20.8 C
Bangalore
Sunday, December 8, 2019

ಸರ್ಕಾರಿ ಕೆಲಸಕ್ಕೆ ಅಡ್ಡಿ ವಿರುದ್ಧ ಕ್ರಮಕ್ಕೆ ಮೀನಮೇಷ

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ಮೈಸೂರು: ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ವ್ಯಕ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮೀನಮೇಷ ಎಣಿಸುತ್ತಿದೆ.

ಯಾವುದೇ ಅನುಮತಿ ಪಡೆಯದೆ ವಾಣಿಜ್ಯ ಉದ್ದೇಶಕ್ಕೆ ‘ಶಾದಿಮಹಲ್’ ನಿರ್ಮಾಣ ಮಾಡಲು ಮುಂದಾಗಿದ್ದನ್ನು ತಡೆಯಲು ತೆರೆಳಿದ್ದ ಮುಡಾ ಅಧಿಕಾರಿ, ಸಿಬ್ಬಂದಿಗೆ ಕಟ್ಟಡ ಮಾಲೀಕರಾದ ಮುಶೀರ್ ಅಹಮದ್, ಮೊಹಮದ್ ಫಾಹಿದ್ ಬೆದರಿಕೆ ಹಾಕಿದ್ದಾರೆ. ಅಲ್ಲದೆ ನಿಯಮಬಾಹಿರ ಕಟ್ಟಡ ನಿರ್ಮಾಣವನ್ನು ತೆರವುಗೊಳಿಸಲು ಮುಂದಾದಾಗ ಕಟ್ಟಡದ ಛಾವಣಿ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.

ಇಷ್ಟಾಗಿಯೂ ಮುಡಾ ಅಧಿಕಾರಿಗಳು ಕಟ್ಟಡ ಮಾಲೀಕರ ವಿರುದ್ಧ ಕ್ರಮಕ್ಕೆ ಮುಂದಾಗಿಲ್ಲ. ಜನರು ವಾಸಕ್ಕೆ ಮನೆ ನಿರ್ಮಿಸಿಕೊಂಡಿದ್ದರೆ ಯಾವುದೇ ಮುಲಾಜಿಲ್ಲದೆ ಸಾಮಾನು ಹೊರಗೆಸೆದು ಅಕ್ರಮ ತೆರವುಗೊಳಿಸುವ, ಅಡ್ಡಿಪಡಿಸಿದರೆ ದಾಕ್ಷಿಣ್ಯವಿಲ್ಲದೆ ಪೊಲೀಸರಿಗೆ ದೂರು ನೀಡುವ ಅಧಿಕಾರಿಗಳು ಈ ಪ್ರಕರಣದಲ್ಲಿ ಯಾವುದೋ ಮುಲಾಜಿಗೆ ಒಳಗಾದಂತೆ ಕಂಡು ಬಂದಿದೆ ಎನ್ನುವ ಆರೋಪ ಕೇಳಿ ಬರುತ್ತಿದೆ.

ಅಧಿಕಾರಿಗಳಿಂದ ಉದಾರತೆ ಉತ್ತರ: ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ್ದಲ್ಲದೆ ಛಾವಣಿ ಏರಿ ಆತ್ಮಹತ್ಯೆ ಬೆದರಿಕೆ ಹಾಕಿದವರ ವಿರುದ್ಧ ಯಾವುದೇ ಕ್ರಮಕೈಗೊಳ್ಳದ ಬಗ್ಗೆ ಅಧಿಕಾರಿಗಳು ಉದಾರತೆಯ ಉತ್ತರ ನೀಡುತ್ತಾರೆ.
ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆಯಲು ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸಿದ್ದಾರೆ. ಅಲ್ಲಿಂದ ಅನುಮತಿ ದೊರೆಯಲಿದೆ ಎನ್ನುವ ಉದ್ದೇಶದಿಂದ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಅಷ್ಟೊಂದು ಖರ್ಚು ಮಾಡಿರುವುದರಿಂದ ಸಮಯಾವಕಾಶ ಕೋರಿದ್ದಾರೆ. ಇನ್ನು ಮೂರು ತಿಂಗಳಲ್ಲಿ ಅನುಮತಿ ಪಡೆದು ಕಾಮಗಾರಿ ಮುಂದುವರಿಸುತ್ತೇನೆ. ಒಂದೊಮ್ಮೆ ಅನುಮತಿ ದೊರೆಯದಿದ್ದರೆ ನಾನೇ ಕಟ್ಟಡ ತೆರವುಗೊಳಿಸುವುದಾಗಿ ಮಾಲೀಕರು ಮುಚ್ಚಳಿಕೆ ಬರೆದು ಕೊಟ್ಟಿದ್ದಾರೆ. ಹೀಗಾಗಿ ಮಾನವೀಯತೆ ದೃಷ್ಟಿಯಿಂದ ಮಾಲೀಕರ ವಿರುದ್ಧ ಯಾವುದೇ ಕ್ರಮಕೈಗೊಳ್ಳದೆ ಕಾಲಾವಕಾಶ ನೀಡಿರುವುದಾಗಿ ಮುಡಾ ಅಧಿಕಾರಿಗಳು ಅನುಕಂಪದ ಮಾತನಾಡುತ್ತಿದ್ದಾರೆ.

