ಹುಸಿ ಬೆಂಬ್ ಬೆದರಿಕೆ ಇ-ಮೇಲ್

ಬೆಂಗಳೂರು: ನಗರದ ಬಹುರಾಷ್ಟ್ರೀಯ ಕಂಪನಿಯೊಂದಕ್ಕೆ (ಎಂಎನ್‌ಸಿ)ಮಂಗಳವಾರ ಬಾಂಬ್ ಇರಿಸಿರುವುದಾಗಿ ಬೆದರಿಕೆ ಇ-ಮೇಲ್ ಬಂದಿದ್ದ ಹಿನ್ನೆಲೆಯಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಪುಟ್ಟೇನಹಳ್ಳಿಯ ಬ್ರಾಡ್‌ಡಾಟ್‌ಕಾಂ ಎಂಎನ್‌ಸಿ ಕಂಪನಿಯ ಇ-ಮೇಲ್‌ಗೆ ಮಧ್ಯಾಹ್ನ ೧ ಗಂಟೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ತಕ್ಷಣ ಕಂಪನಿ ಸಿಬ್ಬಂದಿ ನೀಡಿದ ಮಾಹಿತಿ ಮೇರೆಗೆ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಕಂಪನಿ ಕಚೇರಿಯಲ್ಲಿದ್ದ ನೌಕರರನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಿದ್ದಾರೆ. ಬಳಿಕ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳವನ್ನು ಸ್ಥಳಕ್ಕೆ ಕರೆಸಿಕೊಂಡು ಕಂಪನಿಯ ಕಟ್ಟಡ ಹಾಗೂ ಆವರಣವನ್ನೂ ಕೂಲಂಕಷವಾಗಿ ತಪಾಸಣೆ ಮಾಡಲಾಗಿದೆ. ಕಟ್ಟಡದಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು, ಬಾಂಬ್, ಸ್ಫೋಟಕಗಳು ಹಾಗೂ ಸ್ಟೋಟಕ ಸಾಮಾಗ್ರಿಗಳು ಪತ್ತೆಯಾಗಿಲ್ಲ. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಎಂಬುದು ಖಚಿತವಾಗಿದೆ. ಈ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ ಕಿಡಿಗೇಡಿಗಳ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share This Article

ತೂಕ ಇಳಿಕೆಗೆ ನಂಬರ್​ 1 ಹಣ್ಣು! ಇದನ್ನು ತಿಂದರೆ ಸಾಕು ಬೆಣ್ಣೆಯಂತೆ ಕರಗಿ ಹೋಗುತ್ತದೆ ಬೊಜ್ಜು

ಎಷ್ಟೇ ಪ್ರಯತ್ನಪಟ್ಟರು ತೂಕ ಇಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲವೇ? ಬೊಜ್ಜು ಸಮಸ್ಯೆಯಿಂದ ಬೇಸತ್ತಿದ್ದೀರಾ? ಈ ಒಂದು ಹಣ್ಣನ್ನು ತಿಂದರೆ…

ನಿಮ್ಮ ಅಂಗೈನಲ್ಲಿ ಈ ರೀತಿ ತ್ರಿಕೋನ ಚಿಹ್ನೆ ಇದೆಯಾ? ಇದ್ರೆ ಏನಾಗುತ್ತೆ? ಇಲ್ಲಿದೆ ನೋಡಿ ಅಚ್ಚರಿಯ ಸಂಗತಿ…

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…

ಕರಗಿದ ಮೇಣದಬತ್ತಿಯಿಂದ ಏನೆಲ್ಲಾ ಉಪಯೋಗ; ಬಿಸಾಡುವ ಬದಲು ಮರುಬಳಕೆ ಮಾಡಿ..

ಮನೆಯಲ್ಲಿ ಉಪಯೋಗಿಸುವ ಎಷ್ಟೋ ವಸ್ತುಗಳು ಕೆಲಕಾಲದ ನಂತರ ಹಳೆಯದಾಗುತ್ತದೆ. ಮತ್ತೆ ಕೆಲವು ಬಳಸಿದ ನಂತರ ನಾಶವಾಗುತ್ತದೆ.…