More

    ಶರಾವತಿ ಸಂತ್ರಸ್ತರಿಗೆ ನ್ಯಾಯ ಒದಗಿಸುವಲ್ಲಿ ವಿಫಲ

    ಶಿವಮೊಗ್ಗ: ಶರಾವತಿ ಸಂತ್ರಸ್ತರಿಗೆ ಭೂಮಿ ಹಕ್ಕು ನೀಡುವ ಸಂಬಂಧ ರಾಜ್ಯ ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಂಡಿದೆ. ಈಗಾಗಲೇ ಸುಪ್ರೀಂಕೋರ್ಟ್‌ಗೂ ಅರ್ಜಿ ಸಲ್ಲಿಸಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಬಿ.ಎ.ರಮೇಶ್ ಹೆಗ್ಡೆ ಹೇಳಿದರು.

    ಬಿ.ಎಸ್.ಯಡಿಯೂರಪ್ಪ ನಾಲ್ಕು ಬಾರಿ ಮುಖ್ಯಮಂತ್ರಿ, ಒಮ್ಮೆ ಸಂಸದರೂ ಆಗಿದ್ದರು. ಬಿ.ವೈ.ರಾಘವೇಂದ್ರ ಮೂರು ಬಾರಿ ಸಂಸದರಾಗಿದ್ದರು. ಆದರೂ ಅವರಿಬ್ಬರಿಂದ ಶರಾವತಿ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಸಾಧ್ಯವಾಗಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಶರಾವತಿ ಸಂತ್ರಸ್ತರ ಸಮಸ್ಯೆ ಕಾಂಗ್ರೆಸ್‌ನ ಪಾಪದ ಕೂಸು ಎನ್ನುವ ರಾಘವೇಂದ್ರ ಆ ಸಮಸ್ಯೆಯನ್ನು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ಈ ಸಮಸ್ಯೆ ಉಲ್ಬಣಕ್ಕೆ ಮುಖ್ಯ ಕಾರಣ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ. 2015ರಲ್ಲಿ ಸಿಎಂ ಆಗಿದ್ದ ಸಿದ್ಧರಾಮಯ್ಯ ಡಿನೋಟಿಫಿಕೇಷನ್‌ಗೆ ಆದೇಶ ಹೊರಡಿಸಿತ್ತು. ಆದರೆ ಒಂದು ಪ್ರಕರಣದಲ್ಲಿ 260 ಎಕರೆ ಡಿನೋಟಿಫಿಕೇಷನ್ ರದ್ದು ಮಾಡಲಾಯಿತು. ಬಳಿಕ ಬಂದ ಬಿಜೆಪಿ 9,129 ಎಕರೆಗೆ ಸಂಬಂಧಿಸಿದ ಡಿನೋಟಿಫಿಕೇಷನ್ ಆದೇಶವನ್ನು ರದ್ದು ಮಾಡಿತ್ತು ಎಂದು ದೂರಿದರು.
    ಈಗ ಚುನಾವಣೆಯ ಸಮಯದಲ್ಲಿ ಸಂತ್ರಸ್ತರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಜನವರಿ 2018ರಲ್ಲಿ ನಡೆದಿತ್ತು. ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಘವೇಂದ್ರ ಕಾಂಗ್ರೆಸ್ ಸರ್ಕಾರವನ್ನು ಹೊಗಳಿದ್ದರು. ಈಗ ದೂರುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
    ಪ್ರಮುಖರಾದ ಎಸ್.ಟಿ. ಹಾಲಪ್ಪ, ಚಂದ್ರಭೂಪಾಲ, ಇಕ್ಕೇರಿ ರಮೇಶ್, ಎಚ್.ಎಂ.ಮಧು, ಆಸ್ೀ, ಶ್ರೀನಿವಾಸ್ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts