25.9 C
Bengaluru
Wednesday, January 22, 2020

ಮಕ್ಕಳಿಗೆ ಮೌಲ್ಯ ತಿಳಿಸಿಕೊಡುವಲ್ಲಿ ವಿಫಲ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಮೈಸೂರು: ಶಿಕ್ಷಣ ಕೊಡಿಸುವ ಭರದಲ್ಲಿ ಮಕ್ಕಳಿಗೆ ಮೌಲ್ಯ ತಿಳಿಸಿಕೊಡುವಲ್ಲಿ ನಾವು ಸೋಲುತ್ತಿದ್ದೇವೆಯೇ ಎಂಬ ಭಾವನೆ ಮೂಡುತ್ತಿದೆ ಎಂದು ಶಾಸಕ ಎಸ್.ಎ.ರಾಮದಾಸ್ ವಿಷಾದಿಸಿದರು.

ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆಯಿಂದ ಬುಧವಾರ ಆಯೋಜಿಸಿದ್ದ ವಿದ್ಯಾಸಂಸ್ಥೆಯ ಶತಮಾನೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಈ ಹಿಂದೆ ಭಾರತೀಯ ಶಿಕ್ಷಣ ಪದ್ಧತಿಯಲ್ಲಿ ವಿದ್ಯೆ ಕಲಿಸುವ ಜತೆಗೆ ಜೀವನದ ಮೌಲ್ಯವನ್ನು ಕಲಿಸಿಕೊಡಲಾಗುತ್ತಿತ್ತು. ಶಿಕ್ಷಣವನ್ನೇ ಕಲಿಯದ ಧರ್ಮಪ್ರಕಾಶ ಡಿ.ಬನುಮಯ್ಯ ಅವರು ವ್ಯಾಪಾರ ಮಾಡಿ ದೊಡ್ಡಮಟ್ಟಕ್ಕೆ ಬೆಳೆದರು. ಜತೆಗೆ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ಬಡ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿದರು. ಆ ಮೂಲಕ ಮೌಲ್ಯಾಧಾರಿತ ಜೀವನದ ವಿಚಾರದಲ್ಲಿ ಇತರರಿಗೆ ಅವರು ಮಾದರಿಯಾಗಿದ್ದರು ಎಂದು ಬಣ್ಣಿಸಿದರು.

ಆಧುನಿಕ ಶಿಕ್ಷಣ ಪದ್ಧತಿಯಲ್ಲಿ ಮೌಲ್ಯವನ್ನು ಕಲಿಸಿಕೊಡುವಲ್ಲಿ ಸೋಲುತ್ತಿದ್ದೇವೆ. ಹಿಂದೆ ಇದ್ದ ಕಲಿಕೆ ಹಾಗೂ ಕಲಿಸುವಲ್ಲಿನ ಬದ್ಧತೆ ಈಗ ಕಾಣುತ್ತಿಲ್ಲ. ಈ ಕುರಿತು ಶಿಕ್ಷಕರು, ವಿದ್ಯಾರ್ಥಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅಗತ್ಯವಿದೆ ಎಂದು ಹೇಳಿದರು.

ಒಂದು ಕಾಲದಲ್ಲಿ ಡಿ.ಬನುಮಯ್ಯ ಕಾಲೇಜು ಎಂದರೆ ಕಾಮರ್ಸ್‌ಗೆ ಪ್ರಸಿದ್ಧಿ ಎನ್ನುವ ಕಾಲವಿತ್ತು. ಜತೆಗೆ ಅನೇಕ ಆರ್ಥಿಕ ತಜ್ಞರು ಈ ಶಿಕ್ಷಣ ಸಂಸ್ಥೆಯಿಂದ ಹೊರ ಬಂದಿದ್ದರು. ಅಂತಹ ಗತವೈಭವವನ್ನು ಮರಳಿ ತರುವ ಮೂಲಕ ಬನುಮಯ್ಯ ಅವರ ಆದರ್ಶವನ್ನು ಸಾಕಾರಗೊಳಿಸಬೇಕು ಎಂದು ಸಲಹೆ ನೀಡಿದರು.

ಬೇರೆ ದೇಶದ ಅರ್ಥ ವ್ಯವಸ್ಥೆ ಹಾಳಾಗಬಹುದು. ಆದರೆ ಭಾರತದ ಅರ್ಥ ವ್ಯವಸ್ಥೆ ಹಾಳಾಗುವುದಿಲ್ಲ ಎನ್ನುವುದನ್ನು ವಿದೇಶಿಗರು ಒಪ್ಪುತ್ತಾರೆ. ಅದಕ್ಕೆ ಕಾರಣ ಇಂತಹ ಧರ್ಮದರ್ಶಿಗಳು ನಡೆಸುತ್ತಿರುವ ಕಾಲೇಜು ಹಾಗೂ ಅದರಲ್ಲಿ ರೂಪುಗೊಳ್ಳುತ್ತಿರುವ ವಿದ್ಯಾರ್ಥಿ ಗಳು. ಇಂದಿನ ದೇಶದ ಆರ್ಥಿಕ ಪರಿಸ್ಥಿತಿಯನ್ನು ಅರಿತು ಸಲಹೆ ಹಾಗೂ ಮಾರ್ಗದರ್ಶನ ನೀಡಲು ಅರ್ಥಶಾಸ್ತ್ರಜ್ಞರ ಅವಶ್ಯಕತೆ ಸಾಕಷ್ಟಿದ್ದು, ಎಲ್ಲರೂ ಉತ್ತಮ ಆರ್ಥಿಕ ತಜ್ಞರಾಗಬೇಕು ಎಂದು ಹೇಳಿದರು.

ಈ ಕಾಲೇಜಿನಲ್ಲಿ ನಾನು ಓದದಿದ್ದರೂ, ನನ್ನ ರಾಜಕೀಯ ಜೀವನಕ್ಕೆ ಬನುಮಯ್ಯ ಕಾಲೇಜಿನ ವಿದ್ಯಾರ್ಥಿ ಸಂಘದ ಚುನಾವಣೆ ಮೆಟ್ಟಿಲಾಯಿತು. ಅಂದು ನಡೆದ ಗಲಭೆಯಲ್ಲಿ ಜೈಲಿಗೆ ಹೋಗಬೇಕಾದ ಪ್ರಸಂಗವೂ ಬಂದಿತ್ತು ಎಂದು ತಮ್ಮ ಹಿಂದಿನ ಘಟನೆಯನ್ನು ನೆನಪು ಮಾಡಿಕೊಂಡರು.

ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ ತಮ್ಮದೇ ಅದ ಕೊಡುಗೆ ನೀಡಿರುವ ಡಿ.ಬನುಮಯ್ಯ ಶಿಕ್ಷಣ ಸಂಸ್ಥೆ, ಪ್ರಾಥಮಿಕ ಶಿಕ್ಷಣದಿಂದ ಪಾಲಿಟೆಕ್ನಿಕ್‌ವರೆಗೂ ಬೆಳೆದು ಬಂದಿದೆ. ಸುಪ್ರಿಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವೆಂಕಟರಾಮಯ್ಯ ಸೇರಿದಂತೆ ಅನೇಕ ಗಣ್ಯರು ಇಲ್ಲಿ ವ್ಯಾಸಂಗ ಮಾಡಿದ್ದಾರೆ. ಶಿಕ್ಷಣ ಕ್ಷೇತ್ರವಲ್ಲದೆ ಅನೇಕ ಧಾರ್ಮಿಕ, ಸಮಾಜಸೇವಾ ಕಾರ್ಯದಲ್ಲಿಯೂ ಬನುಮಯ್ಯ ಅವರು ತೊಡಗಿಕೊಂಡಿದ್ದರು ಎಂದು ಹೇಳಿದರು.

ಶಾಸಕ ಎಲ್.ನಾಗೇಂದ್ರ, ಮೇಯರ್ ಪುಷ್ಪಲತಾ ಜಗ್ನನಾಥ್ ಮಾತನಾಡಿದರು. ಹೊಸದುರ್ಗದ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶಾಂತವೀರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಸ್ಥೆ ಧರ್ಮದರ್ಶಿ ಅಧ್ಯಕ್ಷ ಡಾ.ವಿ.ಬಿ.ಜಯದೇವ, ಆಡಳಿತಾಧಿಕಾರಿ ಕೆ.ಎನ್.ತಿಮ್ಮಯ್ಯ, ಧರ್ಮದರ್ಶಿಗಳಾದ ಪ್ರೊ.ಪಿ.ವಿ.ನರಹರಿ, ವಿ.ಸಿ.ಕೋಮಲಾ, ಆರ್.ರಮೇಶಕುಮಾರ್, ಗೌರವ ಕಾರ್ಯದರ್ಶಿ ಎಸ್.ಜೆ.ಲಕ್ಷ್ಮೇಗೌಡ ಇತರರು ಇದ್ದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...