More

    ನಕಲಿ ಪತ್ರಕರ್ತರ ಹಾವಳಿ ತಡೆಗಟ್ಟಿ

    ಹಿರೇಬಾಗೇವಾಡಿ: ಸರ್ಕಾರಿ ಕಚೇರಿಗಳಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದ್ದು, ಶಿಸ್ತು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಹಿರೇಬಾಗೇವಾಡಿ ಗ್ರಾಮಸ್ಥರು ಉಪತಹಸೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಿದರು.

    ಇಲ್ಲಿನ ಸರ್ಕಾರಿ ಕಚೇರಿಗಳ ಮೇಲೆ ತಿಂಗಳುಗಳಿಂದ ದಾಳಿ ಮಾಡುತ್ತಿರುವ ಕೆಲ ನಕಲಿ ಪತ್ರಕರ್ತರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಯನ್ನು ಹೆದರಿಸಿ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ಇಲ್ಲಸಲ್ಲದ ಸುಳ್ಳು ವರದಿಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾರೆ. ಇದರಿಂದ ಸರ್ಕಾರಿ ಆಸ್ಪತ್ರೆ, ಕಂದಾಯ ಇಲಾಖೆ, ಕೃಷಿ ಇಲಾಖೆ, ಅಂಗನವಾಡಿಗಳು ಮತ್ತು ಇನ್ನಿತರ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಮಾನಸಿಕ ಹಿಂಸೆ, ಕಿರುಕುಳ ಉಂಟಾಗುತ್ತಿದೆ. ಅದಕ್ಕೆ ಕೆಲ ಸರ್ಕಾರಿ ಅಧಿಕಾರಿಗಳೇ ಕುಮ್ಮಕ್ಕು ಕೊಡುತ್ತಿದ್ದಾರೆ ಎಂದು ದೂರಿದರು. ಅಧಿಕಾರಿಗಳೇ ವಾಹಿನಿಯವರೊಂದಿಗೆ ಸೇರಿ ಸಿಬ್ಬಂದಿಗೆ ತೊಂದರೆ ಕೊಡುವುದು ಸರಿಯಲ್ಲ. ಈ ಬಗ್ಗೆ ಜಿಲ್ಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಶಿಸ್ತು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಉಪತಹಸೀಲ್ದಾರ್ ವಿಜಯ ಸೂರ್ಯವಂಶಿ, ಮನವಿ ಬಗ್ಗೆ ಜಿಲ್ಲಾಧಿಕಾರಿಗೆ ಮನವರಿಕೆ ಮಾಡಿ ಸಮಸ್ಯೆ ಪರಿಹಾರಕ್ಕೆ ವಿನಂತಿಸಲಾಗುವುದು ಎಂದು ತಿಳಿಸಿದರು.

    ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಮಾದುಭರಮಣ್ಣವರ, ಸಿ.ಸಿ.ಪಾಟೀಲ, ಬಾಪು ನಾವಲಗಟ್ಟಿ, ಗ್ರಾಪಂ ಸದಸ್ಯ ಉಳವಪ್ಪ ರೊಟ್ಟಿ, ಬಸವಣ್ಣೆಪ್ಪ ಗಾಣಗಿ, ಪ್ರಕಾಶ ಜಪ್ತಿ, ಆನಂದ ಪಾಟೀಲ, ಸದ್ದಾಮ ನದಾಫ್, ಅಬ್ದುಲ್ ಖತೀಬ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts