17.8 C
Bengaluru
Wednesday, January 22, 2020

ಮಗಳ ಅತ್ಯಾಚಾರ ನಡೆಸಿದವನಿಗೆ ತಂದೆಯಿಂದ ಕ್ರೂರ ಹಿಂಸೆ ಎಂಬ ವೈರಲ್​ ಪೋಸ್ಟ್​ ನಕಲಿ: ಫ್ಯಾಕ್ಟ್​ಚೆಕ್​ನಲ್ಲಿ ಬಯಲು

Latest News

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಎಲ್ಲರನ್ನೂ ಪ್ರೀತಿ, ಗೌರವದಿಂದ ಕಾಣಿ

ರಟ್ಟಿಹಳ್ಳಿ: ಸಮಾಜದಲ್ಲಿ ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಂಡರೆ ಎಲ್ಲರ ಮನಸ್ಸು ಗೆಲ್ಲಬಹುದು. ಯಾವುದೇ ವ್ಯಕ್ತಿ ಅಥವಾ ಸಮಾಜದ ವಿರುದ್ಧ ದ್ವೇಷ ಸಾಧಿಸಬಾರದು....

ನವದೆಹಲಿ: ತಂದೆಯೊಬ್ಬ ತನ್ನ ಮೂರು ವರ್ಷದ ಮಗಳನ್ನು ಅತ್ಯಾಚಾರ ಮಾಡಿದ ವ್ಯಕ್ತಿಯನ್ನು ಪತ್ತೆ ಮಾಡಿ ಆತನಿಗೆ ಕ್ರೂರ ಹಿಂಸೆ ನೀಡಿದ್ದಾನೆ ಎನ್ನುವ ಫೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿತ್ತು.

ದಕ್ಷಿಣ ಆಫ್ರಿಕಾದ ಸೊವೆಟೊ ಪಟ್ಟಣದಲ್ಲಿ ನಡೆದ ಘಟನೆಯನ್ನು ಪೋಸ್ಟ್​ ಮಾಡಲಾಗಿತ್ತು. ಕ್ರೂರ ಹಿಂಸೆ ನೀಡಿದ ವ್ಯಕ್ತಿಯನ್ನು ಇಬ್ಬರು ಪೊಲೀಸರು ಬಂಧಿಸಿರುವ ಚಿತ್ರವನ್ನು ಅಪ್​ಲೋಡ್​ ಮಾಡಲಾಗಿತ್ತು.

ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದ ಈ ಪೋಸ್ಟ್​ ನಕಲಿ ಎಂದು ಫ್ಯಾಕ್ಟ್​ ಚೆಕ್​ನಿಂದ ಪತ್ತೆಯಾಗಿದೆ.

“ಈ ಸೊವೆಟೊ ಪಟ್ಟಣದ ತಂದೆ ತನ್ನ 3 ವರ್ಷದ ಮಗಳ ಮೇಲೆ ಅತ್ಯಾಚಾರ ಮಾಡಿದ ವ್ಯಕ್ತಿಯನ್ನು ಪತ್ತೆಹಚ್ಚಿ, ಅವನನ್ನು ಮರಕ್ಕೆ ಕಟ್ಟಿ, ಅತ್ಯಾಚಾರಿಯ ಗುಪ್ತ ಅಂಗವನ್ನು ಕತ್ತರಿಸಿ, ಬೇಯಿಸಿ, ಮತ್ತು ಅದನ್ನು ತಿನ್ನಲು ಮುಂದಾಗಿದ್ದ ಎಂದು ಪೋಸ್ಟ್​ ಮಾಡಲಾಗಿತ್ತು.
ಇಂಡಿಯಾ ಟುಡೆ ಆಂಟಿ ಫೇಕ್ ನ್ಯೂಸ್ ವಾರ್ ರೂಮ್ (ಎಎಫ್‌ಡಬ್ಲ್ಯೂಎ) ನಡೆಸಿದ ಫ್ಯಾಕ್ಟ್​ ಚೆಕ್​ನಿಂದ ಆ ಪೋಸ್ಟ್​ ನಕಲಿ ಎಂದು ಪತ್ತೆಯಾಗಿದೆ.
ಪೋಟೋದಲ್ಲಿರುವ ವ್ಯಕ್ತಿ ವಿದೇಶಿ ಪ್ರಜೆಗಳಿಂದ ಹಣ ಲೂಟಿ ಮಾಡಿದ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ. ದಕ್ಷಿಣ ಆಫ್ರಿಕಾದ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದರು. ಪೊಲೀಸರು ಫೆಬ್ರವರಿ 2017ರಲ್ಲಿ ಬಂಧಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಟ್ವೀಟ್​ನಿಂದ ವೈರಲ್​ : ಟ್ವೀಟರ್​ ಬಳಕೆದಾರ ಜಡ್ಡಿ ಅಜಲಾ’ ಟ್ವೀಟ್ ಈ ಪೋಸ್ಟ್​ ಅನ್ನು ಟ್ವೀಟ್​ ಮಾಡಿದ್ದರಿಂದ ಈ ಪೋಸ್ಟ್ ವೈರಲ್ ಆಗಿದೆ. ಅಲ್ಲದೆ ಈ ಪೋಸ್ಟ್​ ಅನ್ನು 500 ಕ್ಕೂ ಹೆಚ್ಚು ಮಂದಿ ಮರು ಟ್ವೀಟ್​ ಮಾಡಿದ್ದಾರೆ. ಅಲ್ಲದೆ ಹಲವಾರು ಫೇಸ್‌ಬುಕ್ ಬಳಕೆದಾರರು ಈ ಪೋಸ್ಟ್ ಅನ್ನು ಹಂಚಿಕೊಂಡಿದ್ದರು.

ವೈರಲ್ ಫೋಟೋವನ್ನು ಗೂಗಲ್​ನಲ್ಲಿ ಹುಡುಕಿದಾಗ ಡೈಲಿ ಮೇಲ್​ನಲ್ಲಿ ವಿವರ ಪತ್ತೆಯಾಯಿತು. ಇದು ತುಂಬಾ ಹಳೇಯ ಪೋಟೋ. ಪ್ರಿಟೋರಿಯಾದಲ್ಲಿ ಈತ ಕಳವು ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಎಂಬ ಮಾಹಿತಿ ಕೂಡ ಲಭ್ಯವಾಯಿತು.

ವೈರಲ್ ಫೋಟೋ ಬಗ್ಗೆ ಯುರೋಪಿಯನ್ ಪ್ರೆಸ್‌ಫೋಟೋ ಏಜೆನ್ಸಿಯಲ್ಲಿಯೂ ಮಾಹಿತಿ ಇದೆ. ಹೀಗಾಗಿ ವೈರಲ್ ಫೋಟೋ ಮೂರು ವರ್ಷದ ಮಗಳನ್ನು ಅತ್ಯಾಚಾರ ಮಾಡಿದ ವ್ಯಕ್ತಿಗೆ ಕ್ರೂರ ಹಿಂಸೆ ಮಾಡಿದ ತಂದೆಗೆ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟವಾಗಿದೆ.

2014 ರಲ್ಲಿ ದೆಹಲಿಯಲ್ಲಿ ಇದೇ ರೀತಿಯ ಪ್ರಕರಣ ವರದಿಯಾಗಿತ್ತು. 14 ವರ್ಷದ ಮಗಳನ್ನು ಅತ್ಯಾಚಾರ ಮಾಡಿದ ಆರೋಪದ ಮೇಲೆ ತಂದೆ ವ್ಯಕ್ತಿಯೊಬ್ಬನನ್ನು ಪತ್ತೆ ಮಾಡಿ ಆತನನ್ನು ಹಿಂಸಿಸಿ ಕೊಲೆ ಮಾಡಿದ್ದ ಎಂದು ದಿ ಇಂಡಿಯನ್​ ಎಕ್ಸ್​ಪ್ರೆಸ್​ ಪತ್ರಿಕೆ ವರದಿ ಪ್ರಕಟಿಸಿತ್ತು.

ಅತ್ಯಾಚಾರ ಎಸಗಿದ ಎನ್ನಲಾದ ವ್ಯಕ್ತಿಯ ಗುಪ್ತ ಅಂಗ ಸುಟ್ಟು ಕೊಲೆ ಮಾಡಲಾಗಿತ್ತು. (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...