ಸೋಮವಾರಪೇಟೆ: ಜಾತ್ರೆ, ಉತ್ಸವಗಳು ನಮ್ಮ ಸಂಸ್ಕೃತಿಯ ಪ್ರತೀಕವೆಂದು ಮನೆಹಳ್ಳಿ ಮಠಾಧೀಶರಾದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ ಹೇಳಿದರು.
ತಾಲೂಕಿನ ತಪೋಕ್ಷೇತ್ರ ಮನೆಹಳ್ಳಿ ಮಠದ ಆವರಣದಲ್ಲಿ ಸೋಮವಾರ ಸಂಜೆ ಆಯೋಜಿಸಲಾಗಿದ್ದ ಕ್ಷೇತ್ರದ 13ನೇ ವರ್ಷದ ಜಾತ್ರೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಆಧುನಿಕತೆ ಬೆಳೆದಂತೆ ನಮ್ಮ ಸಂಸ್ಕೃತಿ, ಆಚಾರ, ವಿಚಾರಗಳು ಬದಲಾಗುತ್ತಿರುವುದು ಬೇಸರದ ಸಂಗತಿ. ಜಾತ್ರೆ, ಉತ್ಸವಗಳು ನಡೆಯುವುದರಿಂದ, ಅದರಲ್ಲಿ ಭಾಗವಹಿಸುವುದರಿಂದ ಸಂಬಂಧಗಳು ವೃದ್ಧಿಯಾಗುತ್ತದೆ. ಅಲ್ಲದೆ ಶಾಂತಿ, ಸಹಬಾಳ್ವೆ ನಡೆಸಲು ಸಹಕಾರಿಯಾಗುತ್ತದೆ ಎಂದರು.
ಏ. 12,13 ಹಾಗೂ 14ರಂದು ಕ್ಷೇತ್ರದ 13ನೇ ವರ್ಷದ ಜಾತ್ರೆ, ರಥೋತ್ಸವ ಜರುಗಲಿದೆ. ಎಲ್ಲ ಭಕ್ತಾದಿಗಳು ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ತೊರೆನೂರು ಮಠದ ಶ್ರೀ ಮಲ್ಲೇಶ ಸ್ವಾಮೀಜಿ, ಶಿಡಿಗಳಲೆ ಮಠದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ, ವಿರಾಜಪೇಟೆ ವೀರಶೈವ ಸಮಾಜದ ಅಧ್ಯಕ್ಷ ರಾಜೇಶ್, ಕೆಆರ್‌ಐಡಿಎಲ್‌ನ ಕೊಡಗು ಜಿಲ್ಲಾ ಸಹಾಯಕ ಕಾರ್ಯಪಾಲ ಇಂಜಿನಿಯರ್ ಪ್ರಮೋದ್, ಪ್ರಮುಖರಾದ ಪ್ರಕಾಶ್, ಪಾಲಾಕ್ಷ, ನಾರಾಯಣಸ್ವಾಮಿ, ಮಂಜುನಾಥ್ ಇದ್ದರು.