಾ, ಲಾರಿ ಮಾಲೀಕರ ಸಂಘ, ರೋಟರಿ ಕ್ಲಬ್, ಅಲೋಕ ದೃಷ್ಟಿ ಸಹಯೋಗದಲ್ಲಿ ಆಯೋಜಿಸಿದ್ದ ಲಾರಿ ಚಾಲಕರಿಗೆ ಕಣ್ಣಿನ ತಪಾಸಣೆ ಶಿಬಿರದಲ್ಲಿ ಮಾತನಾಡಿದ ಅವರು, ಕಣ್ಣಿನ ಸಮಸ್ಯೆ ಚಾಲನೆ ಮೇಲೆ ಪರಿಣಾಮ ಬೀರುವ ಅಂಶವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾರಿ ಮಾಲೀಕರ ಸಹಕಾರದೊಂದಿಗೆ ತಪಾಸಣೆ ಹಾಗೂ ಸಮಸ್ಯೆಗಳನ್ನು ತಿಳಿದುಕೊಳ್ಳಲು ಶಿಬಿರ ಆಯೋಜಿಸಲಾಗುತ್ತಿದೆ. ಮುಂದಿನ 3 ರಿಂದ 6 ತಿಂಗಳಲ್ಲಿ ಸುಮಾರು 15 ಸಾವಿರ ಚಾಲಕರ ಕಣ್ಣಿನ ಪರೀಕ್ಷೆ ನಡೆಸುವ ಗುರಿ ಹೊಂದಿದ್ದೇವೆ. ಸಮಸ್ಯೆಯ ಬಗ್ಗೆ ವರದಿ ಸಿದ್ಧಪಡಿಸಿ ಸಾರಿಗೆ ಸಚಿವಾಲಯಕ್ಕೆ ಹಸ್ತಾಂತರಿಸಲಾಗುವುದು ಎಂದರು.
ರೋಟರಿ ಕ್ಲಬ್ ಆಫ್ ಬೆಂಗಳೂರು ಅಧ್ಯಕ್ಷೆ ಗೌರಿ ಮಾತನಾಡಿ, ಚಾಲಕರಲ್ಲಿ ಸರಿಪಡಿಸಲಾಗದ ದೃಷ್ಟಿ ಸಮಸ್ಯೆಗಳು ಸಾಮಾನ್ಯವಾಗಿದೆ ಎಂದು ಸಂಚಾರ ಸುರಕ್ಷತಾ ಸಂಶೋಧನೆ ಮಾಹಿತಿ ನೀಡಿವೆ. ಆದ್ದರಿಂದ ರಸ್ತೆ ಸುರಕ್ಷತೆ ಮತ್ತು ಚಾಲಕರ ಯೋಗಕ್ಷೇಮಕ್ಕಾಗಿ ನಿಯಮಿತವಾಗಿ ಕಣ್ಣಿನ ಪರೀಕ್ಷೆಯನ್ನು ಮಾಡಿಸಬೇಕು. ರೋಟರಿ ಕ್ಲಬ್ ಹಲವಾರು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮ ಆಯೋಜಿಸಿಕೊಂಡು ಬರಲಾಗುತ್ತಿದೆ. ಅದೇ ರೀತಿ ಈ ಕಾರ್ಯಕ್ರಮದಲ್ಲಿಯೂ ಭಾಗಹಿಸಿದ್ದೇವೆ ಎಂದರು.
ಲಾರಿ ಮಾಲೀಕರ ಸಂಘದ ನವೀನ್‌ರೆಡ್ಡಿ, ಡಾ.ಪ್ರೇಮ್‌ಜೀತ್, ಲಾರಿ ಮಾಲೀಕರ ಸಂಘದ ಅಧ್ಯಕ್ಷ ಸತ್ಯಾನಂದ ಇತರರಿದ್ದರು. ಇದೇ ವೇಳೆ ಕಣ್ಣಿನ ತಪಾಸಣೆ ನಡೆಸಿ ಅಗತ್ಯವಿರುವವರಿಗೆ ಕನ್ನಡಕ ವಿತರಿಸಲಾಯಿತು.

Share This Article

ಈ 3 ನಕ್ಷತ್ರದವರು ಕೋಟೇಶ್ವರ ಯೋಗದೊಂದಿಗೆ ಹುಟ್ತಾರೆ! ಇವರನ್ನು ಅರಸಿ ಬರುತ್ತೆ ಅಪಾರ ಸಂಪತ್ತು | Birth of Stars

Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ.…

ನಿಮ್ಮ ಕನಸಿನಲ್ಲಿ ಹಾವು ಕಾಣಿಸಿಕೊಂಡರೆ ಅದರರ್ಥ ಏನು ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿ ಸಂಗತಿ | Snakes in a Dream

Snakes in a Dream : ಯಾವುದೇ ವ್ಯಕ್ತಿ ನಿದ್ರೆಗೆ ಜಾರಿದಾಗ ಸಹಜವಾಗಿ ಎದುರಾಗುವ ಸಂಗತಿಯೆಂದರೆ,…

ಈ ವಸ್ತುಗಳು ನಿಮ್ಮ ಮನೆಯಲ್ಲಿದ್ದರೆ ಈ ಕೂಡಲೇ ಹೊರಗೆ ಎಸೆಯಿರಿ… ಇಲ್ಲದಿದ್ರೆ ಅಪಾಯ ತಪ್ಪಿದ್ದಲ್ಲ! Household items

Household items : ಎಂದಾದರೂ ಮನೆಯನ್ನು ವಿಷಪೂರಿತಗೊಳಿಸುವ ವಸ್ತುಗಳು ಬಗ್ಗೆ ನೀವು ಯೋಚನೆ ಮಾಡಿದ್ದೀರಾ? ಮಾರುಕಟ್ಟೆಯಲ್ಲಿ…