ಮೂಡುಬಿದಿರೆ: ಪಡುಕೊಣಾಜೆ ಗ್ರಾಮದಲ್ಲಿ 45 ಎಕರೆ ಜಾಗವನ್ನು ಸರ್ಕಾರ ವಕ್ಫ್ಗೆ ಮೀಸಲಿಟ್ಟಿದೆ ಎಂದು ಬಿಜೆಪಿಯು ಸಾವಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸಾರ್ವಜನಿಕವಾಗಿ ಅಶಾಂತಿ ಸೃಷ್ಟಿಸುವ ಹುನ್ನಾರ ನಡೆಸುತ್ತಿದೆ ಎಂದು ಮೂಡುಬಿದಿರೆ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುವಾರ್ ಶೆಟ್ಟಿ ಆರೋಪಿಸಿದ್ದಾರೆ.
ಈ ವಿಚಾರದ ಕುರಿತಾಗಿ ಕಾಂಗ್ರೆಸ್ ಸತ್ಯಶೋಧನಾ ಸಮಿತಿಯು ಕಂದಾಯ ಅಧಿಕಾರಿಗಳಲ್ಲಿ ವಿವರಣೆ ಕೇಳಿದ್ದು, ಅಧಿಕಾರಿಗಳು ಇದು ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಿದ್ದರಾಮಯ್ಯ ಸರ್ಕಾರ ಜನಪರ ಯೋಜನೆಗಳನ್ನು ಬಡವರಿಗೆ ನೀಡಿದ್ದು, ಅದು ಸಮರ್ಪಕವಾಗಿ ಬಡವರಿಗೆ ಸಿಗುತ್ತಿದೆ. ಇದನ್ನು ಸಹಿಸದ ಬಿಜೆಪಿ ಈ ರೀತಿಯ ಸುಳ್ಳು ಸುದ್ದಿ ಹಬ್ಬಿಸಿ ಜನರನ್ನು ದಾರಿ ತಪ್ಪಿಸುವ ಕೆಲಸಕ್ಕೆ ಕೈ ಹಾಕಿದೆ. ಇದನ್ನು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಖಂಡಿಸುತ್ತದೆ ಎಂದರು.
ಸಮಿತಿ ಸದಸ್ಯ ಶಿವಾನಂದ ಪಾಂಡ್ರು ವಾತನಾಡಿ, ಬಿಜೆಪಿಯವರ ಆರೋಪಕ್ಕೆ ಸರಿಯಾದ ದಾಖಲೆ ನೀಡಲಿ. ಕಂದಾಯ ಅಧಿಕಾರಿಗಳೇ ಇಲ್ಲವೆಂದ ಮೇಲೆ ಇವರು ಸುಳ್ಳು ಸುದ್ದಿ ಹಬ್ಬಿಸುತ್ತಿರುವುದೇಕೆ? ಆರೋಪ ವಾಡುತ್ತಿರುವ ರೈತ ಮುಖಂಡ, ವಕೀಲ ಶಾಂತಿ ಪ್ರಸಾದ್ ಹೆಗ್ಡೆ ಅವರು 25 ಎಕರೆ ಸರ್ಕಾರಿ ಜಾಗವನ್ನು ಕಬಳಿಸಿದ್ದಾರೆ. ಅದರ ಬಗ್ಗೆಯೂ ತನಿಖೆಯಾಗಲಿ ಎಂದರು.
ಸಮಿತಿ ಸದಸ್ಯೆ ರಜನಿ ಪಡುವಾರ್ನಾಡು, ಕಾಂಗ್ರೆಸ್ ಮುಖಂಡ ಸುಕುವಾರ್ ಜೈನ್ ಅಳಿಯೂರು ಸುದ್ದಿಗೋಷ್ಠಿಯಲ್ಲಿದ್ದರು