More

    ಮೌಲ್ಯಾಧಾರಿತ ಮರೆಯಾಗಿ ಕುಟುಂಬ ರಾಜಕಾರಣ ಶುರು

    ಶಿವಮೊಗ್ಗ: ಮೌಲ್ಯಾಧಾರಿತ ರಾಜಕಾರಣ ಮರೆಯಾಗಿ ಕುಟುಂಬ ರಾಜಕಾರಣ ಶುರುವಾಗಿದೆ. ನಾನಾದ ಬಳಿಕ ನನ್ನ ಮಕ್ಕಳು ಬರಬೇಕು. ಆನಂತರ ಮೊಮ್ಮಕ್ಕಳು ಇರಬೇಕು ಎಂಬ ಕಲ್ಪನೆ ಹೆಚ್ಚಾಗುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಬೇಸರ ವ್ಯಕ್ತಪಡಿಸಿದರು.

    ನಗರದ ಸವಳಂಗ ರಸ್ತೆಯ ಸರ್ಜಿ ಕನ್ವೆಕ್ಷನ್ ಹಾಲ್‌ನಲ್ಲಿ ಶನಿವಾರ ಕೈಗಾರಿಕೋದ್ಯಮಿ, ಎಂಎಲ್‌ಸಿ ಎಸ್.ರುದ್ರೇಗೌಡ ಅವರ ಅಮೃತಮಯಿ ಅಭಿನಂದನಾ ಕಾರ್ಯಕ್ರಮದ ಅಂಗವಾಗಿ ಶ್ರಮದಿಂದ ಸಾರ್ಥಕತೆಯಡೆಗೆ ವಿಚಾರಗೋಷ್ಠಿಯಲ್ಲಿ ಮೌಲ್ಯಾಧಾರಿತ ರಾಜಕಾರಣ ಕುರಿತು ಮಾತನಾಡಿದ ಅವರು, ಮೌಲ್ಯಾಧಾರಿತ ರಾಜಕಾರಣಕ್ಕೂ ಸಾಮಾನ್ಯ ರಾಜಕಾರಣಕ್ಕೂ ಸಾಕಷ್ಟು ವ್ಯಾತ್ಯಾಸವಿದೆ. ರಾಜಕಾರಣ ಎಂಬುದು ಯಾರೊಬ್ಬರ ಮನೆಯ ಆಸ್ತಿಯಲ್ಲ. ಆಸ್ತಿಗಾಗಿ ರಾಜಕೀಯ ಬಳಸಿಕೊಂಡರೆ ಅದು ಮೌಲ್ಯಾಧಾರಿತ ಎನ್ನಿಸಿಕೊಳ್ಳುವುದಿಲ್ಲ. ಈ ಬಗ್ಗೆ ಎಲ್ಲರೂ ಗಂಭೀರವಾಗಿ ಯೋಚನೆ ಮಾಡಬೇಕಿದೆ ಎಂದರು.
    ಪ್ರಧಾನಿ ನರೇಂದ್ರ ಮೋದಿ ಅವರು ನಿಜವಾಗಿಯೂ ಮೌಲ್ಯಾಧಾರಿತ ರಾಜಕಾರಣ ಮಾಡುತ್ತಿದ್ದಾರೆ. ತಾಯಿ, ಮಕ್ಕಳು, ಸಂಬಂಧಿಕರನ್ನೂ ಬದಿಗಿಟ್ಟು ರಾಜಕೀಯದಲ್ಲೂ ಸಾಧನೆ ಮಾಡುತ್ತಿದ್ದಾರೆ. ಮೌಲ್ಯಾಧಾರಿತ ರಾಜಕಾರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಿದ್ದು ಯುವ ಪೀಳಿಗೆ ಈ ಬಗ್ಗೆ ಒತ್ತು ನೀಡಬೇಕಾಗುತ್ತದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts