More

    ಪ್ರೇಕ್ಷಕರಲ್ಲಿ ನಿರಾಸೆ ಮೂಡಿಸಿದ ಅನಿಮಲ್​; ಚಿತ್ರತಂಡ ಕೊಟ್ಟ ಸ್ಪಷ್ಟನೆ ಹೀಗಿದೆ

    ಮುಂಬೈ: ಬಾಲಿವುಡ್​ ನಟ ರಣಬೀರ್​ ಕಪೂರ್​ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಅನಿಮಲ್​​ ಚಿತ್ರವು ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆನ ನಡುವೆಯೂ ಗಲ್ಲಾಪೆಟ್ಟಿಗೆಯಲ್ಲಿ ಕೋಟ್ಯಂತರ ರೂಪಾಯಿ ಬಾಚುವ ಮೂಲಕ ನಿರ್ಮಾಪಕರ ಮುಖದಲ್ಲಿ ಮಂದಹಾಸ ಮೂಡಿಸಿತ್ತು. ಈ ಚಿತ್ರ ಇದೀಗ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು, ಮತ್ತೊಮ್ಮೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ.

    ಕಳೆದ ವರ್ಷ ಡಿಸೆಂಬರ್​ 01ರಂದು ಬಿಡುಗಡೆಯಾಗಿ ಬಾಕ್ಸ್​ ಆಫೀಶ್​ನಲ್ಲಿ ಧೂಳೆಬ್ಬಿಸಿದ್ದ ಅನಿಮಲ್​ ಚಿತ್ರವು ಜನವರಿ 26ರಂದು ಒಟಿಟಿಯಲ್ಲಿ ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಭಾರೀ ನಿರಾಸೆಯನ್ನುಂಟು ಮಾಡಿದೆ. ಈ ಬಗ್ಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕುತ್ತಿದ್ದಾರೆ. ಅಭಿಮಾನಿಗಳ ನಿರಾಸೆಗೆ ಸ್ಪಷ್ಟ ಕಾರಣ ದೊರೆತ್ತಿದ್ದು, ಈ ಬಗ್ಗೆ ಚಿತ್ರತಂಡ ಸ್ಪಷ್ಟನೆ ನೀಡಿದೆ.

    ಅನಿಮಲ್​ ಸಿನಿಮಾ ಲಭ್ಯವಾಗಿದೆ. ಆದರೆ ಒಟಿಟಿಯಲ್ಲಿ ಈ ಸಿನಿಮಾ ನೋಡಿದ ಕೆಲವರಿಗೆ ಬೇಸರ ಆಗಿದೆ. ಅದಕ್ಕೆ ಕಾರಣವೂ ಸ್ಪಷ್ಟವಾಗಿದೆ. ಥಿಯೇಟರ್​ ವರ್ಷನ್​ನಲ್ಲಿ ಡಿಲಿಟ್​ ಆಗಿದ್ದ ದೃಶ್ಯಗಳು ಕೂಡ ಒಟಿಟಿ ವರ್ಷನ್​ನಲ್ಲಿ ಇರಲಿದೆ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ, ಚಿತ್ರತಂಡದವರು ಅಭಿಮಾನಿಗಳ ನಿರೀಕ್ಷೆಯನ್ನು ಹುಸಿ ಮಾಡಿದ್ದು, ಒಟಿಟಿಯಲ್ಲಿ ಈ ಚಿತ್ರವನ್ನು ನೋಡಿದ ಬಳಿಕ ಒಂದು ವರ್ಗದ ಪ್ರೇಕ್ಷಕರು ಅಸಮಾಧಾನ ಹೊರಹಾಕಿದ್ದಾರೆ.\

    Animal Film

    ಇದನ್ನೂ ಓದಿ: ವೈದ್ಯರ ಕೈಬರಹ ಅಷ್ಟು ಸುಲಭವಾಗಿ ಅರ್ಥವಾಗುವುದಿಲ್ಲ ಯಾಕೆ ಗೊತ್ತಾ?; ಕಾರಣ ಹೀಗಿದೆ

    ನೆಟ್​ಫ್ಲಿಕ್ಸ್​ ಒಟಿಟಿಯಲ್ಲಿ ಅನಿಮಲ್​ ಸಿನಿಮಾ ಬಿಡುಗಡೆ ಆದಾಗ ಪ್ರೇಕ್ಷಕರು ಮೊದಲು ಚಿತ್ರದ ಅವಧಿಯನ್ನು ಗಮನಿಸಿದ್ದಾರೆ. ಚಿತ್ರಮಂದಿರದಲ್ಲಿ ಇದ್ದ ರೀತಿಯೇ 3 ಗಂಟೆ 24 ನಿಮಿಷ ಅವಧಿಯ ಸಿನಿಮಾವನ್ನೇ ಒಟಿಟಿಯಲ್ಲೂ ರಿಲೀಸ್​ ಮಾಡಲಾಗಿದೆ. ಯಾವುದೇ ಡಿಲಿಟೆಡ್​ ಸೀನ್​ಗಳು ಕೂಡ ಇದರಲ್ಲಿ ಸೇರಿಸಿಲ್ಲ. ಹಾಗಾಗಿ ಪ್ರೇಕ್ಷಕರಿಗೆ ನಿರಾಸೆ ಆಗಿದ್ದು ಚಿತ್ರತಂಡದ ವಿರುದ್ಧ ಒಂದು ವರ್ಗದ ಪ್ರೇಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇತ್ತ ಅಭಿಮಾನಿಗಳು ಆಕ್ರೋಶ ಹೊರಹಾಕಿದ ಬೆನ್ನಲ್ಲೇ ಎಚ್ಚೆತ್ತಿರುವ ಚಿತ್ರತಂಡ ಡಿಲಿಟೆಡ್​ ಸೀನ್​ಗಳನ್ನು ಒಳಗೊಂಡ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದೆ. ಈಗಿರುವ ಅವಧಿಗೆ 8 ನಿಮಿಷಗಳನ್ನು ಸೇರಿಸಲಾಗುವುದು ಎಂದು ಚಿತ್ರತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts