22.5 C
Bengaluru
Sunday, January 19, 2020

ಧೋನಿಗೆ 9ನೇ ವಿವಾಹ ವಾರ್ಷಿಕೋತ್ಸವ ಸಂಭ್ರಮ: ಕ್ರಿಕೆಟ್​ ಸಂಜೆಯಲ್ಲಿರುವ ಆಟಗಾರನಿಗೆ ಅಭಿನಂದನೆಗಳ ಮಹಾಪೂರ

Latest News

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ನೇತ್ರಾವತಿ ನದಿಯಲ್ಲಿ ದೋಣಿ ಮಗುಚಿ ಯುವತಿ ಸಾವು: ಐವರ ರಕ್ಷಣೆ, ಓರ್ವಳ ಸ್ಥಿತಿ ಗಂಭೀರ

ಮಂಗಳೂರು: ದೋಣಿ ದುರಂತದಲ್ಲಿ ಓರ್ವ ಯುವತಿ ನೀರುಪಾಲಾಗಿರುವ ಘಟನೆ ಭಾನುವಾರ ಸಂಜೆ ಉಳ್ಳಾಲ ಬಳಿಯ ನೇತ್ರಾವತಿ ನದಿಯಲ್ಲಿ ಸಂಭವಿಸಿದೆ. ಐವರು ಯುವತಿಯರನ್ನು ರಕ್ಷಿಸಲಾಗಿದ್ದು,...

ಲಂಡನ್​: ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ ಮತ್ತು ಸಾಕ್ಷಿ 9ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಮಿಂದೇಳುತ್ತಿದ್ದಾರೆ. ಕ್ರಿಕೆಟ್​ ಸಂಜೆಯಲ್ಲಿರುವ ತಮ್ಮ ಪ್ರೀತಿಯ ಆಟಗಾರನ ಸಂಭ್ರಮದಲ್ಲಿ ಭಾಗಿಯಾಗಿರುವ ಧೋನಿ ಅವರ ಅಭಿಮಾನಿಗಳು ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆಗಳ ಮಹಾಪೂರವನ್ನೇ ಹರಿಸಿದ್ದಾರೆ.

ಕೋಲ್ಕತದ ಐಷಾರಮಿ ಹೋಟೆಲ್​ನಲ್ಲಿ ಉದ್ಯೋಗ ತರಬೇತಿಯಲ್ಲಿದ್ದ ಸಂದರ್ಭದಲ್ಲಿ ಸಾಕ್ಷಿ ಅವರನ್ನು ಆಕಸ್ಮಿಕವಾಗಿ ಭೇಟಿಯಾಗುವ ಮಹೇಂದ್ರ ಸಿಂಗ್​ ಧೋನಿ, ಅವರನ್ನು ಪ್ರೀತಿಸಲಾರಂಭಿಸುತ್ತಾರೆ. 2010ರಲ್ಲಿ ಅವರನ್ನೇ ಮದುವೆಯಾಗುತ್ತಾರೆ. ಇದಾಗಿ ಒಂದು ವರ್ಷದಲ್ಲಿ ಅಂದರೆ 2011ರಲ್ಲಿ ಭಾರತಕ್ಕೆ 2ನೇ ಕ್ರಿಕೆಟ್​ ವಿಶ್ವಕಪ್​ ಪ್ರಶಸ್ತಿಯನ್ನು ಗೆದ್ದುಕೊಡುತ್ತಾರೆ.

ಧೋನಿ ಭಾರತ ಕ್ರಿಕೆಟ್​ರ ತಂಡ ಕಂಡ ಅತ್ಯಂತ ಯಶಸ್ವಿ ನಾಯಕ. ಅದರಂತೆ, ಧೋನಿ ಅವರ ಕ್ರಿಕೆಟ್​ ಬದುಕನ್ನು ಸಮರ್ಥವಾಗಿ ಕಟ್ಟಿಕೊಡುವಲ್ಲಿ ಸಾಕ್ಷಿ ಸಾಕಷ್ಟು ನೆರವಾಗಿದ್ದಾರೆ. ಇದನ್ನು ಸದಾ ನೆನಪಿಸಿಕೊಳ್ಳುವ ಧೋನಿ, ತಮ್ಮ ಕ್ರಿಕೆಟ್​ ಬದುಕನ್ನು ಕಟ್ಟಿಕೊಳ್ಳಲು ನೆರವಾದ ಸಾಕ್ಷಿ ಅವರಿಗೆ ಅವಕಾಶ ಸಿಕ್ಕಾಗಲೆಲ್ಲ ಧನ್ಯವಾದಗಳನ್ನು ಅರ್ಪಿಸುತ್ತಲೇ ಇರುತ್ತಾರೆ. ಇವರಿಬ್ಬರ ಸುಖ ದಾಂಪತ್ಯದ ಕುರುಹುವಾಗಿ ಜೀವಾ ಜನಿಸಿದ್ದಾಳೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...