ಭಾರತದ ಗೆಲುವಿಗೆ ದೇಶಾದ್ಯಂತ ಮುಗಿಲುಮುಟ್ಟಿದ ಸಂಭ್ರಮಾಚರಣೆ; ಪ್ರಧಾನಿ ಮೋದಿ ಸೇರಿ ಹಲವು ಗಣ್ಯರಿಂದ ಶುಭ ಹಾರೈಕೆ

Celebrations
Published on

ನವದೆಹಲಿ: ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ಪ್ರಾಬಲ್ಯ ಮುಂದುವರೆದಿದ್ದು, 8ನೇ ಬಾರಿಗೆ ಪಾಕಿಸ್ತಾನ ಭಾರತದ ಎದುರು ಮಂಡಿಯೂರಿದೆ. ಬದ್ದವೈರಿ ಪಾಕಿಸ್ತಾನ ವಿರುದ್ಧ ಭಾರತ ಗೆದ್ದ ಬೆನ್ನಲ್ಲೇ ದೇಶಾದ್ಯ.ತ ಸಂಭ್ರಮಾಚರಣೆ ಮುಗಿಲುಮುಟ್ಟಿದ್ದು, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದ್ದಾರೆ.

ಭಾರತ ಪಾಕಿಸ್ತಾನದ ವಿರುದ್ಧ 7 ವಿಕೆಟ್​ಗಳ ಭರ್ಜರಿ ಜಯ ದಾಖಲಿಸುತ್ತಿದ್ದಂತೆ ಕಾಶ್ಮೀರದಿಂದ-ಕನ್ಯಾಕುಮಾರಿಯವರೆಗೆ ಸಂಭ್ರಮಾಚರಣೆ ಮುಗಿಲುಮುಟ್ಟಿದ್ದು, ಕ್ರೀಡಾಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಟೀಂ ಇಂಡಿಯಾ ಗೆಲುವಿನ ಬೆನ್ನಲ್ಲೇ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಶುಭಕೋರಿರುವ ಪ್ರಧಾನಿ ಮೋದಿ, ಅಹಮದಬಾದಿನಲ್ಲಿ ಇಂದು ಟೀಂ ಇಂಡಿಯಾ ಅಮೋಘ ಗೆಲುವು ಸಾಧಿಸಿದೆ. ಆಲ್​ರೌಂಡ್​ ಆಟದಿಂದಾಗಿ ಟೀಮ್ ಇಂಡಿಯಾ ಗೆದ್ದಿದೆ. ಮುಂದಿನ ಪಂದ್ಯಗಳಿಗೆ ಶುಭಾಶಯ ಎಂದು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಶುಭ ಹಾರೈಸಿದ್ಧಾರೆ.

ಭಾರತ ಗೆಲುವನ್ನು ಕೇಂದ್ರದ ಬಹುತೇಕ ಸಚಿವರು ಕೊಂಡಾಡಿದ್ದಾರೆ. ಇದೇ ವೇಳೆ ಕ್ರೀಡಾಂಗಣದಲ್ಲಿ ಭಾರತ್, ವಂದೇ ಮಾತರಂ, ಜೈಹೋ ಘೋಷಣೆಗಳ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಕೇಂದ್ರ ಸಚಿವ ಅಮಿತ್​ ಷಾ, ಪ್ರಲ್ಹಾದ್ ಜೋಶಿ, ಪಿಯೂಷ್ ಗೋಯೆಲ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಗಲವರು ಟೀಂ ಇಂಡಿಯಾಗೆ ಶುಭಾಶಯ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net