ಪಾಲಿಕೆ ಸದಸ್ಯರ ಕೃತ್ಯ: ಕಟ್ಟಡ ಗೊಂದಲಕ್ಕೆ 10ನೇ ವಾರ್ಡ್‌ನ ಸದಸ್ಯ ಕಾಂಗ್ರೆಸ್‌ನ ಅಫ್ತಾಬ್ (ಅನ್ವರ್‌ಬೇಗ್) ಕಾರಣ ಎಂಬುದು ಕಟ್ಟಡ ಮಾಲೀಕ ಮುಶೀರ್ ಅಹಮದ್ ಆರೋಪವಾಗಿದೆ.

ನಗರಪಾಲಿಕೆ ಚುನಾವಣೆಗೂ ಮೊದಲೇ ತಾತ್ಕಾಲಿಕ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತ ಬಂದಿದೆ. ಆದರೆ ನಗರಪಾಲಿಕೆ ಚುನಾವಣೆಯಲ್ಲಿ ಗೆದ್ದು ಬಂದ ಅಫ್ತಾಬ್ ಅವರು ಕಟ್ಟಡ ನಿರ್ಮಾಣಕ್ಕೆ ನನ್ನ ಅನುಮತಿ ಪಡೆದುಕೊಳ್ಳಬೇಕು ಎಂದು ಹೇಳಿದ್ದಲ್ಲದೆ ಚುನಾವಣೆಗಾಗಿ ಒಂದೂವರೆ ಕೋಟಿ ರೂ. ಖರ್ಚು ಮಾಡಿದ್ದೇನೆ. ಅನುಮತಿ ನೀಡಲು 25 ಲಕ್ಷ ರೂ. ನೀಡಬೇಕು ಎನ್ನುವ ಬೇಡಿಕೆ ಇಟ್ಟರು. ಹಣ ನೀಡದಿದ್ದರಿಂದ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ತೊಂದರೆ ಕೊಡುತ್ತಿದ್ದಾರೆ ಎನ್ನುವ ದೂರು ಅವರದ್ದು.

ನನ್ನ ಸ್ವಂತ ಜಾಗದಲ್ಲಿ ಶಾಲೆ ನಿರ್ಮಿಸುವ ಉದ್ದೇಶದಿಂದ ಭೂ ಪರಿವರ್ತನೆಗಾಗಿ 2017ರ ಜೂನ್ 6ರಂದು ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸಿದ್ದೆ. ಆದರೆ ನಮ್ಮ ನೆರೆಯವರು ಕಲ್ಯಾಣ ಮಂಟಪ ಕಟ್ಟಲು ಮುಂದಾಗಿ ಕೈ ಬಿಟ್ಟಿದ್ದರಿಂದ 7 ತಿಂಗಳ ಹಿಂದೆ ಕಲ್ಯಾಣ ಮಂಟಪಕ್ಕೆ ಅನುಮತಿ ನೀಡುವಂತೆ ಮರು ಅರ್ಜಿ ಸಲ್ಲಿಸಿದೆೆ. ಆದರೆ ಅಲ್ಲಿಂದ ಇದುವರೆವಿಗೂ ಯಾವುದೇ ಮಾಹಿತಿ ಬಂದಿಲ್ಲ. ಸರ್ಕಾರಿ ನಿಯಮದ ಪ್ರಕಾರ 4 ತಿಂಗಳೊಳಗೆ ಯಾವುದೇ ಪ್ರತಿಕ್ರಿಯೆ ಬಾರದಿದ್ದರೆ ತನ್ನಿಂದ ತಾನೇ ಭೂಪರಿವರ್ತನೆಯಾದಂತೆ ಅಗುತ್ತದೆ. ಹಾಗಾಗಿ ಸರ್ಕಾರ ವಿಧಿಸುವ ಶುಲ್ಕ ನೀಡಲು ನಾನು ಬದ್ಧನಿದ್ದು, ಕಟ್ಟಡ ಕಾಮಗಾರಿ ಆರಂಭಿಸುವುದಾಗಿ ಜಿಲ್ಲಾಧಿಕಾರಿ ಕಚೇರಿಗೆ ಪತ್ರ ಬರೆದು ಕಾಮಗಾರಿ ಆರಂಭಿಸಿದ್ದೆ ಎಂದು ತಮ್ಮ ಕಾರ್ಯವನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

ಮುಡಾದಿಂದ ಪಡೆಯದ ಅನುಮತಿ: ರಾಜೀವ್‌ನಗರ ಎರಡನೇ ಹಂತದಲ್ಲಿರುವ ದೇವನೂರು ಕೆರೆ ಬಳಿ ಸಹೋದರರಾದ ಮುಶೀರ್ ಅಹಮದ್ ಹಾಗೂ ಮೊಹಮದ್ ಫಾಹಿದ್ ಅವರು ಸರ್ವೇ ನಂ. 50/1, 50/10/11/12ರಲ್ಲಿ 20 ಗುಂಟೆ ಜಮೀನಿನಲ್ಲಿ ಕಲ್ಯಾಣ ಮಂಟಪ ನಿರ್ಮಿಸುತ್ತಿದ್ದು, ಅದಕ್ಕೆ ಮುಡಾದಿಂದ ಅನುಮತಿ ಪಡೆದಿಲ್ಲ. ಅನುಮತಿ ಪಡೆದ ಬಳಿಕ ಕಟ್ಟಡ ನಿರ್ಮಿಸುವಂತೆ ಮುಡಾದಿಂದ ನೋಟಿಸ್ ನೀಡಿದ್ದರೂ ಮಾಲೀಕರು, ಕಟ್ಟಡ ಕಾಮಗಾರಿ ನಡೆಸಿಕೊಂಡು ಬರುತ್ತಿದ್ದರು. ಹೀಗಾಗಿ ನ.13ರಂದು ಮುಡಾ ಅಧಿಕಾರಿಗಳು, ಪೊಲೀಸರ ಸಹಕಾರದಿಂದ ಕಟ್ಟಡ ತೆರವಿಗೆ ಮುಂದಾಗಿದ್ದರು. ಈ ಸಮಯದಲ್ಲಿ ಮುಶೀರ್ ಅಹಮದ್ ಅವರು ಛಾವಣಿ ಏರಿ, ಕಟ್ಟಡ ತೆರವುಗೊಳಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ, ವಾಗ್ವಾದಕ್ಕಿಳಿದಿದ್ದರಿಂದ ಮುಡಾ ಅಧಿಕಾರಿಗಳು ಬರಿಗೈಯಲ್ಲಿ ವಾಪಸ್ ಆಗಿದ್ದರು.

ಅನುಮತಿ ಪಡೆಯದೆ ಕಾಮಗಾರಿ ನಡೆಸದಂತೆ ಈಗಾಗಲೇ ಹಲವು ನೋಟಿಸ್ ನೀಡಲಾಗಿತ್ತು. ಆದರೂ ಕಟ್ಟಡ ಕಾಮಗಾರಿ ನಡೆಸುತ್ತಿದ್ದರಿಂದ ತೆರವಿಗೆ ಮುಂದಾಗಿದ್ದೆವು. ಆದರೆ ಕಟ್ಟಡದ ಛಾವಣಿ ಏರಿ ಆತ್ಮಹತ್ಯೆ ಬೆದರಿಕೆ ಹಾಕಿದ್ದರಿಂದ ಮಾನವೀಯತೆ ದೃಷ್ಟಿಯಿಂದ ವಾಪಸ್ ಬಂದಿದ್ದೇವೆ. ಬಳಿಕ ಮುಶೀರ್ ಅಹಮದ್ ಕಚೇರಿಗೆ ಬಂದು ಮುಚ್ಚಳಿಕೆ ಬರೆದುಕೊಟ್ಟು ಮೂರು ತಿಂಗಳ ಕಾಲಾವಕಾಶ ಕೋರಿರುವುದರಿಂದ ಅಲ್ಲಿಯವರೆಗೆ ಕಾಮಗಾರಿ ನಡೆಸದಂತೆ ತಿಳಿಸಲಾಗಿದೆ.
ಸುರೇಶ್‌ಬಾಬು ಅಧೀಕ್ಷಕ ಇಂಜಿನಿಯರ್, ಮುಡಾ

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...