More

    ಕುಟುಂಬ ವ್ಯವಸ್ಥೆ ಕಾಪಾಡೋಣ: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಆಶಯ

    ಉಡುಪಿ: ಕುಟುಂಬ ಕಲಹಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಹಿತರಕ್ಷಣೆಗೆ ಆದ್ಯತೆ ನೀಡಬೇಕು. ಕುಟುಂಬ ವ್ಯವಸ್ಥೆ ಕಾಪಾಡುವುದು ಕುಟುಂಬ ನ್ಯಾಯಾಲಯಗಳ ಕಾನೂನಿನ ಮುಖ್ಯ ಆಶಯ ಎಂದು ಹೈಕೊರ್ಟ್ ಮುಖ್ಯ ನ್ಯಾಯಾಮೂರ್ತಿ ಅಭಯ್ ಶ್ರೀನಿವಾಸ್ ಓಕ್ ಅಭಿಪ್ರಾಯಪಟ್ಟರು.
    ಉಡುಪಿ ಜಿಲ್ಲಾ ನ್ಯಾಯಾಲಯದ ಕುಟುಂಬ ನ್ಯಾಯಾಲಯವನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
    ನ್ಯಾಯಾಲಯದಲ್ಲಿ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಲು ಮೊದಲ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

    ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷ ಅರವಿಂದ ಕುಮಾರ್ ಮಾತನಾಡಿ, ಕುಟುಂಬ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಬಗೆಹರಿಸಲು ಆದ್ಯತೆ ನೀಡಬೇಕು. ವಕೀಲರಾಗಿ ಜನಸಾಮಾನ್ಯರ ಕಷ್ಟ ನಿವಾರಿಸಲು ತ್ವರಿತಗತಿಯ ಸ್ಪಂದನೆ ಅಗತ್ಯ. ಅನ್ಯಾಯಕ್ಕೊಳಗಾದ ಪ್ರತಿಯೊಬ್ಬರಿಗೂ ತಾರತಮ್ಯವಿಲ್ಲದೆ ನ್ಯಾಯ ಒದಗಿಸಬೇಕು ಎಂದರು. ಹೈಕೋರ್ಟ್ ನ್ಯಾಯಾಮೂರ್ತಿ ಜಾನ್ ಮೈಕೆಲ್ ಕುನ್ಹಾ ಮಾತನಾಡಿದರು.

    ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು. ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್.ಸ್ವಾಗತಿಸಿದರು. ಹಿರಿಯ ಸಿವಿಲ್ ನ್ಯಾಯಾಧೀಶೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಕಾರ್ಯಕ್ರಮ ನಿರೂಪಿಸಿದರು. ವಕೀಲರ ಸಂಘದ ಅಧ್ಯಕ್ಷ ದಿವಾಕರ ಎಂ. ಶೆಟ್ಟಿ ವಂದಿಸಿದರು.

    ಉಡುಪಿ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ವಕೀಲರ ಸಂಘದ ಬೇಡಿಕೆಯಂತೆ ಕುಟುಂಬ ನ್ಯಾಯಾಲಯ ಆರಂಭಿಸಲಾಗಿದೆ. ಕೋರ್ಟ್ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು.
    ಸೂರಜ್ ಗೋವಿಂದರಾಜ್, ಜಿಲ್ಲಾ ಆಡಾಳಿತಾತ್ಮಕ ನ್ಯಾಯಾಮೂರ್ತಿ, ಉಡುಪಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts