ಹಾವೇರಿ: ಪಟಾಕಿಯ ಸಿಡಿಮದ್ದು ಸಿಡಿದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಬಸಾಪುರ ಗ್ರಾಮದಲ್ಲಿ ನಡೆದಿದೆ.
ಬ್ಯಾಡಗಿ ತಾಲೂಕಿನ ಕುರ್ದಕೋಡಿಹಳ್ಳಿಯ ಕರಿಯಪ್ಪ ಶಿವನೆಪ್ಪ ಕಾಂಶಬಿ (33) ಮೃತ ವ್ಯಕ್ತಿ.
ಇವರು ಬಸಾಪುರ ಗ್ರಾಮದ ತಮ್ಮ ಸಂಬಂಧಿಕರ ಮನೆ ಜಾತ್ರೆ ಇರುವ ಸಲುವಾಗಿ ತೆರಳಿದ್ದರು. ಜಾತ್ರೆಯ ಮೆರವಣಿಗೆಯಲ್ಲಿ ಪಟಾಕಿ ಸಿಡಿಸುತ್ತಿರುವುದನ್ನು ನೋಡುತ್ತ ನಿಂತಾಗ ಸಿಡಿಮದ್ದು ಇವರ ಎದೆಗೆ ಸಿಡಿದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಇವರನ್ನು ಕೂಡಲೇ ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
