ಕಡಬ: ಮೊಬೈಲ್ ಬಳಕೆಯಿಂದಾಗಿ ಶಾಲಾ ಮಕ್ಕಳಲ್ಲಿ ಕಣ್ಣಿನ ಸಮಸ್ಯೆ ಅಧಿಕವಾಗತೊಡಗಿದೆ, ಈ ನಿಟ್ಟಿನಲ್ಲಿ ಈ ಹಂತದಲ್ಲೇ ಕಣ್ಣಿನ ಪರೀೆ ಮಾಡಿಸಿ ಸಮಸ್ಯೆ ನಿವಾರಣೆ ಮಾಡುವುದು ಒಳಿತು ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯ ಅಂಧತ್ವ ವಿಭಾಗದ ರಾಮಚಂದ್ರ ಹೇಳಿದರು.
ಶನಿವಾರ ಗಂಡಿಬಾಗಿಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ, ಹಳೇ ವಿದ್ಯಾರ್ಥಿ ಸಂ ಸಹಭಾಗಿತ್ವದಲ್ಲಿ ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಅಂಧತ್ವ ವಿಭಾಗದ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರದಲ್ಲಿ ಮಾಹಿತಿ ನೀಡಿ ಮಾತನಾಡಿದರು.
ಗಂಡಿಬಾಗಿಲು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಬಾಬು ಅಗರಿ ಶಿಬರ ಉದ್ಘಾಟಿಸಿ ಮಾತನಾಡಿದರು. ಶಾಲಾ ಹಳೇ ವಿದ್ಯಾರ್ಥಿ ಸಂ ಅಧ್ಯಕ್ಷ ಪಿ.ಲತೀಫ್, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಹಮೀದ್, ಇಬ್ರಾಹಿಂ, ಅಬೂಬಕ್ಕರ್ ಸಿದ್ದಿಕ್, ಅಂಧತ್ವ ವಿಭಾಗದ ಅಭಿರಾಮ್ ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ತುಳಸಿ ಸ್ವಾಗತಿಸಿ, ಪೂರ್ಣಿಮಾ ವಂದಿಸಿದರು.