More

    ಗೃಹಲಕ್ಷ್ಮೀ ಯೋಜನೆ ಅನುಷ್ಠಾನಕ್ಕೆ ಮುತುರ್ವಜಿ ವಹಿಸಿ

    ಸವಣೂರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಯ ಲಾಭ ಜನಸಾಮಾನ್ಯರಿಗೆ ಸೂಕ್ತ ಸಮಯಕ್ಕೆ ತಲುಪಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ತಹಸೀಲ್ದಾರ್ ಅನಿಲಕುಮಾರ ಜಿ. ಹೇಳಿದರು.

    ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕುರಿತು ತಾಲೂಕು ಮಟ್ಟದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ನಗರ ಹಾಗೂ ಗ್ರಾಮೀಣ ಮಟ್ಟದಲ್ಲಿ ಫಲಾನುಭವಿಗಳಿಗೆ ಸರ್ಕಾರದ ಸುತ್ತೋಲೆ ಪ್ರಕಾರ ಮಾಹಿತಿ ನೀಡುವ ಮೂಲಕ ಅರ್ಜಿ ಪಡೆಯಬೇಕು. ದಾಖಲಾತಿ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು. ಗೊಂದಲ ಉಂಟು ಮಾಡುವ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

    ಸಿಡಿಪಿಒ ಉಮಾ ಕೆ.ಎಸ್. ಅವರು ಯೋಜನೆಯ ಕುರಿತು ಪಿಡಿಒ, ಗ್ರಾಮಲೆಕ್ಕಾಧಿಕಾರಿಗಳಿಗೆ ಹಾಗೂ ಅಂಗನವಾಡಿ ಮೆಲ್ವಿಚಾರಕಿಯರಿಗೆ ಮಾಹಿತಿ ನೀಡುವುದರೊಂದಿಗೆ ಕಾರ್ಯವೈಖರಿ ಬಗ್ಗೆ ವಿವರಿಸಿದರು.

    ತಾಪಂ ಇಒ ನವೀನಪ್ರಸಾದ ಕಟ್ಟಿಮನಿ ಮಾತನಾಡಿ, ಫಲಾನುಭವಿಗಳ ನೋಂದಣಿಗೆ ಜುಲೈ 19ರಂದು ರಾಜ್ಯ ಮಟ್ಟದಲ್ಲಿ ಚಾಲನೆ ದೊರೆಯಲಿದೆ. ಕರ್ನಾಟಕ ಒನ್, ಬೆಂಗಳೂರ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರದಲ್ಲಿ ಪ್ರತಿ ದಿನಕ್ಕೆ 60 ಅರ್ಜಿಗಳು ನೋಂದಣಿಯಾಗುತ್ತವೆ ಎಂದರು.

    ಯೋಜನೆ ಸೌಲಭ್ಯ ಪಡೆಯಲು ಕರ್ನಾಟಕ ಒನ್, ಬೆಂಗಳೂರ ಒನ್, ಗ್ರಾಮ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಉಚಿತವಾಗಿ ನೋಂದಾಯಿಸಬಹುದು ಅಥವಾ ಸ್ವಯಂ ಸೇವಕ ಪ್ರಜಾಪ್ರತಿನಿಧಿಗಳು ಮನೆ ಮನೆಗೆ ತೆರಳಿ ಉಚಿತವಾಗಿ ನೋಂದಣಿ ಮಾಡಿಕೊಳ್ಳುತ್ತಾರೆ. ನೋಂದಣಿಗೆ ಬ್ಯಾಂಕ್ ಪಾಸ್‌ಬುಕ್ ಪ್ರತಿ, ಪಡಿತರ ಕಾರ್ಡ್ ಸಂಖ್ಯೆ, ಯಜಮಾನಿಯ ಆಧಾರ ಕಾರ್ಡ್ ಪ್ರತಿ ಹಾಗೂ ಮೊಬೈಲ್ ಸಂಖ್ಯೆಯ ಅಗತ್ಯವಿದೆ ಎಂದರು.

    ಪಿಡಿಒ, ಗ್ರಾಮಲೆಕ್ಕಾಧಿಕಾರಿಗಳು ಹಾಗೂ ಅಂಗನವಾಡಿ ಮೇಲ್ವಿಚಾರಕಿಯರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts