More

    ಉನ್ನತ ಶಿಕ್ಷಣ ಪ್ರಾರಂಭ ವಿದ್ಯಾರ್ಥಿಗಳಿಗೆ ಅನುಕೂಲ


    ಕೊಡಗು: ಪ್ರಸಕ್ತ ವರ್ಷ ಪದವಿ ಶಿಕ್ಷಣಕ್ಕೆ ಚಾಲನೆ ನೀಡಿರುವುದರಿಂದ ಮಧ್ಯಮ ವರ್ಗದವರು ಹೆಚ್ಚಾಗಿರುವ ಸಿದ್ದಾಪುರದ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ಕುಲಸಚಿವ ಸೀನಪ್ಪ ಹೇಳಿದರು.


    ಆದಿಚುಂಚನಗಿರಿ ವಿದ್ಯಾಸಂಸ್ಥೆಯ 6ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಿದ್ದಾಪುರ ಭಾಗದಲ್ಲಿ ಪದವಿ ಪೂರ್ವ ಶಿಕ್ಷಣದವರೆಗೆ ಮಾತ್ರ ಅವಕಾಶವಿತ್ತು. ಉನ್ನತ ಶಿಕ್ಷಣಕ್ಕೆ ಗೋಣಿಕೊಪ್ಪಲು, ವಿರಾಜಪೇಟೆ, ಕುಶಾಲನಗರ, ಮಡಿಕೇರಿಗೆ ಹೋಗಬೇಕಿತ್ತು. ಇದು ಕಾರ್ಮಿಕರು, ಮಧ್ಯಮ ವರ್ಗದ ಮಕ್ಕಳಿಗೆ ಸಾಧ್ಯವಿರಲಿಲ್ಲ. ಇದರಿಂದ ಸಾಕಷ್ಟು ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ದ್ವಿತೀಯ ಪಿಯುಸಿಗೆ ಮೊಟಕುಗೊಳಿಸುತ್ತಿದ್ದರು. ಹಲವಾರು ಮನವಿ ಮೇರೆಗೆ ಬಿಜಿಎಸ್ ವಿದ್ಯಾಸಂಸ್ಥೆಯಲ್ಲಿ ಈ ವರ್ಷದಿಂದ ಬಿಎ, ಬಿ.ಕಾಂ ಪದವಿ ಪ್ರಾರಂಭವಾಗಲಿದೆ. ಹಂತ ಹಂತವಾಗಿ ಬೇರೆ ವಿಷಯಗಳನ್ನು ಪ್ರಾರಂಭಿಸಲಾಗುವುದು ಎಂದರು.


    ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ಈ ಭಾಗದ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಬಿಜಿಎಸ್ ವಿದ್ಯಾಸಂಸ್ಥೆಯು ಶಿಕ್ಷಣ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವುದು ಶ್ಲಾಘನೀಯ. ಯುವಜನತೆ ದೇಶವನ್ನು ಸದೃಢವಾಗಿ ಕಟ್ಟುವ ಮಹತ್ತರ ಜವಾಬ್ದಾರಿಯನ್ನು ನಿಭಾಯಿಸಬೇಕು. ನವರಾಷ್ಟ್ರ ನಿರ್ಮಾಣಕ್ಕೆ ಯುವಜನತೆ ಮುನ್ನುಡಿಯಾಗಬೇಕು ಎಂದು ಅಭಿಪ್ರಾಯಪಟ್ಟರು.

    ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಏಕತೆ ಸಾರುವ ಸಂದೇಶಗಳನ್ನು ಒಳಗೊಂಡ ಕಲಾ ಪ್ರದರ್ಶನಗಳನ್ನು ಪ್ರದರ್ಶಿಸಲಾಯಿತು. ಆದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಸೋಮನಾಥ ಸ್ವಾಮೀಜಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಸಿದ್ದಾಪುರ ಗ್ರಾಪಂ ಅಧ್ಯಕ್ಷೆ ಪ್ರೇಮಾ ಗೋಪಾಲ್ ಇದ್ದರು.

    ಚಿತ್ರ 09ಜಠಿ01:- ಆದಿ ಚುಂಚನಗಿರಿ ವಿದ್ಯಾಸಂಸ್ಥೆಯ 6ನೇ ವಾರ್ಷಿಕೋತ್ಸವ ಸಮಾರಂಭವನ್ನು ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು. ಸೋಮನಾಥ ಸ್ವಾಮೀಜಿ, ರಾಣಿ ಮಾಚಯ್ಯ, ಪ್ರೇಮಾಗೋಪಾಲ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts