More

  ಒಡಿಶಾ ರೈಲು ದುರಂತದ ಸಂತ್ರಸ್ತರಿಗೆ 30 ಕೋಟಿ ರೂ. ನೆರವು ನೀಡಿದ್ರಾ ಕೊಹ್ಲಿ? ಇಲ್ಲಿದೆ ಅಸಲಿ ಸಂಗತಿ…

  ನವದೆಹಲಿ: ಒಡಿಶಾ ರೈಲು ದುರಂತವು ದೇಶದ ಜನತೆಯನ್ನು ದುಃಖದಲ್ಲಿ ಮುಳುಗಿಸಿದೆ. ಈ ಅವಘಡದಿಂದ 288 ಮಂದಿ ಸಾವು ಹಾಗೂ 1000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಳಿತಪ್ಪಿ ಸಂಭವಿಸಿದ ರೈಲು ದುರಂತದಿಂದ ಅನೇಕರ ಬದುಕು ಸಹ ಹಳಿತಪ್ಪಿದ್ದು, ಇದರ ನೋವಿನಿಂದ ದೇಶದ ಜನತೆ ಇನ್ನು ಹೊರಬಂದಿಲ್ಲ. ಇದರ ನಡುವೆ ಇದೇ ಘಟನೆಯನ್ನು ಆಧಾರವಾಗಿಟ್ಟುಕೊಂಡು ಅನೇಕ ಸುಳ್ಳುಗಳನ್ನು ಹರಿಬಿಡಲಾಗುತ್ತಿದೆ.

  ಒಡಿಶಾ ರೈಲು ದುರಂತದ ಸಂತ್ರಸ್ತರಿಗಾಗಿ ಟೀಮ್​ ಇಂಡಿಯಾದ ಮಾಜಿ ನಾಯಕ ವಿರಾಟ್​ ಕೊಹ್ಲಿ ಅವರು 30 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇಷ್ಟೇ ಅಲ್ಲದೆ, ಅನೇಕ ಮೊಬೈಲ್​ ವಾಟ್ಸ್​ಆ್ಯಪ್​​ ಸ್ಟೇಟಸ್​ಗಳಲ್ಲಿ ಕೊಹ್ಲಿ ಅವರನ್ನು ಕೊಂಡಾಡುತ್ತಿದ್ದಾರೆ. ಆದರೆ, ಈ ಸುದ್ದಿ ಸುಳ್ಳು ಎಂದು ಫ್ರೀ ಪ್ರೆಸ್​ ಜರ್ನಲ್​ (Free Press Journal) ವರದಿ ಮಾಡಿದೆ.

  ಇದನ್ನೂ ಓದಿ: ಜನಸಂಖ್ಯೆಗಿಂತಲೂ ಅಧಿಕ ಆಧಾರ್!; 9 ರಾಜ್ಯಗಳಲ್ಲಿ ಬದುಕಿರುವವರಿಗಿಂತ ಹೆಚ್ಚು ಕಾರ್ಡ್

  ಕೊಹ್ಲಿ ಯಾವುದೇ ನೆರವು ಘೋಷಣೆ ಮಾಡಿಲ್ಲ. ಬದಲಾಗಿ ಅವರು ರೈಲು ದುರಂತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಕೊಹ್ಲಿ ಹಣದ ನೆರವು ನೀಡಿದ್ದಾರೆ ಎಂಬುದಕ್ಕೆ ಸಾಕ್ಷ್ಯಾಧಾರಗಳು ಇಲ್ಲ.

  ಒಡಿಶಾ ರೈಲು ದುರಂತದ ಬಗ್ಗೆ ಕೇಳಿ ಅತೀವ ದುಃಖವಾಯಿತು. ತಮ್ಮ ಕುಟುಂಬದ ಪ್ರೀತಿ ಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಆ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಕೊಹ್ಲಿ ಟ್ವೀಟ್​ ಮಾಡಿದ್ದರು. ಆದರೆ, ಕೊಹ್ಲಿ, ನೆರವು ನೀಡಿದ್ದಾರೆ ಎನ್ನುವುದಕ್ಕೆ ಯಾವುದೇ ಪುರಾವೆ ಇಲ್ಲ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ತಪ್ಪು ಮಾಹಿತಿ ಆಗಿದೆ.

  ಸದ್ಯ ಕೊಹ್ಲಿ ಅವರು ವಿಶ್ವ ಟೆಸ್ಟ್​ ಚಾಂಪಿಯನ್​ಶಿಫ್​ನಲ್ಲಿ ಪಾಲ್ಗೊಳ್ಳಲು ಲಂಡನ್​ನಲ್ಲಿದ್ದಾರೆ. ನಾಳೆಯಿಂದ ಟೆಸ್ಟ್​ ಚಾಂಪಿಯನ್​ಶಿಫ್​ ಆರಂಭವಾಗಲಿದೆ. (ಏಜೆನ್ಸೀಸ್​)

  ಯಾವುದೇ ಕ್ಷಣದಲ್ಲೂ ಬಿಬಿಎಂಪಿ ಚುನಾವಣೆ ಆಗಬಹುದು: ಸಚಿವ ರಾಮಲಿಂಗಾರೆಡ್ಡಿ

  ರಕ್ಷಣಾತ್ಮಕ ಹೆಜ್ಜೆ: ಭಾರತ-ಅಮೆರಿಕ ಬಂಧ ಇನ್ನಷ್ಟು ಗಟ್ಟಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts