

ಲಖನೌ: ಮೂವರು ಹೆಣ್ಣುಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐದು ಮಂದಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರಪ್ರದೇಶದ ಮೀರತ್ನಲ್ಲಿ ನಡೆದಿದೆ. ಮೀರತ್ನ ಲಿಸಾಡಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮೃತರನ್ನು ಮೊಯಿನ್, ಆಸ್ಮಾ, ಅಫ್ಸಾ (8), ಅಜೀಜಾ (4) ಮತ್ತು ಆದಿಬಾ (1) ಎಂದು ಗುರುತಿಸಲಾಗಿದೆ. ಮೃತ ಮೊಯಿನ್ನ ಸಹೋದರ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು (Police Officers) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಘಟನೆ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಎಸ್ಎಸ್ಪಿ (Police Officer) ವಿಪಿನ್ ತಾಡಾ, ಲಿಸಾಡಿ ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತ ಮೊಯಿನ್ನ ಸಹೋದರ ಎಷ್ಟು ಬಾರಿ ಕರೆ ಮಾಡಿದರೂ ಸ್ವೀಕರಿಸದಿದ್ದಾಗ ಅನುಮಾನಗೊಂಡು ಮನೆಯ ಬಳಿ ಬಂದು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ಮನೆಗೆ ಬೀಗ ಹಾಕಿರುವುದನ್ನು ನೋಡಿದರೆ ಕುಟುಂಬಕ್ಕೆ ಹತ್ತಿರವಿರುವವರು ಈ ಕೃತ್ಯ ಎಸಗಿರುವುದು ಸ್ಪಷ್ಟವಾಗಿ ಕಾಣುತ್ತದೆ. ಳೇ ದ್ವೇಷವೇ ಅಪರಾಧದ ಹಿಂದಿನ ಉದ್ದೇಶವಾಗಿರಬಹುದು ಎಂದು ಪ್ರಾಥಮಿಕ ತನಿಖೆಗಳು ಸೂಚಿಸುತ್ತವೆ. ವಿಸ್ತೃತ ತನಿಖೆ ನಡೆಸಲಾಗುತ್ತಿದೆ. ಮೃತದೇಹಗಳನ್ನು ಪರಿಶೀಲಿಸಿದಾಗ ಒಬ್ಬರ ಕಾಲನ್ನು ಬೆಡ್ಶೀಟ್ಗೆ ಕಟ್ಟಲಾಗಿದ್ದು, ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.
ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿರುವ ಮೊಯಿನ್ ಕೆಲ ದಿನಗಳ ಹಿಂದಷ್ಟೇ ಲಿಸಾಡಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಗೆ ಶಿಫ್ಟ್ ಆಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಎಸ್ಎಸ್ಪಿ (Police Officer) ವಿಪಿನ್ ತಾಡಾ ತಿಳಿಸಿದ್ದಾರೆ.