More

    ಈ ಸ್ಟಾರ್ ಬ್ಯಾಟರ್‌ಗೆ ಆರ್‌ಸಿಬಿ ನಾಯಕತ್ವ ?

    ಬೆಂಗಳೂರು: ಸ್ಟಾರ್ ಬ್ಯಾಟರ್ ಫಾಫ್ ಡು ಪ್ಲೆಸಿಸ್, ಮುಂಬರುವ 15ನೇ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡವನ್ನು ಮುನ್ನಡೆಸುವುದು ಬಹುತೇಕ ಖಚಿತವಾಗಿದೆ. ಈ ಕುರಿತು ಅಧಿಕೃತ ಘೋಷಣೆಯೊಂದಿಗೆ ಬಾಕಿಯಿದೆ ಎಂದು ತಂಡದ ಮೂಲಗಳು ತಿಳಿಸಿವೆ. ಕಳೆದ ಆವೃತ್ತಿಯ ಮಧ್ಯದಲ್ಲಿಯೇ ವಿರಾಟ್ ಕೊಹ್ಲಿ ನಾಯಕತ್ವ ತ್ಯಜಿಸುವುದಾಗಿ ಘೋಷಿಸಿದ್ದರು. ಇದರ ಬೆನ್ನಲ್ಲೇ ಸ್ಫೋಟಕ ಬ್ಯಾಟರ್ ಎಬಿ ಡಿವಿಲಿಯರ್ಸ್‌ ಕೂಡ ನಿವೃತ್ತಿ ಹೊಂದಿದರು.

    ಇದೀಗ ದಕ್ಷಿಣ ಆಫ್ರಿಕಾದ ಬ್ಯಾಟರ್ ಪ್ಲೆಸಿಸ್‌ಗೆ ನಾಯಕತ್ವ ಒಲಿಯುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಈ ಮೊದಲು ಆಸ್ಟ್ರೇಲಿಯಾದ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್ ನಾಯಕರಾಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಮದುವೆಯಿಂದಾಗಿ ಮ್ಯಾಕ್ಸ್‌ವೆಲ್ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗುತ್ತಿರುವ ಹಿನ್ನೆಲೆಯಲ್ಲಿ ಪ್ಲೆಸಿಸ್ ಅವರನ್ನು ಈ ಸ್ಥಾನಕ್ಕೆ ಪರಿಗಣಿಸಲಾಗುತ್ತಿದೆ ಎನ್ನಲಾಗಿದೆ.ಈ ಸ್ಟಾರ್ ಬ್ಯಾಟರ್‌ಗೆ ಆರ್‌ಸಿಬಿ ನಾಯಕತ್ವ ?

    ‘ನಾಯಕತ್ವ ಸ್ಥಾನಕ್ಕೆ ಪ್ಲೆಸಿಸ್ ಮೊದಲ ಆಯ್ಕೆಯಾಗಿದ್ದಾರೆ. ಮ್ಯಾಕ್ಸ್‌ವೆಲ್ ಆರಂಭಿಕ ಕೆಲ ಪಂದ್ಯಗಳಿಗೆ ಅಲಭ್ಯರಾಗಲಿದ್ದು, ಹೀಗಾಗಿ ಪ್ಲೆಸಿಸ್ ಅವರೇ ಸೂಕ್ತ ಆಯ್ಕೆಯಾಗಿದ್ದಾರೆ’ ಎಂದು ತಂಡದ ಮೂಲಗಳು ಖಚಿತಪಡಿಸಿವೆ. ಮ್ಯಾಕ್ಸ್‌ವೆಲ್, ಪ್ಲೆಸಿಸ್ ಜತೆಗೆ ಅನುಭವಿ ದಿನೇಶ್ ಕಾರ್ತಿಕ್ ಹೆಸರು ಕೂಡ ನಾಯಕನ ಸ್ಥಾನಕ್ಕೆ ಕೇಳಿಬಂದಿತ್ತು. ಪ್ಲೆಸಿಸ್ ಮೂರು ಮಾದರಿಯಲ್ಲೂ ದಕ್ಷಿಣ ಆಫ್ರಿಕಾ ತಂಡ ಮುನ್ನಡೆಸಿದ ಅನುಭವ ಹೊಂದಿದ್ದಾರೆ. ಐಪಿಎಲ್ ಆಟಗಾರರ ಮೆಗಾ ಹರಾಜಿನಲ್ಲಿ ಪ್ಲೆಸಿಸ್ ಅವರನ್ನು ಆರ್‌ಸಿಬಿ 7 ಕೋಟಿ ರೂಪಾಯಿಗೆ ಖರೀದಿಸಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts