

ಬೆಂಗಳೂರು: ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪಾದರಾಯನಪುರ ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಅವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಇಮ್ರಾನ್ ಪಾಷಾ ಅವರಿಗೆ ಸೋಂಕು ಹರಡಿರುವುದು ಗೊತ್ತಿದ್ದರೂ ಅವರು ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿ ಮನೆಯಲ್ಲೇ ಇರುವುದಾಗಿ ಹೇಳುತ್ತಿದ್ದರು. ಬಿಬಿಎಂಪಿ ಆರೋಗ್ಯ ಅಧಿಕಾರಿಗಳು ಸೋಂಕು ತೀವ್ರವಾಗಿ ಹರಡುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗುವಂತೆ ಮನವಿ ಮಾಡಿದರೂ ಅವರು ಒಪ್ಪಲಿಲ್ಲ. ಅಲ್ಲದೆ ಅವರನ್ನು ಆಸ್ಪತ್ರೆಗೆ ವಾಹನದಲ್ಲಿ ಕರೆದೊಯ್ಯುವ ವೇಳೆ ಹೆಚ್ಚು ಮಂದಿ ಗುಂಪು ಸೇರುವಂತೆ ಮಾಡಿ ಕಾಯ್ದೆ ಉಲ್ಲಂಘಿಸಿದ್ದರು. ಹೀಗಾಗಿ ಇವರ ವಿರುದ್ಧ ಬಿಬಿಎಂಪಿ ಅಧಿಕಾರಿಗಳು ಜಗಜೀವನರಾಮ್ ನಗರ ಠಾಣೆಗೆ ದೂರು ನೀಡಿದ್ದರು. ಪಾಲಿಕೆ ಸದಸ್ಯರ ವಿರುದ್ಧ ಐಪಿಸಿ ಸೆಕ್ಷನ್ 143, 270,271,188 ಅಡಿಯಲ್ಲಿ ಕೇಸು ದಾಖಲಿಸಲಾಗಿದೆ.