More

    FACT CHECK| ಜೆಡಿಎಸ್​ ಶಾಸಕ ಬಿ. ಸತ್ಯನಾರಾಯಣ ನಿಧನ ಸುದ್ದಿ ನಿಜವಾ?

    ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಜೆಡಿಎಸ್​ ಶಾಸಕ ಬಿ. ಸತ್ಯನಾರಾಯಣ ಅವರು ಮಂಗಳವಾರ ನಿಧನರಾಗಿದ್ದಾರೆ ಎಂದು ಸುದ್ದಿ ಹರಿದಾಡಿತ್ತು.

    ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕರು ಕೆಲದಿನಗಳಿಂದ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಮಧ್ಯಾಹ್ನ 12.30ರ ಸುಮಾರಿಗೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಬಗ್ಗೆ ದಿಗ್ವಿಜಯ ನ್ಯೂಸ್ ಗೆ ಸ್ಪಷ್ಟನೆ ನೀಡಿದ ಶಾಸಕರ ಅಳಿಯ ರಾಘವೇಂದ್ರ ಅವರು, ‘ಸತ್ಯನಾರಾಯಣ್​ಗೆ ಇನ್ನೂ ಚಿಕಿತ್ಸೆ ನೀಡಲಾಗ್ತಿದೆ. ಅವರು ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದು, ವೆಂಟಿಲೇಟರ್​ನಲ್ಲಿದ್ದಾರೆ. ಸದ್ಯ ಅವರ ಸಾವಿನ ಕುರಿತ ವರದಿಗಳು ಸುಳ್ಳು’ ಎಂದು ಸ್ಪಷ್ಟಪಡಿಸಿದ್ದಾರೆ.

    ಇದನ್ನೂ ಓದಿರಿ ಆಸ್ಪತ್ರೆಯಲ್ಲಿ ಕಾಲ ಕಳೆಯೋದು ಕಷ್ಟ ಎಂದು ಸಿಎಂ ಯಡಿಯೂರಪ್ಪ ಏನ್​ ಮಾಡಿದ್ರು ಗೊತ್ತಾ?

    1994ರಲ್ಲಿ ಜನತಾದಳದಿಂದ ಮೊದಲ ಬಾರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಶೀಲರಾದ ಬಿ.ಸತ್ಯನಾರಾಯಣ ಅವರು 1996ರಲ್ಲಿ ಜೆ.ಎಚ್.ಪಟೇಲರ ಸಂಪುಟದಲ್ಲಿ ಕಾರ್ಮಿಕ ಸಚಿವರಾಗಿದ್ದರು. ಜತೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೂಡ ಆಗಿದ್ದರು.

    1999ರ ಚುನಾವಣೆಯಲ್ಲಿ ಸೋತ ಸತ್ಯನಾರಾಯಣ 2004ರಲ್ಲಿ ಮತ್ತೆ ವಿಧಾನಸಭೆ ಪ್ರವೇಶಿಸಿದರು. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಧರ್ಮಸಿಂಗ್ ಸಂಪುಟದಲ್ಲಿ ಮಂತ್ರಿಯಾದರು.

    2008, 2013ರ ಚುನಾವಣೆಯಲ್ಲಿ ಸತತ ಸೋಲು ಅನುಭವಿಸಿದರು. 2019ರಲ್ಲಿ ಮತ್ತೆ ಜಯಗಳಿಸಿದರು. ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಸತ್ಯನಾರಾಯಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ವಿಪಕ್ಷ ನಾಯಕ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಮಂಡ್ಯದಲ್ಲಿ ಶುರುವಾಯ್ತು ಟೆನ್ಶನ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts