'F*** Off Man'; ರಚಿನ್​ ಔಟಾದಾಗ ಬೆರಳು ತೋರಿಸಿದ ವಿರಾಟ್​ ಕೊಹ್ಲಿ, ವಿಡಿಯೋ ವೈರಲ್

Virat Rachin
Published on

ಚೆನ್ನೈ: ಹಳೇ ಅಭ್ಯಾಸದೊಂದಿಗೆ ಹೊಸ ಅಧ್ಯಾಯ ಶುರು ಮಾಡಿರುವ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವು 17ನೇ ಆವೃತ್ತಿಯ ಐಪಿಎಲ್​ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್​ ಚೆನ್ನೈ ಸೂಪರ್​​ಕಿಂಗ್ಸ್​​​ ಎದುರು ಆರು ವಿಕೆಟ್​ಗಳ ಸೋಲು ಕಂಡಿದ್ದು, ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

ಇನ್ನು ಪಂದ್ಯದ ವೇಳೆ ಹಲವು ಘಟನೆಗಳು ನಡೆದಿದ್ದು, ಇದರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಚೆನ್ನೈ ಸೂಪರ್ ಕಿಂಗ್ಸ್ ಚೇಸ್ ಮಾಡುವ ಸಮಯದಲ್ಲಿ, ವಿರಾಟ್ ಕೊಹ್ಲಿ ಕೊಟ್ಟ ರಿಯಾಕ್ಷನ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದು ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ಚೇಸ್ ಮಾಡುವ ಸಮಯದಲ್ಲಿ, ಯುವ ಬ್ಯಾಟರ್ ರಚಿನ್ ರವೀಂದ್ರ ಔಟಾದಾಗ ವಿರಾಟ್ ಕೊಹ್ಲಿ ಕೊಟ್ಟ ರಿಯಾಕ್ಷನ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. 15 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳನ್ನು ಒಳಗೊಂಡಂತೆ 37 ರನ್​ಗಳನ್ನು ಸಿಡಿಸಿದರು. ಆದರೆ, ಕರ್ಣ್ ಶರ್ಮಾ ಬೌಲಿಂಗ್​ನಲ್ಲಿ ರಚಿನ್ ಸ್ಲಾಗ್ ಸ್ವೀಪ್ ಸರಿಯಾಗಿ ಕನೆಕ್ಟ್ ಆಗದೆ ರಜತ್ ಪಾಟಿದಾರ್‌ಗೆ ಕ್ಯಾಚ್ ನೀಡಿ ಔಟಾದರು.

ಇತ್ತ ರಚಿನ್​ ವಿಕೆಟ್​ ಪಡೆದ ಆರ್​ಸಿಬಿ ಒಂದು ಕ್ಷಣ ನೆಮ್ಮದಿಯ ನಿಟ್ಟುಸಿರು ಬಿಟ್ಟಿತ್ತು. ಆಕ್ರಮಣಕಾರಿಯಾಗಿ ಪ್ರತಿಕ್ರಿಯಿಸಿದ ವಿರಾಟ್ ಕೊಹ್ಲಿ ಅವರು ರಚಿನ್‌ಗೆ ಎಕ್ಸ್-ರೇಟೆಡ್ ಸೆಂಡ್-ಆಫ್‌ನಲ್ಲಿ ತಮ್ಮ ಬೆರಳಿನಿಂದ ಸನ್ನೆ ಮಾಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ತಾಣಗಳಲ್ಲಿ ಭಾರೀ ವೈರಲ್ ಆಗಿವೆ. ಕೊಹ್ಲಿಯ ನಡೆಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net