More

    ಸೌಲಭ್ಯ ಕಲ್ಪಿಸುವಂತೆ ಆಗ್ರಹ

    ಬೆಳಗಾವಿ: ಸೇವಾ ಭದ್ರತೆ, ಸೌಲಭ್ಯ ಕಲ್ಪಿಸುವುದು ಹಾಗೂ ಕೇಂದ್ರ-ರಾಜ್ಯ ಸರ್ಕಾರದ ಕಾರ್ಮಿಕ, ರೈತ ವಿರೋಧ ನೀತಿ ಖಂಡಿಸಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಡಿಸಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟಿಸಿ, ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

    ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಮಿಕ ಮತ್ತು ರೈತ ವಿರೋಧಿ ನೀತಿ ಅನುಸರಿಸುತ್ತಿವೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಸೇವಾ ಭದ್ರತೆ ಮತ್ತು ಸೌಲಭ್ಯ ದೊರೆಯುತ್ತಿಲ್ಲ. ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಪಬ್ಲಿಕ್ ಶಾಲೆಗಳಿಗೆ ಜೋಡಿಸುವ ಪ್ರಯತ್ನ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಅಂಗನವಾಡಿ ಕಾರ್ಯಕರ್ತೆಯರ ಸಂಘದ ರಾಮದುರ್ಗ ತಾಲೂಕು ಅಧ್ಯಕ್ಷೆ ಸರಸ್ವತಿ ಮಾತನಾಡಿ, ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಂದ ಕೆಲಸ ಮಾಡಿಸಿಕೊಂಡು ಸೌಲಭ್ಯಗಳು ಮತ್ತು ಸೇವಾ ಭದ್ರತೆ ನೀಡುತ್ತಿಲ್ಲ. ಸರ್ಕಾರ ಕೆಲಸ ಮಾಡುವವರ ಪರ ಇಲ್ಲ. ಇದನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದೇವೆ ಎಂದರು.

    ಸಿಐಟಿಯು ನಾಯಕಿ ಸಂಧ್ಯಾ ಕುಲಕರ್ಣಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಮಿಕ, ರೈತ ವಿರೋಧಿ ನೀತಿ ಅನುಸರಿಸುತ್ತಿವೆ. ಕರೊನಾ ವೇಳೆ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಪರಿಗಣಿಸದೇ ಅವರನ್ನು ಅತಂತ್ರರನ್ನಾಗಿಸುವ ಪ್ರಯತ್ನ ನಡೆದಿದೆ. ಸರ್ಕಾರ ಕಾರ್ಮಿಕ ವಿರೋಧಿ ನೀತಿ ಕೈಬಿಡಬೇಕು ಎಂದು ಆಗ್ರಹಿಸಿದರು. ಸಿಐಟಿಯುನ ಖಜಾಂಚಿ ಜಿ.ವಿ.ಕುಲಕರ್ಣಿ, ಎಲ್.ಎಸ್. ನಾಯಕ, ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ದೊಡ್ಡವ್ವ ಪೂಜಾರ, ಮಂದಾ ನೇವಗಿ, ಭಾರತಿ ಜೋಗನ್ನವರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts