More

    ಕಾರ್ಖಾನೆ ಅಭಿವೃದ್ಧಿಗೆ ಸಹಕಾರ ನೀಡಿ

    ಗೋಕಾಕ: ಅರಬಾವಿ ಶಾಸಕ ಹಾಗೂ ಕೆಎಂಎ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನ ಹಾಗೂ ರೈತರ ಸಹಕಾರದಿಂದ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಹೇಳಿದ್ದಾರೆ.

    ಶುಕ್ರವಾರ ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಸನ್ 2020-21ನೇ ಸಾಲಿನ ಕಬ್ಬು ನುರಿಸುವ ಹಂಗಾಮು ಪ್ರಾರಂಭೋತ್ಸವ ಸಮಾರಂಭದಲ್ಲಿ ಮಾತನಾಡಿ, ಪ್ರತಿ ವರ್ಷದಂತೆ ಕಾರ್ಖಾನೆಗೆ ಅಗತ್ಯ ಕಬ್ಬು ಪೂರೈಸಿ ಅಭಿವೃದ್ಧಿಗೆ ಸಹಕರಿಸಬೇಕು ಎಂದು ರೈತರನ್ನು ಕೋರಿದರು.

    ಅರಬಾವಿ ದುರದುಂಡೀಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿ ಕಬ್ಬು ನುರಿಸುವ ಹಂಗಾಮಿಗೆ ಪೂಜೆ ಸಲ್ಲಿಸಿದರು. ಕಾರ್ಖಾನೆ ಉಪಾಧ್ಯಕ್ಷ ರಾಮಣ್ಣ ಮಹಾರೆಡ್ಡಿ, ನಿರ್ದೇಶಕರಾದ ಬಸಗೌಡ ಪಾಟೀಲ(ಕಲ್ಲೋಳಿ), ಕೆಂಚನಗೌಡ ಪಾಟೀಲ, ಕೃಷ್ಣಪ್ಪ ಬಂಡ್ರೋಳ್ಳಿ, ಶಿವಲಿಂಗ ಪೂಜೇರಿ, ಮಹಾದೇವಪ್ಪ ಭೋವಿ, ಮಾಳಪ್ಪ ಜಾಗನೂರ, ಸಿದ್ಧಲಿಂಗ ಕಂಬಳಿ, ಮಲ್ಲಿಕಾರ್ಜುನ ಕಬ್ಬೂರ, ಗಿರೀಶ ಹಳ್ಳೂರ, ಯಲ್ಲವ್ವ ಸಾರಾಪುರ, ಲಕ್ಕವ್ವ ಬೆಳಗಲಿ, ಕಾರ್ಖಾನೆ ಸಲಹಾ ಸಮಿತಿ ಸದಸ್ಯರಾದ ವಿಕ್ರಂ ಅಂಗಡಿ, ಸೈದಪ್ಪ ಗದಾಡಿ, ಬಸವರಾಜ ಕಲ್ಯಾಣಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕ ಬಸವರಾಜ ಮಂಟೂರ, ಕಬ್ಬು ಅಭಿವೃದ್ಧಿ ಅಧಿಕಾರಿ ಜೆ.ಆರ್.ಬಬಲೇಶ್ವರ, ಸುತ್ತಮುತ್ತಲಿನ ಗ್ರಾಮಗಳು ರೈತರು ಉಪಸ್ಥಿತರಿದ್ದರು.

    ಪ್ರಸಕ್ತ ಹಂಗಾಮಿನಲ್ಲಿ 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸಿ, 5 ಲಕ್ಷ ಕ್ವಿಂಟಾಲ್ ಸಕ್ಕರೆ ಉತ್ಪಾದಿಸುವ ಗುರಿ ಹೊಂದಲಾಗಿದೆ. ಕಾರ್ಖಾನೆಯ ಪ್ರಗತಿಯಲ್ಲಿ ರೈತರ ಸಹಕಾರ ಮುಖ್ಯವಾಗಿದೆ. ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಕ್ಕರೆ ಕಾರ್ಖಾನೆಯು ರೈತರ ಆಸ್ತಿಯಾಗಿದೆ. ಅನ್ನದಾತರ ಆರ್ಥಿಕ ಅಭಿವೃದ್ಧಿಗೆ ನಾನು ಸದಾ ಸಿದ್ಧ.
    | ಬಾಲಚಂದ್ರ ಜಾರಕಿಹೊಳಿ ಶಾಸಕ, ಕೆಎಂಎಫ್ ಅಧ್ಯಕ್ಷ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts