More

  ಅಭಿಮಾನಿ ಜಾಗೃತ ರಥಯಾತ್ರೆಗೆ ಚಾಲನೆ

  ಮೈಸೂರು: ನಟ ಡಾ.ವಿಷ್ಣುವರ್ಧನ್ ಅವರ ಅಂತ್ಯಕ್ರಿಯೆ ನಡೆದ ಅಭಿಮಾನ್ ಸ್ಟುಡಿಯೋ ಜಾಗವನ್ನು ಪುಣ್ಯಭೂಮಿಯಾಗಿ ಉಳಿಸಬೇಕು ಎಂದು ಒತ್ತಾಯಿಸಿ ಡಿ.17ರಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ಡಾ.ವಿಷ್ಣುಸೇನಾ ಸಮಿತಿಯಿಂದ ಆಯೋಜಿಸಿರುವ ಅಭಿಮಾನಿ ಜಾಗೃತ ರಥಯಾತ್ರೆಗೆ ಬುಧವಾರ ಚಾಲನೆ ನೀಡಲಾಯಿತು.

  ನೂರೊಂದು ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಯಾತ್ರೆಗೆ ಚಾಲನೆ ನೀಡಲಾಯಿತು. ಡಾ.ವಿಷ್ಣು ಸೇನಾ ಸಮಿತಿ ಮತ್ತು ಡಾ.ವಿಷ್ಣುವರ್ಧನ ಅಭಿಮಾನಿಗಳ ಸಂಘಗಳ ಒಕ್ಕೂಟದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪಾಲ್ಗೊಂಡಿರುವ ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಪಾಲ್ಗೊಳ್ಳುವಂತೆ ಮಾಡಲು ಜಾಗೃತಿ ಮೂಡಿಸಲಾಗುತ್ತದೆ. ಯಾತ್ರೆ ಸಿಂಹ ಘರ್ಜನೆ ಎಂಬ ರಥದ ಮೂಲಕ ಜಿಲ್ಲೆಯಾದ್ಯಂತ ಪ್ರವಾಸ ಮಾಡಲಿದ್ದು, 700 ಕಿ.ಮೀ ಸಂಚರಿಸಿ ಎಲ್ಲಾ ಅಭಿಮಾನಿಗಳಿಗೆ ಮನವರಿಕೆ ಮಾಡಿಕೊಡಲಾಗುತ್ತದೆ ಎಂದು ಪ್ರಧಾನ ಕಾರ್ಯದರ್ಶಿ ಎಂ.ಶಿವಕುಮಾರ್ ಹೇಳಿದರು.
  ವಿಷ್ಣುವರ್ಧನ್ ಸ್ಮಾರಕವನ್ನು ಅಭಿಮಾನ್ ಸ್ಟುಡಿಯೋದಲ್ಲಿ ಉಳಿಸುವಂತೆ ಕೋಟ್ಯಾಂತರ ಅಭಿಮಾನಿಗಳ ಬೇಡಿಕೆಯಾಗಿದೆ. ಸರ್ಕಾರ ಈ ವಿಚಾರದಲ್ಲಿ ತೀರ್ಮಾನ ಮಾಡಬೇಕು ಎಂದು ಆಗ್ರಹಿಸಿದರು.

  ಜಿಲ್ಲಾಧ್ಯಕ್ಷ ಲೋಹಿತ್ ಗೌಡ, ಉಪಾಧ್ಯಕ್ಷರಾದ ಬಿ.ಕುಮಾರ, ಜಿ.ಎಸ್.ರಮೇಶ್, ಕಾರ್ಯದರ್ಶಿಗಳಾದ ಎಂ.ಅಂಜನಪ್ಪ, ಎಂ.ಎಸ್.ಚಂದನಕುಮಾರ್, ಖಜಾಂಚಿ ರವಿಹೆಗಡೆ, ಎಂ.ಮಹದೇವಣ್ಣ ಮೊದಲಾದವರು ಹಾಜರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts