ವಿಚ್ಛೇದನ ವದಂತಿ ನಡುವೆಯೇ ಸಾಮಾಜಿಕ ಜಾಲತಾಣದಲ್ಲಿ ಹಾರ್ದಿಕ್​ ಪತ್ನಿಯ ಪೋಸ್ಟ್​ ವೈರಲ್​

Hardik Natasha
Published on

ನವದೆಹಲಿ: ಐಪಿಎಲ್​ ಶುರುವಾಗುವುದಕ್ಕೂ ಮುಂಚಿನಿಂದಲೂ ಒಂದಲ್ಲ ಒಂದು ವಿಚಾರಕ್ಕೆ ಸದ್ದು ಮಾಡುತ್ತಿರುವ ಹಾರ್ದಿಕ್​ ಪಾಂಡ್ಯ ಕಳೆದ ಕೆಲ ದಿನಗಳಿಂದ ಮತ್ತೊಂದು ವಿಚಾರವಾಗಿ ಸದ್ದು ಮಾಡುತ್ತಿದ್ದಾರೆ. ಪತ್ನಿ ನತಾಶಾಗೆ ಹಾರ್ದಿಕ್​ ಡಿವೋರ್ಸ್​ ಕೊಡುತ್ತಾರೆ ಎಂದು ಹೇಳಲಾಗಿದ್ದು, ಇದಕ್ಕೆ ಪುಷ್ಠಿ ನೀಡುವಂತೆ ಇದೀಗ ನತಾಶಾ ಅವರು ಪೋಸ್ಟ್​ ಒಂದನ್ನು ಶೇರ್​ ಮಾಡಿದ್ದು, ವಿಚ್ಛೇದನ. ವದಂತಿಗೆ ಇಂಬು ನೀಡಿದೆ.

ಮೇ 24ರಂದು ರೆಡ್ಡಿಟ್​ ಪೋಸ್ಟ್​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ಬಳಿಕ ಇವರು ವಿಚ್ಚೇದನ ಸುದ್ದಿಗೆ ಪುಷ್ಠಿ ನೀಡಿದೆ. ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಸ್ಟಾಂಕೋವಿಕ್ 2020 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದಾದ ಬಳಿಕ ಪ್ರತಿ ಸೀಸನ್ ಐಪಿಎಲ್​ನಲ್ಲೂ ನತಾಶಾ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಪಾಂಡ್ಯ ಪಾದಾರ್ಪಣೆ ಮಾಡಿದರೂ, ನತಾಶಾ ಮಾತ್ರ ಕಾಣಿಸಿಕೊಂಡಿರಲಿಲ್ಲ. ಅಲ್ಲದೆ​ ಯಾವುದೇ ಪಂದ್ಯವನ್ನು ವೀಕ್ಷಿಸಲು ಅವರು ಆಗಮಿಸಿರಲಿಲ್ಲ.

Hardik

ಅತ್ತ ನತಾಶಾ ಸ್ಟಾಂಕೋವಿಕ್ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಿಂದ ಪಾಂಡ್ಯ ಉಪನಾಮವನ್ನು ತೆಗೆದು ಹಾಕಿದ್ದಾರೆ. ಅಲ್ಲದೇ ಇತ್ತೀಚಿನ ದಿನಗಳಲ್ಲಿ ಹಾರ್ದಿಕ್ ಪಾಂಡ್ಯ ಜೊತೆಗಿನ ಒಂದೇ ಒಂದು ಫೋಟೋವನ್ನು ಶೇರ್ ಮಾಡಿಲ್ಲ. ಈ ಎಲ್ಲಾ ಕಾರಣಗಳಿಂದಾಗಿ ಇದೀಗ ಇಬ್ಬರು ಡೈವೋರ್ಸ್ ಆಗಲಿದ್ದಾರೆ ಎಂದು ಹೇಳಲಾಗಿದೆ. ಇತ್ತ ನತಾಶಾ ಅವರು ಸಾಮಾಜಿಕ ಜಾಲತಾಣದಲ್ಲಿ ಸಮ್​ ಒನ್​ ಇಸ್​ ರೆಡಿ ಟು ಗೆಟ್​ ಆನ್​ ದಿ ಸ್ಟ್ರೀಟ್ಸ್​ ಎಂಬ ಸ್ಟೋರಿಯನ್ನು ಶೇರ್​ ಮಾಡಿದ್ದು, ವಿಚ್ಛೇದನ. ವದಂತಿಗೆ ಮತ್ತಷ್ಟು ಪುಷ್ಠಿ ನೀಡಿದೆ.

ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು. ಏಕೆಂದರೆ ಪಾಂಡ್ಯ ಅವರ ಹೆಂಡತಿ ಸರ್ಬಿಯಾ ದೇಶದವರು. ಹೀಗಾಗಿ ಅವರು ಜೀವನಾಂಶವನ್ನು ಸರ್ಬಿಯನ್ ದಿನಾರ್​ನಲ್ಲಿ ಪಡೆದುಕೊಳ್ಳುವ ಸಾಧ್ಯತೆಯಿದೆ. ಈ ಎಲ್ಲಾ ಕಾರಣಗಳಿಂದಾಗಿ ಪಾಂಡ್ಯ ತಮ್ಮ ಮುಂದಿನ ನಡೆಯ ಬಗ್ಗೆ ಎಲ್ಲೂ ಕೂಡ ಮಾತನಾಡುತ್ತಿಲ್ಲ ಎಂದು ವರದಿಯಾಗಿದೆ. ಮುಂದಿನ ದಿನಗಳಲ್ಲಿ ಇದು ಯಾವ ಹಂತ ತಲುಪಲಿದೆ ಎಂದು ಕಾದು ನೋಡಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net