More

  ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ: ಹಲವೆಡೆ ಇಂದಿರಾ ಕ್ಯಾಂಟಿನ್​ಗಳಲ್ಲಿ ಹೋಳಿಗೆ ವಿತರಣೆ

  ಹುಬ್ಬಳ್ಳಿ: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಧಾರವಾಡ-ಹುಬ್ಬಳ್ಳಿ ಇಂದಿರಾ ಕ್ಯಾಂಟಿನ್​‌ಗಳಲ್ಲಿ ಹೋಳಿಗೆ ವಿತರಣೆ ಮಾಡಲಾಯಿತು.

  ಡಾ. ಮಯೂರ ಮೋರೆ ಹಾಗೂ ಸಿದ್ದರಾಮಯ್ಯ ಅಭಿಮಾನಿಗಳ ಬಳಗದಿಂದ ಧಾರವಾಡ ಮಿನಿವಿಧಾನಸೌಧ ಆವರಣದಲ್ಲಿರುವ ಇಂದಿರಾ ಕ್ಯಾಂಟಿನ್​ನಲ್ಲಿ ಊಟದ ಜೊತೆಗೆ ಹೋಳಿಗೆ ವಿತರಣೆ ಮಾಡಲಾಯಿತು.

  ಧಾರವಾಡ-ಹುಬ್ಬಳ್ಳಿ ದಕ್ಷಿಣ ಕನ್ನಡ, ಬಾಗಲಕೋಟೆ ಸೇರಿ ಮೂರು ಜಿಲ್ಲೆಗಳ 17 ಕ್ಯಾಂಟಿನ್​ಗಳಲ್ಲಿ ಒಟ್ಟು 9 ಸಾವಿರ ಹೊಳಿಗೆ ವಿತರಣೆ ಮಾಡಲಾಗಿದೆ.

  ಇದನ್ನೂ ಓದಿ: ಗಂಗಾಧರ ಅಜ್ಜನ ಹೆಸರಿನಲ್ಲಿ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್

  ರಾಜ್ಯದೆಲ್ಲೆಡೆ ಸಂಭ್ರಮಾಚರಣೆ

  ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬೀದರ್​ನಿಂದ ಚಾಮರಾಜನಗರದವರೆಗೂ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನೋಡಲು ಬೃಹತ್ ಎಲ್.ಇ.ಡಿ ಪರದೆ ವ್ಯವಸ್ಥೆಯನ್ನು ಸಹ ಮಾಡಲಾಗಿತ್ತು.

  ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಥಾವರ ಚಂದ್​ ಗೆಹ್ಲೋಟ್​ ಅವರು ಸಿದ್ದರಾಮಯ್ಯರಿಗೆ ಪ್ರತಿಜ್ಞಾವಿಧಿ ಭೋದಿಸಿದರು. ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದರು.

  ಪದಗ್ರಹಣ ಸಮಾರಂಭದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು ಸಿಎಂ ಸ್ಟಾಲಿನ್​, ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್, ನಟ ಕಮಲ್​ ಹಾಸನ್​, ನಟ ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ರಾಜೇಂದ್ರ ಸಿಂಗ್​ ಬಾಬು, ದುನಿಯಾ ವಿಜಯ್​, ನಟಿ ರಮ್ಯಾ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದರು.

  ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ

  ಎಂಟು ಮಂದಿ ಶಾಸಕರಿಂದ ಸಚಿವರಾಗಿ ಪ್ರಮಾಣವಚನ ಸ್ವೀಕಾರ

  ಮೂರನೇ ಬಾರಿಗೆ ಎಂ.ಬಿ. ಪಾಟೀಲರಿಗೆ ಮಂತ್ರಿಗಿರಿ

  ರಾಜ್ಯೋತ್ಸವ ರಸಪ್ರಶ್ನೆ - 23

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts