28.5 C
Bengaluru
Monday, January 20, 2020

ಪೊಲೀಸ್​ ಬಲೆಗೆ ಬಿದ್ದ ಫೇಸ್​ಬುಕ್ ಗೆಳೆಯ: ಮಹಿಳೆಯ ಸ್ನೇಹ ಬೆಳೆಸಿ ಮದುವೆಯಾಗುವುದಾಗಿ ನಂಬಿಸಿ ವಂಚನೆ

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ಬೆಂಗಳೂರು: ಫೇಸ್​ಬುಕ್​ನಲ್ಲಿ ನಕಲಿ ಖಾತೆ ತೆರೆದು, ಮಹಿಳೆಯ ಸ್ನೇಹ ಬೆಳೆಸಿ ಮದುವೆಯಾಗುವುದಾಗಿ ನಂಬಿಸಿ 11.23 ಲಕ್ಷ ರೂ. ಪಡೆದು ವಂಚಿಸಿದ್ದ ಆರೋಪಿಯನ್ನು ನಗರ ಸೈಬರ್ ಕ್ರೖೆಂ ಪೊಲೀಸರು ಬಂಧಿಸಿದ್ದಾರೆ.

ವರ್ತರಿನ ಪ್ರಮೋದ್ ಮಂಜುನಾಥ ಹೆಗಡೆ ಅಲಿಯಾಸ್ ಆಕಾಶ ಭಟ್ (28) ಬಂಧಿತ. ಈತನಿಂದ ಕಾರು, ಲ್ಯಾಪ್​ಟಾಪ್, ಮೊಬೈಲ್, 40 ಗ್ರಾಂ ಚಿನ್ನಾಭರಣ ಸೇರಿ 6.2 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಕಲಿ ಹೆಸರಿನಲ್ಲಿ ಫೇಸ್​ಬುಕ್ ಖಾತೆ: 2018ರ ಜನವರಿಯಲ್ಲಿ ಪ್ರಮೋದ್, ಆಕಾಶ್ ಭಟ್ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ತೆರೆದು ಶಿಕ್ಷಣ ಸಂಸ್ಥೆಯ ಉದ್ಯೋಗಸ್ಥ ಮಹಿಳೆಯನ್ನು ಪರಿಚಯ ಮಾಡಿಕೊಂಡಿದ್ದ. ಕೆಲ ತಿಂಗಳ ಬಳಿಕ ಆಕೆಯನ್ನು ಮದುವೆಯಾಗುವಂತೆ ಪುಸಲಾಯಿಸಿದ್ದ. ತನ್ನ ಮನೆಯಲ್ಲಿ ಕಷ್ಟವಿದೆ. ಸಾಲ ತೀರಿಸಬೇಕು. ಪಾಲಕರ ಚಿಕಿತ್ಸೆಗೆ ಹಣ ಭರಿಸಬೇಕು. ಮದುವೆ ವೇಳೆಗೆ ಹಣ ವಾಪಸ್ ಕೊಡುವುದಾಗಿ ಸುಳ್ಳು ಹೇಳಿ ಹಂತಹಂತವಾಗಿ ಬ್ಯಾಂಕ್ ಖಾತೆ, ಡಿಜಿಟಲ್ ವ್ಯಾಲೆಟ್​ಗೆ 11.23 ಲಕ್ಷ ರೂ. ವರ್ಗಾವಣೆ ಮಾಡಿಸಿಕೊಂಡಿದ್ದ.

ಹಣ ಕೊಟ್ಟು ಬೇಸತ್ತ ಮಹಿಳೆ, ಮದುವೆಯಾಗುವಂತೆ ಒತ್ತಾಯ ಮಾಡಲು ಆರಂಭಿಸಿದಾಗ ಮೊಬೈಲ್ ಆಫ್ ಮಾಡಿಕೊಂಡಿದ್ದ. ವಂಚನೆಗೆ ಒಳಗಾಗಿರುವು ದನ್ನು ಅರಿತ ಮಹಿಳೆ, ಸೈಬರ್ ಕ್ರೖೆಂ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಇನ್​ಸ್ಪೆಕ್ಟರ್ ಕೆ.ಎನ್. ಯಶವಂತ್​ಕುಮಾರ್ ನೇತೃತ್ವದ ತಂಡ ಆರೋಪಿಯ ಜಾಲತಾಣಗಳ ಖಾತೆ, ಐಪಿ ಅಡ್ರಸ್ ಆಧರಿಸಿ ವೈಟ್​ಫೀಲ್ಡ್​ನ ನಲ್ಲೂರಹಳ್ಳಿ ದಿವ್ಯಶ್ರೀ ಪ್ಲಾಜಾ ಬಳಿ ಬಂಧಿಸಿದೆ. ಆರೋಪಿ ಪ್ರಮೋದ್, ಇನ್ನೊಬ್ಬ ಮಹಿಳೆಗೆ ಇದೇ ರೀತಿ ಫೇಸ್​ಬುಕ್​ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ 10 ಸಾವಿರ ರೂ. ವಸೂಲಿ ಮಾಡಿರುವ ಮಾಹಿತಿ ಇದೆ. ಆ ಮಹಿಳೆಯನ್ನು ಪತ್ತೆಹಚ್ಚಿ ದೂರು ಪಡೆಯಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಲೆ ಬೀಸುತ್ತಿದ್ದದ್ದು ಹೀಗೆ..

ಉತ್ತರಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಕಂಚಿಕೈ ಗ್ರಾಮದ ಪ್ರಮೋದ್, 10ನೇ ತರಗತಿಗೆ ವ್ಯಾಸಂಗ ಮೊಟಕುಗೊಳಿಸಿ ನಗರಕ್ಕೆ ಬಂದಿದ್ದ. ಫೇಸ್​ಬುಕ್​ನಲ್ಲಿ ನಕಲಿ ಖಾತೆ ತೆರೆದು ಬೇರೆಯವರ ಫೋಟೋ ಅಪ್​ಲೋಡ್ ಮಾಡಿ ಶ್ರೀಮಂತ ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದ. ರಿಕ್ವೆಸ್ಟ್ ಅಕ್ಸೆಪ್ಟ್ ಮಾಡಿದಾಗ ಮೆಸೆಂಜರ್​ನಲ್ಲಿ ಚಾಟಿಂಗ್ ನಡೆಸಿ ಸ್ನೇಹಿತನಂತೆ ಮಾತನಾಡಿ ಖಾಸಗಿ ವಿಷಯಗಳ ಬಗ್ಗೆ ತಿಳಿದುಕೊಳ್ಳುತ್ತಿದ್ದ. ತಾನು ನಗರದ ಪ್ರತಿಷ್ಠಿತ ಬ್ಯಾಂಕ್ ಶಾಖೆ ಮ್ಯಾನೇಜರ್ ಆಗಿದ್ದು, ಸೂಪರ್ ಮಾರ್ಕೆಟ್ ವ್ಯವಹಾರದಲ್ಲಿ ಹಣ ತೊಡಗಿಸಿದ್ದೇನೆ ಎಂದು ನಂಬಿಸುತ್ತಿದ್ದ. ಮಹಿಳೆಯರ ದೌರ್ಬಲ್ಯಗಳನ್ನು ತಿಳಿದುಕೊಂಡು ಅವರೊಂದಿಗೆ ಭಾವನಾತ್ಮಕ ಮತ್ತು ಸಲುಗೆಯಿಂದ ಮಾತನಾಡುತ್ತಿದ್ದ.

ಹಲವರಿಗೆ ವಂಚನೆ ಶಂಕೆ

ನಕಲಿ ಫೇಸ್​ಬುಕ್ ಖಾತೆ ತೆರೆದು ಹಲವರ ಜತೆ ಸ್ನೇಹ ಬೆಳೆಸಿ ಮದುವೆ ಆಗುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಿರುವ ಶಂಕೆ ಇದೆ. ವಂಚನೆಗೊಳಗಾದ ಮಹಿಳೆಯರು ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿರುವ ಸೈಬರ್ ಕ್ರೖೆಂ ಠಾಣೆಗೆ ಭೇಟಿ ನೀಡಿ ದೂರು ನೀಡಬಹುದು ಎಂದು ಇನ್​ಸ್ಪೆಕ್ಟರ್ ಯಶವಂತಕುಮಾರ್ ತಿಳಿಸಿದ್ದಾರೆ.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...